ಪಶು ವೈದ್ಯರು ಸಿಬ್ಬಂದಿಗಳನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಲು ಶಾಸಕ ಪ್ರಿಯಾಂಕ್ ಖರ್ಗೆ ಪತ್ರ

ಕಲಬುರಗಿ: ಪಶು ವೈದ್ಯರನ್ನು ಹಾಗೂ ಪಶು ಆಸ್ಪತ್ರೆಗಳ ಇತರೆ ಸಿಬ್ಬಂದಿಗಳನ್ನು ಕೊರೋನಾ ವಾರಿಯರ್ಸ್ ಎಂದು ಘೋಷಿಸಿ ಆರೋಗ್ಯ ಸೌಲಭ್ಯಗಳನ್ನು ವಿಸ್ತರಿಸುವಂತೆ ಸರ್ಕಾರಕ್ಕೆ ಮಾಜಿ ಸಚಿವರಾದ, ಶಾಸಕರಾದ ಹಾಗೂ ಕೆಪಿಸಿಸಿ ವಕ್ತಾರರಾದ, ಶಾಸಕರಾದ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ.

ಈ‌ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹಾಗೂ ಪಶುಸಂಗೋಪನೆ ಸಚಿವರಾದ ಪ್ರಭು ಚವ್ಹಾಣ್ ಅವರಿಗೆ ಪತ್ರ ಬರೆದಿರುವ ಅವರು ಕೊರೋನಾ ಭೀತಿಯ ನಡುವೆಯೂ ಗ್ರಾಮಗಳಲ್ಲಿ ರೈತರ ಮನೆ ಮನೆಗೆ ಭೇಟಿ ನೀಡಿ ಹಸು, ಎಮ್ಮೆ, ಕುರಿ, ಮೇಕೆ ಸೇರಿದಂತೆ ಇತರೆ ಜಾನುವಾರುಗಳಿಗೆ ಪಶು ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಇವರ ಜೊತೆಗೆ ಪಶು ಆಸ್ಪತ್ರೆಗಳ ಇತರೆ ಸಿಬ್ಬಂದಿಗಳೂ ಕೂಡಾ‌ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ರೀತಿ ಕರ್ತವ್ಯದಲ್ಲಿರುವಾಗಲೇ 60 ಕ್ಕೂ ಅಧಿಕ‌ ವೈದ್ಯರು ಹಾಗೂ ಸಿಬ್ಬಂದಿಗಳಿಗೆ ಕೊರೋನಾ ಸೋಂಕು ತಗುಲಿದ್ದು, 8 ಕ್ಕೂ ಅಧಿಕ‌ ನೌಕರರು ಸೋಂಕಿಗೆ ಬಲಿಯಾಗಿದ್ದಾರೆ. ಆದರೂ ಕೂಡಾ ಸರ್ಕಾರ ಇವರನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಿರುವುದಿಲ್ಲ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ರಾಜ್ಯದ ಗ್ರಾಮೀಣ ಪ್ರದೇಶದ ಜನತೆ ತಮ್ಮ ಜೀವನೋಪಾಯಕ್ಕಾಗಿ ವ್ಯವಸಾಯದ ಜೊತೆಗೆ ಪಶುಪಾಲನೆಯನ್ನೂ ಕೂಡಾ ಅವಲಂಬಿಸಿದ್ದಾರೆ. ಗ್ರಾಮೀಣ ಭಾಗದ ರೈತರ ಆರ್ಥಿಕಾಭಿವೃದ್ದಿಯಲ್ಲಿ ಜಾನುವಾರುಗಳು ಅತಿ ಹೆಚ್ಚಿನ ಪ್ರಾಮುಖ್ಯತೆ ಪಡೆದುಕೊಂಡಿವೆ. ಪಶು ವೈದ್ಯರು ಹಾಗೂ ಇತರೆ‌ ಸಿಬ್ಬಂದಿಗಳು ಜಾನುವಾರುಗಳ ಆರೋಗ್ಯ ರಕ್ಷಣೆ ಮಾಡುವ ಮೂಲಕ ರೈತರ ಜೀವನ‌ ಮಟ್ಟವನ್ನು ಸುಧಾರಿಸಲು ಹಾಗೂ ರಾಜ್ಯದ ಪಶು ಸಂಪತ್ತನ್ನು ಕಾಪಾಡುತ್ತಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಮಳೆ ಪ್ರಾರಂಭವಾಗಿದ್ದು ರೈತರು ಕೃಷಿ‌ ಚಟುವಟಿಕೆ ಪ್ರಾರಂಭಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಜಾನುವಾರುಗಳ ಆರೋಗ್ಯ ರಕ್ಷಣೆ ಮಾಡುವುದರಲ್ಲಿ ಪಶು ವೈದ್ಯರು ಹಾಗೂ ಇತರೆ ಸಿಬ್ಬಂದಿ‌ ಕಾರಣೀಭೂತರಾಗಿರುತ್ತಾರೆ.

ಆದ್ದರಿಂದ ಪಶು ವೈದ್ಯರು ಹಾಗೂ ಪಶು ಆಸ್ಪತ್ರೆಗಳ ಇತರೆ ಸಿಬ್ಬಂದಿಗಳನ್ನು ಕೂಡಾ ಕೊರೋನಾ ವಾರಿಯರ್ಸ್ ಗಳೆಂದು ಪರಿಗಣಿಸಿ ಅವರಿಗೆ ಆದ್ಯತೆಯ ಮೇಲೆ ಲಸಿಕೆ‌ ನೀಡುವುದರ ಜೊತೆಗೆ ಅವರುಗಳಿಗೆ ಅಗತ್ಯ ಆರೋಗ್ಯ ರಕ್ಷಣಾ ಸಾಮಗ್ರಿಗಳನ್ನು ಒದಗಿಸಬೇಕು. ಪ್ರಮುಖವಾಗಿ ಪಶು ವೈದ್ಯರು ಹಾಗೂ ಇತರೆ ಸಿಬ್ಬಂದಿಗಳಿಗೆ ಒಂದು ವೇಳೆ ಕೊರೋನಾ ಸೋಂಕು ತಗುಲಿದರೆ ಅವರ ಸಂಪೂರ್ಣ ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸಲು ಕ್ರಮ ಕೈಗೊಳ್ಳಬೇಕೆಂದು ಪ್ರಿಯಾಂಕ್ ಅವರು ತಾವು ಬರೆದ ಪತ್ರದಲ್ಲಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

emedialine

Recent Posts

ಪತ್ರಕರ್ತ ಮಣೂರರಿಗೆ ಟಿಎಸ್‍ಆರ್ ಪ್ರಶಸ್ತಿ ಪ್ರದಾನ

ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…

4 mins ago

ನವರಾತ್ರಿ ಮಹೋತ್ಸವದ ನಿಮಿತ್ತ ದೇವಿ ಪೂಜಾ ಕಾರ್ಯಕ್ರಮ

ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…

8 mins ago

ಶ್ರೀ ಭವಾನಿ 1ನೇ ದಿನದ ಪುರಾಣ, ಕಳಸ ರೋಹಣ

ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…

13 mins ago

ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ್ಲ –ಮುದ್ದಾ

ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…

17 mins ago

ಅಹಿಂಸೆಯ ದಾರಿಯಲ್ಲಿ ನಡೆದಾಗ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ

ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…

22 mins ago

ನಾನು ಆಕಾಂಕ್ಷಿ ಅಧ್ಯಕ್ಷ ಸ್ಥಾನ ಸಿಗುವ ವಿಶ್ವಾಸವಿದೆ; ಕೋರವಿ

ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420