ಬಿಸಿ ಬಿಸಿ ಸುದ್ದಿ

ಕೊಳವೆ ಬಾವಿಯ ಪೈಪ್‌ಲೈನ್ ತೊಟ್ಟಿಗೆ ಗ್ರಾಪಂ ಸದಸ್ಯ ಈರಣ್ಣ ಕಾರ್ಗಿಲ್ ಚಾಲನೆ

ಶಹಾಬಾದ: ಕೊಳವೆ ಬಾವಿಯಿಂದ ಪೈಪ್‌ಲೈನ್ ಹಾಕಿಸಿ, ಗ್ರಾಪಂಯಿಂದ ಬಸವ ನಗರದ ಜನರಿಗೆ ನೀರಿನ ಅನುಕೂಲ ಮಾಡಿಕೊಡಲಾಗಿದೆ ಎಂದು ಗ್ರಾಪಂ ಸದಸ್ಯ ಈರಣ್ಣ ಕಾರ್ಗಿಲ್ ಹೇಳಿದರು.

ಅವರು ಭಂಕೂರ ಗ್ರಾಪಂ ವ್ಯಾಪ್ತಿಯ ಬಸವ ನಗರದಲ್ಲಿ ಕೊಳವೆ ಬಾವಿಯ ಪೈಪ್‌ಲೈನ್ ತೊಟ್ಟಿಗೆ ಚಾಲನೆ ನೀಡಿ ಮಾತನಾಡಿದರು. ಕುಡಿಯುವ ನೀರಿನ ಪೈಪಲೈನ್ ಈ ನಗರದಲ್ಲಿದ್ದರೂ ಸಾಕಷ್ಟು ನೀರು ಪೂರೈಕೆಯಾಗುತ್ತಿರಲಿಲ್ಲ. ಕಾರಣ ಬಡಾವಣೆ ಬಹಳ ಎತ್ತರವಾಗಿರುವುದರಿಂದ ನೀರು ಮೇಲಕ್ಕೆ ಹೋಗುತ್ತಿರಲಿಲ್ಲ.ಇದರಿಂದ ಕೆಲವು ಮನೆಗಳಿಗೆ ನೀರಿನ ಸಮಸ್ಯೆ ತಲೆದೋರುತ್ತಿತ್ತು. ಅವರು ಹಲವಾರು ಬಾರಿ ಗ್ರಾಪಂಗೆ ಮನವಿ ಸಲ್ಲಿಸಿದ ಪ್ರಯುಕ್ತ ಪಕ್ಕದ ಪ್ರದೇಶದಲ್ಲಿರುವ ಕೊಳವೆ ಬಾವಿಯಿಂದ ನೀರಿನ ಪೈಪ್‌ಲೈನ್ ಮಾಡಲಾಗಿದೆ.ಅಲ್ಲದೇ ಸಾಕಾಗುವಷ್ಟು ನೀರಿನ ಪೂರೈಕೆಯೂ ಆಗಲಿದೆ.ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಹೇಳಿದರು.

ಸ್ಥಳೀಯ ನಿವಾಸಿ ನೀಲಕಂಠ ಮುದೋಳಕರ್ ಮಾತನಾಡಿ, ಬಸವ ನಗರದಲ್ಲಿ ಕೊಳವೆ ಬಾವಿಯಿಂದ ಪೈಪ್‌ಲೈನ್ ಹಾಕಿರುವುದರಿಂದ ಇಲ್ಲಿನ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ. ಭಂಕೂರ ಗ್ರಾಪಂಯವರು ಮಾಡಿದ ಕಾರ್ಯಕ್ಕೆ ಸಾರ್ವಜನಿಕರ ಪರವಾಗಿ ಅಭಿನಂಧಿಸಿದರು.

ಬಸವ ಸಮಿತಿ ಅಧ್ಯಕ್ಷ ಅಮೃತ ಮಾನಕರ್,ಉಮೇಶ ಪಾಟೀಲ, ಹಣಮಂತರಾಯ ದೇಸಾಯಿ,ರೇವಣಸಿದ್ದಪ್ಪ ಮುಸ್ತಾರಿ, ಚಂದ್ರಕಾಂತ ಅಲಮಾ, ಶರಣಯ್ಯ ಸ್ವಾಮಿ, ರಮೇಶ ಸೇರಿದಂತೆ ಅನೇಕರು ಇದ್ದರು.

emedialine

Recent Posts

ಬಸವರಾಜ್ ಎಸ್ ಜಿಲಿಗೆ ಸನ್ಮಾನ ನಾಳೆ

ಕಲಬುರಗಿ; ಬಸವರಾಜ್ ಎಸ್ ಜಿಲಿ ಅಭಿಮಾನಿ ಬಳಗದ ವತಿಯಿಂದ ಡೆಪ್ಟಿ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಕೆ ಎಸ್ ಆರ್…

3 hours ago

ಐಆರ್‌ಎಸ್‌ಒ ಕರ್ನಾಟಕ ರಾಜ್ಯ ಕಾರ್ಯಕರ್ತರ ಸಭೆ

ರಾಯಚೂರು; ಮಾರ್ಕ್ಸ್ ಭವನದಲ್ಲಿ ಎಐಆರ್‌ಎಸ್‌ಒ ಕರ್ನಾಟಕ ರಾಜ್ಯ ಮಟ್ಟದ ಕಾರ್ಯಕರ್ತರ ಸಭೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ಕಾರ್ಯಕರ್ತರ ಸಭೆಯಲ್ಲಿ, ಕೇಂದ್ರ ಸಂಘಟನಾ…

3 hours ago

ಶೈಲಜಾ ಶರಣಗೌಡಗೆ ಪಿಎಚ್. ಡಿ. ಡಾಕ್ಟರೇಟ್ ಪದವಿ

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಶೋಧನಾ ವಿಭಾಗದ ವಿದ್ಯಾರ್ಥಿನಿ, ಶೈಲಜಾ ಶರಣಗೌಡ ಇವರು ಡಾ. ಶಾರದಾ ದೇವಿ ಎಸ್.…

3 hours ago

ಜನಪದ ಕಲಾವಿದರು ಸಮಾಜದ ಆಸ್ತಿ

ಕಲಬುರಗಿ; ಗ್ರಾಮೀಣ ಭಾಗದಲ್ಲಿ ಅನೇಕ ಜನ ಕಲಾವಿದರು ಹಗಲಿರುಳು ಸೇವೆಗೈದು ಜನಪದ ಉಳಿಸುವುದರೊಂದಿಗೆ ಸಮಾಜದ ಆಸ್ತಿಯಾಗಿದ್ದಾರೆ ಎಂದು ನ್ಯಾಯವಾದಿ ಹಣಮಂತರಾಯ…

3 hours ago

ಕಲಬುರಗಿ: ಸಿಸಿ ರಸ್ತೆ ಕಾಮಗಾರಿಗೆ ಚಾಲನೆ

ಕಲಬುರಗಿ: ಮಹಾನಗರ ಪಾಲಿಕೆ ವಾರ್ಡ್ ಸಂಖ್ಯೆ 15ರ ಫಿರದೋಸ್ ಕಾಲೋನಿ ಬಡಾವಣೆಯಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಸೈಯದ್ ಮಿರಾಜೊದ್ದೀನ್ ಕಾಶೀಪ್…

5 hours ago

ಸಿಯುಕೆಯಲ್ಲಿ ರಾಷ್ಟ್ರೀಯ ಅಪ್ರೆಂಟಿಸ್‍ಶಿಪ್ ತರಬೇತಿ ಯೋಜನೆ ಕುರಿತು ಜಾಗೃತಿ

ಕಲಬುರಗಿ: "ನ್ಯಾಷನಲ್ ಅಪ್ರೆಂಟಿಸ್‍ಶಿಪ್ ಟ್ರೈನಿಂಗ್ ಸ್ಕೀಮ್ (ಓಂಖಿS) ಐಟಿಐ, ಪಿಯುಸಿ, ಡಿಪೆÇ್ಲೀಮಾ ಮತ್ತು ಪದವೀಧರರು ಸೇರಿದಂತೆ ತಾಂತ್ರಿಕ ಮತ್ತು ತಾಂತ್ರಿಕೇತರ…

7 hours ago