ಶಹಾಬಾದ: ತಾಲೂಕಿನಲ್ಲಿ ಶನಿವಾರ ಸಾಯಂಕಾಲ ಗುಡುಗು- ಗಾಳಿ ಸಹಿತ ಧಾರಾಕಾರ ಮಳೆ ಸುರಿಯಿತು.ಇದರಿಂದ ಕಾದು ಹಂಚಿನಂತಾಗಿದ್ದ ಧರೆಯನ್ನು ಮಳೆ ತಾಂಪಾಗಿಸಿತು.
ಸುಮಾರು ದಿನಗಳಿಂದ ಬಿಸಿಲಿನ ಬೇಗೆಗೆ ಬೆಂದ ಜನರು ವಾತವಾರಣ ತಾಂಪಾಗಿದ್ದರಿಂದ ನಿಟ್ಟುಸಿರು ಬಿಡುವಂತಾಯಿತು.
ನಗರದ ಬಸವೇಶ್ವರ ವೃತ್ತದಿಂದ ಶಾಸ್ತ್ರಿ ವೃತ್ತದವರೆಗಿನ ರಸ್ತೆ ಸಂಪೂರ್ಣ ಜಲಾವೃತಗೊಂಡು ಸಂಚಾರಕ್ಕೆ ತೊಂದರೆಯಾಯಿತು.ಅಲ್ಲದೇ ನಗರದ ಕೆಲವು ಪ್ರದೇಶಗಳಲ್ಲಿ ಚರಂಡಿ ತುಂಬಿಕೊಂಡು ರಸ್ತೆಯ ಮೇಲೆ ನೀರು ಹರಿದ ಪರಿಣಾಮ ಪ್ಲಾಸ್ಟಿಕ್, ಕಸ-ಕಡ್ಡಿ ರಸ್ತೆಯ ಆವರಿಸಿಕೊಂಡಿತು.
ನಗರದ ನಿಜಾಮ ಬಜಾರ ಪ್ರದೇಶದಲ್ಲಿ ಚರಂಡಿ ನಿರ್ಮಾಣವಾಗದಿರುವುದರಿಂದ ಮಳೆ ನೀರು ಸಂಪೂರ್ಣ ಬಡಾವಣೆಯ ಮನೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಜಲಾವೃತಗೊಂಡು ಸಾರ್ವಜನಿಕರು ಮನೆಯಿಂದ ಹೊರಬಾರದಂತಾಯಿತು. ಇನ್ನು ಕೆಲವು ಪ್ರದೇಶಗಳಲ್ಲಿ ಗಿಡ ಮರಗಳು ಬಿದ್ದಿರುವುದು ಕಂಡು ಬಂದಿತು.
ಸುಮಾರು ಎರಡು ವರ್ಷಗಳಿಂದ ಚರಂಡಿ ನಿರ್ಮಾಣ ಮಾಡುತ್ತೆವೆ ಎಂದು ತಗ್ಗು ತೋಡಿ ಕಾಂಗಾರಿ ಮಾಡದೇ ಹೋಗಿದ್ದಾರೆ.ಅಲ್ಲದೇ ಇನ್ನೊಂದು ಬದಿಯಲ್ಲಿ ಕಳಪೆ ಹಾಗೂ ಅವೈಜ್ಞಾನಿಕ ಚರಂಡಿ ನಿರ್ಮಾಣ ಮಾಡಿರುವುದರಿಂದ ರಸ್ತೆಯ ಮೇಲೆ ನೀರು ನಿಲ್ಲುವಂತಾಗಿದೆ. ನಗರದ ಮುಖ್ಯ ರಸ್ತೆ ಸಂಪೂರ್ಣ ಆವರಿಸಿಕೊಂಡು ಚರಂಡಿ ನೀರು ರಸ್ತೆಯ ಮೇಲೆ ಹರಿದಾಡುತ್ತಿರುವುದರಿಂದ ನಗರಸಭೆಯ ಅಧಿಕಾರಿಗಳಿಗೆ ಸಾರ್ವಜನಿಕರು ಹಿಡಿಶಾಪ ಹಾಕಿದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…