ವಾಡಿ: ಪ್ರಸಕ್ತ ಸಾಲಿನ ಪದವಿ, ಸ್ನಾತಕೋತ್ತರ, ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸದೆ ಮುಂದಿನ ಸೆಮಿಸ್ಟರ್‍ನ ಆನ್‍ಲೈನ್ ತರಗತಿಗಳನ್ನು ನಡೆಸುತ್ತಿರುವುದು ಅಪ್ಪಟ ಅವೈಜ್ಞಾನಿಕವಾಗಿದ್ದು, ಇದು ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ಮಾರಕವಾಗಿದೆ.
ಸೋಂಕಿನ ಭೀಕರ ಸಂದರ್ಭದಲ್ಲಿ ಪರೀಕ್ಷೆಗಳನ್ನು ನಡೆಸದೆ, ಶಿಕ್ಷಣ ತಜ್ಞರು ಮತ್ತು ವಿದ್ಯಾರ್ಥಿಗಳ ಅಭಿಪ್ರಾಯಗಳೊಂದಿಗೆ ವೈಜ್ಞಾನಿಕ ಮೌಲ್ಯಮಾಪನ ಪದ್ಧತಿಯನ್ನು ರಚಿಸಬೇಕು ಎಂದು ಆಲ್ ಇಂಡಿಯಾ ಡೆಮಾಕ್ರೇಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್‍ಒ) ಆಗ್ರಹಿಸಿದೆ.
ಅವೈಜ್ಞಾನಿಕ ಶೈಕ್ಷಣಿಕ ನೀತಿಗಳನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳಿಗಾಗಿ ಆಗ್ರಹಿಸಿ ಎಐಡಿಎಸ್‍ಒ ಕರೆ ನೀಡಿದ್ದ ಅಖಿಲ ಕರ್ನಾಟಕ ಆನ್‍ಲೈನ್ ಪ್ರತಿಭಟನಾ ದಿನದ ಅಂಗವಾಗಿ ಪಟ್ಟಣದಲ್ಲೂ ವಿದ್ಯಾರ್ಥಿ ನಾಯಕರು ಪ್ರತಿಭಟನೆ ನಡೆಸಿದರು. ಇಡೀ ದೇಶ ಸಂದಿಗ್ಧ ಪರಿಸ್ಥಿತಿ ಎದುರಿಸುತ್ತಿರುವಾಗ ಪ್ರಸ್ತುತ ಸರ್ಕಾರಗಳು ಕೈಗೆತ್ತಿಕೊಳ್ಳುತ್ತಿರುವ ವಿವಿಧ ಕ್ರಮಗಳು ಮತ್ತು ನೀತಿಗಳು ಮತ್ತಷ್ಟು ಜನರ ಬದುಕನ್ನು ದುರ್ಬರಗೊಳಿಸುತ್ತಿವೆ.
ವಿದ್ಯಾರ್ಥಿ ಯುವಜನರು ಮುಂದಿನ ದೇಶದ ಭವಿಷ್ಯ ಎಂದು ಭಾಷಣ ಬಿಗಿಯುವ ಸರ್ಕಾರ ಮತ್ತು ಅದರ ಪ್ರತಿನಿಧಿಗಳು ಇಂದು ವಿದ್ಯಾರ್ಥಿಗಳ ಜೀವನ ಮತ್ತು ಶೈಕ್ಷಣಿಕ ಬದುಕಿನ ಮೇಲೆ ಕಿಂಚಿತ್ತು ಕಾಳಜಿ ಇಲ್ಲದಂತೆ ವರ್ತಿಸುತ್ತ್ತಿವೆ ಎಂದು ಎಐಡಿಎಸ್‍ಒ ನಗರ ಸಮಿತಿ ಅಧ್ಯಕ್ಷ ಗೌತಮ ಪರತೂರಕರ ಹಾಗೂ ಕಾರ್ಯದರ್ಶಿ ವೆಂಕಟೇಶ ದೇವದುರ್ಗ ಆರೋಪಿಸಿದರು.
ಪ್ರಸ್ತುತ ಕೋವಿಡ್-19 ಎರಡನೇ ಅಲೆಯು ಇಡೀ ದೇಶದಲ್ಲಿ ಅಪ್ಪಳಿಸಿದ್ದು ಎಲ್ಲಡೆ ಭೀಕರ ಸಾವು ನೋವು ಸಂಭವಿಸುತ್ತಿವೆ. ಜೀವನದ ಮೇಲಿನ ಹತಾಶೆ ಸಮಾಜದಲ್ಲಿ ಮನೆಮಾಡಿದೆ. ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳ ಸಂಖ್ಯೆ ಒಂದೆಡೆಯಾದರೆ, ಕೋವಿಡ್ ಸೋಂಕಿತರ ಚಿಕಿತ್ಸೆಗೆ ಬೇಕಾಗಿರುವ ಆಮ್ಲಜನಕದ ಸಿಲೆಂಡರ್‍ಗಳು, ಐಸಿಯು, ವೆಂಟಿಲೇಟರ್, ಹಾಸಿಗೆಗಳ ಸಮರ್ಪಕ ಪೂರೈಕೆ ಇಲ್ಲದಿರುವುದು ಮತ್ತು ವೈದ್ಯರು ಆರೋಗ್ಯ ಸಿಬ್ಬಂದಿಗಳ ಹಾಗೂ ಕೋವಿಡ್ ಸೆಂಟರ್‍ಗಳ ಕೊರತೆಯಿಂದ ಅಮಾಯಕ ಸೋಂಕಿತರು ಸಾವಿಗೀಡಾಗುತ್ತಿರುವ ದುರಂತ ಪರಿಸ್ಥಿತಿಗೆ ನಾವೆಲ್ಲ ಸಾಕ್ಷಿಯಾಗುತ್ತಿದ್ದೇವೆ ಎಂದು ವಿಷಾಧಿಸಿದರು.
ಕೋರೋನ ಮಹಾಮಾರಿಯ ಭೀಕರ ಸಂದರ್ಭದಲ್ಲಿ ಪರೀಕ್ಷೆಗಳನ್ನು ನಡೆಸದೆ ಶಿಕ್ಷಣ ತಜ್ಞರು, ಶಿಕ್ಷಕರು, ವಿದ್ಯಾರ್ಥಿಗಳ ಅಭಿಪ್ರಾಯದೊಂದಿಗೆ ವೈಜ್ಞಾನಿಕ ಮೌಲ್ಯಮಾಪನ ಪದ್ಧತಿಯನ್ನು ರಚಿಸಬೇಕು. ಲಾಕ್‍ಡೌನ್ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಬಿಸಿಯೂಟಕ್ಕೆ ಸಮನಾದ ಪಡಿತರ ಕಿಟ್ ವಿತರಿಸಬೇಕು. ಬಸ್ ಪಾಸ್, ಹಾಸ್ಟೆಲ್ ಶುಲ್ಕ ಮತ್ತು ಕಾಲೇಜು ಶುಲ್ಕದ ವೆಚ್ಚಗಳನ್ನು ಭರಿಸಲು ವಿದ್ಯಾರ್ಥಿಗಳಿಗೆ ಆರ್ಥಿಕ ಪ್ಯಾಕೇಜ್ ಘೋಷಿಸಬೇಕು ಎಂದು ಸರಕಾರವನ್ನು ಒತ್ತಾಯಿಸಿದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…