ಬಿಸಿ ಬಿಸಿ ಸುದ್ದಿ

ವಸತಿ ಶಾಲೆ ಕಾರ್ಮಿಕರ ಬಾಕಿ ವೇತನ ಬಿಡುಗಡೆಗೆ ಪ್ರಿಯಾಂಕ್ ಖರ್ಗೆ ಆಗ್ರಹ

ಕಲಬುರಗಿ: ಸರ್ಕಾರದ‌ ವಿವಿಧ ಇಲಾಖೆಗಳಲ್ಲಿನ ವಸತಿ ನಿಲಯಗಳು ಹಾಗೂ ವಸತಿ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸುಮಾರು 25,000 ಕಾರ್ಮಿಕರ ಬಾಕಿ ವೇತನವನ್ನು ಈ ಕೂಡಲೇ ಬಿಡುಗಡೆ ಮಾಡುವಂತೆ ಮಾಜಿ ಸಚಿವರಾದ, ಶಾಸಕರಾದ ಹಾಗೂ ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ‌ ಕುರಿತು ಮುಖ್ಯಮಂತ್ರಿಗಳಿಗೆ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಅವರು ರಾಜ್ಯದ ವಿವಿಧ ಇಲಾಖೆಗಳ ಅಡಿಯಲ್ಲಿ ಬರುವ ವಸತಿ ನಿಲಯ ಹಾಗೂ ವಸತಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 25,000 ಕಾರ್ಮಿಕರ ಹಲವು ತಿಂಗಳು ವೇತನ ಬಾಕಿ ಇದೆ. ಈ ಬಗ್ಗೆ ಕಾರ್ಮಿಕರು ಆನ್ ಲೈನ್ ಮೂಲಕ ಪ್ರತಿಭಟನೆ ನಡೆಸಿದ್ದರು. ಆದರೂ ಕೂಡಾ ಅವರ ಕೂಗಿಗೆ ಇದೂವರೆಗೆ ಸ್ಪಂದನೆ ಸಿಕ್ಕಿಲ್ಲ‌ ಎಂದು ವಿವರಿಸಿದ್ದಾರೆ.

ಮತ್ತೊಂದು ಪ್ರಮಖ ವಿಷಯವನ್ನು ಪ್ರಸ್ತಾಪಿಸಿರುವ ಶಾಸಕರು, ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರನ್ನು ವಸತಿ ನಿಲಯ ಹಾಗೂ ವಸತಿ ಶಾಲೆಗಳು ಪ್ರಾರಂಭವಾಗುವರೆಗೆ ಅವರ ಸೇವೆಯನ್ನು ಮುಂದುವರೆಸಿಕೊಂಡು‌ ಹೋಗಬೇಕು ಎಂದು ಹೇಳಿದ್ದಾರೆ.

ಕೋವಿಡ್ ನಿಂದಾಗಿ ರಾಜ್ಯದ‌ಲ್ಲಿ ಜನಸಾಮಾನ್ಯರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಜೊತೆಗೆ ವಸತಿ ನಿಲಯ ಹಾಗೂ ಶಾಲೆಗಳನ್ನು ಕೆಲಸ ಮಾಡುತ್ತಿರುವ ಕಾರ್ಮಿಕರ ಮೇಲೂ ಕೂಡಾ ಇದು ದುಷ್ಪರಿಣಾಮ ಬೀರಿದೆ. ಹಾಗಾಗಿ, ರಾಜ್ಯ ಸರ್ಕಾರ ಈ ಕೂಡಲೇ, ಕಾರ್ಮಿಕರ ಬಾಕಿ ವೇತನ ಬಿಡುಗಡೆ ಮಾಡುವುದಲ್ಲದೇ, ಗುತ್ತಿಗೆ ಆಧಾರದ ಕಾರ್ಮಿಕರ ಸೇವೆಯನ್ನು ಮುಂದುವರೆಸಬೇಕು ಜೊತೆಗೆ ಆ ಕುಟುಂಬಗಳಿಗೆ ಆಹಾರದ ಕಿಟ್ ವಿತರಿಸುವುದರ ಮೂಲಕ ಈಗಾಗಲೇ ನೊಂದಿರುವ ಬಡ ಕಾರ್ಮಿಕರ ಹಸಿವು ನೀಗಿಸುವ ಕೆಲಸ ಮಾಡಬೇಕು ಎಂದು ಪ್ರಿಯಾ‌ಂಕ್ ಖರ್ಗೆ ಅವರು ಬರೆದಿರುವ ಪತ್ರದಲ್ಲಿ ಒತ್ತಿ ಹೇಳಿ, ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

emedialine

Recent Posts

ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನ ಓದು ಕಾರ್ಯಕ್ರಮ

ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…

7 hours ago

ಶೋಷಿತ ಜನಜಾಗೃತಿ ವೇದಿಕೆ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮನವಿ

ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…

7 hours ago

ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರು: ಡಾ. ಎಸ್.ಎಸ್. ಗುಬ್ಬಿ ಬೇಸರ

ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…

7 hours ago

ಹಣೆಯ ಮೇಲೆ ಹಚ್ಚಿದ ವಿಭೂತಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ: ಅರ್ಪಿತಾ ಪಾಟೀಲ

ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…

7 hours ago

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…

7 hours ago

ಸಂವಿಧಾನವನ್ನು ರಕ್ಷಿಸಲು ಜವಾಬ್ದಾರಿ ಯುವಕರು ಮೇಲಿದೆ : ಹಿರಿಯ ವಕೀಲ ವೈಜನಾಥ ಎಸ್ ಝಳಕಿ

ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…

7 hours ago