ಆಶಾ ಕಾರ್ಯಕರ್ತೆಯರ ಮೂರು ತಿಂಗಳ ಗೌರವಧನ ಬಿಡುಗಡೆಗೆ ಪ್ರತಿಭಟನೆ

0
83

ಶಹಾಬಾದ: ಕೋವಿಡ್ ನಿರ್ವಹಣೆಯಲ್ಲಿ ನಮ್ಮ ಪ್ರಾಣದ ಹಂಗು ತೊರೆದು ಹೋರಾಡುತ್ತಿರುವ ಆಶಾ ಕಾರ್ಯಕರ್ತೆಯರಿಗೆ ತಕ್ಷಣವೇ ರಾಜ್ಯ ಸರ್ಕಾರ ಮೂರು ತಿಂಗಳಿನಿಂದ ಬಾಕಿ ಇರುವ ಗೌರವಧನವನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ರಾವೂರ ಉಪಕೇಂದ್ರದ ಗೋಳಾ(ಕೆ) ಗ್ರಾಮದ ಆಶಾ ಕಾರ್ಯಕರ್ತರು ಮುಖ್ಯಮಂತ್ರಿಗಳಿಗೆ ಆಗ್ರಹಿಸಿದ್ದಾರೆ.

ಮೂರು ತಿಂಗಳಿಂದ ಆಶಾ ಕಾರ್ಯಕರ್ತೆಯರಾದ ನಮಗೆ ಗೌರವಧನ ಇಲ್ಲ. ಸಂಬಳವನ್ನೆ ನಂಬಿರುವ ನಮ್ಮ ಬದುಕು ದುಸ್ತರವಾಗಿದೆ. ಕೋವಿಡ್ ಮೊದಲ ಅಲೆಯಲ್ಲಿ ಜೀವಪಣಕ್ಕಿಟ್ಟು ದುಡಿದ ನಮಗೆ ವಿಶೇಷ ಪ್ರೋತ್ಸಾಹ ಧನ ನೀಡಿಲ್ಲ.

Contact Your\'s Advertisement; 9902492681

ಕೊವಿಡ್ 19 ನಿಯಂತ್ರಣಕ್ಕಾಗಿ ಶ್ರಮಿಸಿದ ಅನೇಕ ಆಶಾ ಕಾರ್ಯಕರ್ತೆಯರು ಸಾವನ್ನಪ್ಪಿದ್ದಾರೆ. ಅನೇಕ ಮಂದಿ ಕೊರೊನಾ ವೈರಸ್ ಸೋಂಕಿತರಾಗಿದ್ದಾರೆ. ಆದರೂ ನಮಗೆ ಬರಬೇಕಾದ ಮಾಸಿಕ ಗೌರವಧನ ಕೊಡದೇ ರಾಜ್ಯ ಸರ್ಕಾರ ನಮ್ಮ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ ಕೊರೊನಾ ವಾರಿಯರ್ಸ್ ಎಂದು ಬಾಯಿಮಾತಿನಲ್ಲಿ ಹೇಳಿದ ಸರ್ಕಾರ ಪ್ರತಿ ತಿಂಗಳು ಆಶಾ ಕಾರ್ಯಕರ್ತೆಯರಿಗೆ ಸಕಾಲಕ್ಕೆ ಗೌರವಧನ ನೀಡಲು ಕೂಡಲೇ ಕ್ರಮ ಕೈಗೊಳ್ಳಬೇಕು.

ದುಡಿದವರಿಗೆ ಗೌರವಧನ ನೀಡಬೇಕು. ಕರೊನಾ ವಾರಿಯರ್ಸಗಳಿಗೆ ನೀಡಿದಂತೆ ನಮಗೂ ವಿಶೇಷ ಪ್ರೋತ್ಸಾಹ ಧನ ನೀಡಬೇಕು. ಅಲ್ಲದೇ ನಮಗೂ ಮಾಸ್ಕ್, ಹ್ಯಾಂಡ್ ಗ್ಲೌಸ್ ಹಾಗೂ ಸ್ಯಾನಿಟೈಜರ್ ಒದಗಿಸಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರಾದ ಗಂಗಮ್ಮ, ಶಕುಂತಲಾ,ದ್ರೌಪದಿ, ಸಂತೋಷಿ, ಜಲ್ಲಮ್ಮ, ಶಾಂತಾಬಾಯಿ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here