ಬಿಸಿ ಬಿಸಿ ಸುದ್ದಿ

ಚಿತ್ರೋದ್ಯಮಕ್ಕೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಸಿಎಂಗೆ ಪುರಾಣಿಕ್ ಮನವಿ

ಬೆಂಗಳೂರು: ಕೊವಿಡ್ -19 ಲಾಕ್ ಡೌನ್ ನಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ಕನ್ನಡ ಚಿತ್ರೋದ್ಯಮದ ಕಲಾವಿದರು, ತಂತ್ರಜ್ಞರು, ಕಾರ್ಮಿಕರಿಕರಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಕೋರಿ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಅವರು ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣದಲ್ಲಿ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಕೋವಿಡ್  ಲಾಕ್ ಡೌನ್ ಗೆ  ಕನ್ನಡ ಚಿತ್ರೋದ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಚಿತ್ರರಂಗದ ಲಕ್ಷಾಂತರ ಕಾರ್ಮಿಕರು ದಿನಗೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದ ಅವರ ಕುಟುಂಬ ಇಂದು ಬೀದಿಗೆ ಬೀಳುವಂತಾಗಿದೆ ಆದ್ದರಿಂದ ತಕ್ಷಣವೇ ಚಿತ್ರೋದ್ಯಮದ ನೆರವಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಅವರು ಮನವಿಯಲ್ಲಿ ಕೋರಿದ್ದಾರೆ.
2020ರ ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಚಿತ್ರೋದ್ಯಮದ 6000ಕುಟುಂಬಗಳಿಗೆ ತಲಾ ₹3000 ಮೌಲ್ಯದ ದಿನಸಿ ಪಡಿತರ ರಿಲೆಯನ್ಸ್ ಕೂಪನ್ ಅನ್ನು ಸರ್ಕಾರದ ವತಿಯಿಂದ ನೀಡಿದ್ದನ್ನು ಚಿತ್ರರಂಗ ಸ್ಮರಿಸುತ್ತದೆ. ಅಂತೆಯೇ ಇಂದಿನ ಸಂಕಷ್ಟದ ಸಮಯದಲ್ಲೂ ಕನಿಷ್ಟ ತಲಾ₹ 5000 ಮೌಲ್ಯದ ಆಹಾರ ಪಡಿತರ ಕೂಪನ್ ಹಾಗೂ ಇತರೆ ವಿಶೇಷ ನೆರವನ್ನು ನೀಡಿದಲ್ಲಿ ಚಿತ್ರೋದ್ಯಮಕ್ಕೆ ಕನಿಷ್ಟ ಆಸರೆ ಆದದಂತಾಗುತ್ತದೆ ಎಂದು ಅವರು ಕೋರಿದರು.
ನಿಯೋಗದಲ್ಲಿದ್ದ ಚಲನಚಿತ್ರ ನಿರ್ಮಾಪಕ ಹಾಗೂ ಕಲಾವಿದರ ಸಂಘದ ಕಾರ್ಯದರ್ಶಿ ರಾಕ್ ಲೈನ್ ವೆಂಕಟೇಶ್ ಅವರು, ಚಿತ್ರೋದ್ಯಮ ಸಾಕಷ್ಟು ಮಂದಿನ ಕೋವಿಡ್ ಲಸಿಕೆ ಪಡೆದಿರುವುದಿಲ್ಲ. ಕೆಲವರು ವಯಸ್ಸಿನ ಕಾರಣ ಸರದಿ ಸಾಲಿನಲ್ಲಿ ನಿಲ್ಲಲು ಸಾಧ್ಯವಾಗದೆ ಲಸಿಕೆ ಮೊದಲು ಡೋಸ್ ಪಡೆದಿರುವುದಿಲ್ಲ. ಆದ್ದರಿಂದ  ಚಿತ್ರೋದ್ಯಮವನ್ನು ಆದ್ಯತೆ ಎಂದು ಪರಿಗಣಿಸಿ ಕೋವಿಡ್ ಲಸಿಕೆಯನ್ನು ಹಾಕಲು ಪ್ರತ್ಯೇಕವಾದ ವ್ಯವಸ್ಥೆ ಮಾಡುವಂತೆ  ಅವರು ಮುಖ್ಯಮಂತ್ರಿಯವರನ್ನು ಕೋರಿದರು.
ಮನವಿಯನ್ನು ಸ್ವೀಕರಿಸಿದ ಮಾನ್ಯ ಮುಖ್ಯಮಂತ್ರಿಯವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮೊದಲ ಹಂತದ ಪ್ಯಾಕೇಜ್ ನಲ್ಲಿ ಕೆಲವರು ಬಿಟ್ಟು ಹೋಗಿರುವುದು ಗಮನಕ್ಕೆ ಬಂದಿದ್ದು ಮುಂದಿನ ಪ್ಯಾಕೇಜ್ ಘೋಷಣೆ ಸಂದರ್ಭದಲ್ಲಿ ಚಿತ್ರೋದ್ಯಮಕ್ಕೆ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿರುವುದಾಗಿ ಪುರಾಣಿಕ್ ತಿಳಿಸಿದರು.
ಮುಖ್ಯಮಂತ್ರಿ ಬಳಿಗೆ ನಿಯೋಗ ತೆರಳಲು ಕೋವಿಡ್ ಸಂದರ್ಭದಲ್ಲಿ ಸಾಧ್ಯವಿಲ್ಲದಿರುವುದರಿಂದ ಅಕಾಡೆಮಿಯೊಂದಿಗೆ ಸಹಕರಿಸಿದ ಚಿತ್ರೋದ್ಯಮದ ಎಲ್ಲ ವಿಭಾಗದ ಸಂಘಟನೆಗಳಿಗೆ, ವಿಶೇಷವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯಮಂಡಳಿ ಅಧ್ಯಕ್ಷರು ಹಾಗೂ ನಿರ್ಮಾಪಕ ಸಂಘದ ಅಧ್ಯಕ್ಷರಿಗೆ ಸುನೀಲ್ ಪುರಾಣಿಕ್ ಧನ್ಯವಾದ ತಿಳಿಸಿದ್ದಾರೆ.
emedialine

Recent Posts

ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನ ಓದು ಕಾರ್ಯಕ್ರಮ

ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…

12 hours ago

ಶೋಷಿತ ಜನಜಾಗೃತಿ ವೇದಿಕೆ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮನವಿ

ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…

12 hours ago

ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರು: ಡಾ. ಎಸ್.ಎಸ್. ಗುಬ್ಬಿ ಬೇಸರ

ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…

12 hours ago

ಹಣೆಯ ಮೇಲೆ ಹಚ್ಚಿದ ವಿಭೂತಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ: ಅರ್ಪಿತಾ ಪಾಟೀಲ

ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…

12 hours ago

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…

12 hours ago

ಸಂವಿಧಾನವನ್ನು ರಕ್ಷಿಸಲು ಜವಾಬ್ದಾರಿ ಯುವಕರು ಮೇಲಿದೆ : ಹಿರಿಯ ವಕೀಲ ವೈಜನಾಥ ಎಸ್ ಝಳಕಿ

ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…

12 hours ago