ವೀರಶೈವ ಲಿಂಗಾಯತ ಧಾರ್ಮಿಕ ಪುರೋಹಿತರಿಗೆ ವಿಶೇಷ ಪ್ಯಾಕೇಜ್ ಘೋಷಣೆಗೆ ಆಗ್ರಹ

ಕಲಬರುಗಿ: ರಾಜ್ಯದಲ್ಲಿರುವ ಮಠ ಮಂದಿರಗಳ ಖಾಸಗಿ ದೇವಾಲಯದಲ್ಲಿ ಪೂಜೆ ಮಾಡುವ ವೀರಶೈವ ಲಿಂಗಾಯತ ಧರ್ಮದ ಜಂಗಮ ಅರ್ಚಕರಿಗೆ ಹಾಗೂ ಪುರೋಹಿತರಿಗೆ ಜ್ಯೋತಿಷ್ಯಗಳಿಗೆ ಮತ್ತು ಆಗಮಿಕರಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸುವಂತೆ ರಾಜ್ಯದ ಮುಖ್ಯಮಂತ್ರಿಗಳಾದ ಬಿ ಎಸ್ ಯುಡಿಯೂರಪ್ಪನವರಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಕಲಬರುಗಿ ಜಿಲ್ಲಾ ಘಟಕದ ಕಾರ್ಯಕಾರಿ ಸಮಿತಿಯ ಸದಸ್ಯರಾದ ನಾಗಲಿಂಗಯ್ಯ ಮಠಪತಿ ಮನವಿ ಮಾಡಿದ್ದಾರೆ

ಈಗಾಗಲೇ ರಾಜ್ಯ ಸರ್ಕಾರ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳ ಅರ್ಚಕರಿಗೆ ಮೂರು ತಿಂಗಳ ತಸ್ತೀಕ್ ಬಿಡುಗಡೆ ಮಾಡಿದ್ದು ಖಾಸಗಿಯಾಗಿ ದೇವಾಲಯದಲ್ಲಿ ಪೂಜೆ ಮಾಡುವ ನಾಡಿನ ಹತ್ತಾರು ಸಾವಿರ ಅರ್ಚಕರ ಇದರಿಂದ ವಂಚಿತರಾಗುತ್ತಿದ್ದು ಇದಕ್ಕಾಗಿ ವಿಶೇಷ ಪ್ಯಾಕೇಜ್ ನೀಡುವ ಮೂಲಕ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಆಸರೆಯಾಗುವಂತೆ ಮಠಪತಿ ವಿನಂತಿಸಿದ್ದಾರೆ

ನಾಡಿನ ಜನ ಮನದಲ್ಲಿ ಸಂಸ್ಕೃತಿ ಸಂಸ್ಕಾರ ಬಿತ್ತುವ ಮೂಲಕ ಪುರದ ಹಿತವನ್ನೇ ತಮ್ಮ ಕಾಯಕವಾಗಿಸಿಕೊಂಡು ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಅರ್ಚಕರು.ಆಗಮಿಕರು. ಪುರೋಹಿತರ ಬದುಕು ಇಂದು ಸಂಕಷ್ಟದಲ್ಲಿ ಸಿಲುಕಿದ್ದು ಅನೇಕ ಕುಟುಂಬಗಳು ಒಂದು ಹೊತ್ತಿನ ಊಟಕ್ಕೆ ಪರದಾಡುತ್ತಿದ್ದಾರೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ

ಕಳೆದ ವರ್ಷ ಸಹ ಸರ್ಕಾರ ಧಾರ್ಮಿಕ ಇಲಾಖೆಯಲ್ಲಿ ಬರುವ ದೇವಾಲಯಗಳ ಅರ್ಚಕರಿಗೆ ಮಾತ್ರ ಧನ ಸಹಾಯ ಮಾಡಲಾಗಿತ್ತು ಈ ಬಾರಿಯ ಸಹ ಆದೇ ರೀತಿ ಮಾಡಿದ್ದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಮಠಪತಿ ಅವರು ರಾಜ್ಯದಲ್ಲಿ ಲಾಕ್ ಡೌನ್ ಹಿನ್ನೆಲೆಯಲ್ಲಿ ಧಾರ್ಮಿಕ ಕ್ಷೇತ್ರಗಳು ಬಂದ್ ಆಗಿದ್ದು ಇದರ ಪರಿಣಾಮ ಅರ್ಚಕರ ಬದುಕು ಕಷ್ಟ ಸಾಧ್ಯವಾಗಿದ್ದು ಇದರ ಜೊತೆಗೆ ಮದುವೆ ಗೃಹ ಪ್ರವೇಶ ಸೇರಿದಂತೆ ಮಂಗಳ ಕಾರ್ಯಗಳು ಸಹ ಸಂಕ್ಷಿಪ್ತವಾಗಿ ನೇರವೇರಿಸುತ್ತಿರುವ ಹಿನ್ನೆಲೆಯಲ್ಲಿ ಧಾರ್ಮಿಕ ಪೂಜಾ ಕೈಂಕರ್ಯಗಳನ್ನೇ ನಂಬಿಕೊಂಡು ಜೀವನ ಸಾಗಿಸುವ ಬಡ ಪುರೋಹಿತರ ಜೀವನ ಇಂದು ಸಮ್ಯಸೆಯ ಸುಳಿಯಲ್ಲಿ ಸಿಲುಕಿದ್ದು ಕೂಡಲೇ ತಾವುಗಳು ನೆರವು ನೀಡುವ ಮೂಲಕ ಸಹಕಾರಿಯಾಗುವಂತೆ ಮುಖ್ಯಮಂತ್ರಿಗಳಲ್ಲಿ ಮಠಪತಿ ಅವರು ಕೋರಿದ್ದಾರೆ

ಪ್ಯಾಕೇಜ್ ಜೊತೆಗೆ ರಾಜ್ಯದಲ್ಲಿರುವ ವೀರಶೈವ ಲಿಂಗಾಯತ ಜಂಗಮ ಪುರೋಹಿತ ಅರ್ಚಕರಿಗೆ ಹಾಗೂ ಆಗಮಿಕರಿಗೆ ಮತ್ತು ಜ್ಯೋತಿಷ್ಯಿಗಳಿಗೆ ಆಹಾರ ಕಿಟ್ ವಿತರಣೆ ಮಾಡಬೇಕು ಕೂರೋನಾ ರೋಗಕ್ಕೆ ಬಲಿಯಾಗಿರುವವರ ಕುಟುಂಬಕ್ಕೆ ಧನ ಸಹಾಯ ಮಾಡುವಂತಿ ಮನವಿ ಮಾಡಿದ್ದಾರೆ.

emedialine

Recent Posts

ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಪಟ್ಟಣದ ವಾರ್ಡ್ ಸಂಖ್ಯೆ12 ರಲ್ಲಿ ಸಿ.ಸಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಪುರಸಭೆ ಮಾಜಿ ಅಧ್ಯಕ್ಷ,…

10 hours ago

ಭ್ರಷ್ಟಾಚಾರ ರಹಿತ ವಿವಿಗೆ ಆದ್ಯತೆ: ರಾಘವೇಂದ್ರ ಭೈರಪ್ಪ

ಕಲಬುರಗಿ: ವಿಶ್ವವಿದ್ಯಾಲಯದಲ್ಲಿ ನಡೆಯುವ ಪ್ರತಿಯೊಂದು ಕಾರ್ಯವು ಕೂಡ ಭ್ರಷ್ಟಾಚಾರ ರಹಿತವಾಗಿರಬೇಕು ಎನ್ನುವ ಮನೋಭಾವ ಹೊಂದಿ ಕೆಲಸ ಮಾಡುತ್ತಿದ್ದೇನೆ ಎಂದು ಗುಲಬರ್ಗಾ…

10 hours ago

ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

ಕಲಬುರಗಿ: ಸ್ವಸ್ತಿಕ ನಗರದ ಅಮರಾವತಿ ಅಪಾಟೆರ್ಂಟ್ ನಿವಾಸಿಗಳಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಜರುಗಿತು. ನಮ್ಮ ದೇಶದ ಪ್ರಧಾನಮಂತ್ರಿ ಅವರ ಸ್ವಚ್ಛ…

10 hours ago

ಸಚಿವ ಸಂಪುಟ ಸಭೆಯಲ್ಲಿ ವಿವಿಧ ಬೇಡಿಕೆ ಈಡೇರಿಕ್ಕೆಗೆ ಆಗ್ರಹ

ಕಲಬುರಗಿ:ಸಚಿವ ಸಂಪುಟ ಸಭೆಯಲ್ಲಿ ಮುಖ್ಯವಾಗಿ ರಾಜ್ಯ ಸರಕಾರದ ವತಿಯಿಂದ ಕಲಬುರಗಿಯಲ್ಲಿ ತೊಗರಿ ಪಾರ್ಕ ಸ್ಥಾಪಿಸಬೇಕು, ಕಲಬುರಗಿ ಅಭಿವೃದ್ದಿ ಮಂಡಳಿಯನ್ನು ಕೆ.ಎಂ.ಎಫ್…

10 hours ago

ಸೇಡಂ: ನೀರಿನಲ್ಲಿ ಮುಳುಗಿ ಮೃತ ಕುಟುಂಬಕ್ಕೆ ಸರ್ಕಾರದಿಂದ 3 ಎಕ್ಕರೆ ಜಮೀನು ನೀಡಿ

ಕಲಬುರಗಿ: ಸೇಡಂ ತಾಲೂಕಿನ ಕುರುಗುಂಟ ಗ್ರಾಮದ  ರಾಜು ನಾಮವಾರ್ ಸಂಗಾವಿ ಹೊಳೆಯಲ್ಲಿ ಮುಳಗಿ ಸಾವನ್ನಪ್ಪಿದ ಮೃತರ ಕುಟುಂಬಕ್ಕೆ 3 ಎಕ್ಕರೆ …

11 hours ago

ಟಿಎಪಿಸಿಎಂ ಅಧ್ಯಕ್ಷರಾಗಿ ಪಾಟೀಲ್ ಅವಿರೋಧ ಆಯ್ಕೆ

ಕಲಬುರಗಿ: ಸಹಕಾರಿ ಕ್ಷೇತ್ರದ ಇಲ್ಲಿನ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ (ಟಿಎಪಿಸಿಎಂ) ಸಂಘದ ಅಧ್ಯಕ್ಷರಾಗಿ ಶರಣಬಸಪ್ಪ ಜಗದೀಶ ಪಾಟೀಲ್…

11 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420