ಎಸ್.ಆರ್.ವಿಶ್ವನಾಥ್ ಅವರಿಗೆ ಪ್ರತಿಷ್ಠಿತ `ಗೋಲ್ಡನ್ ಪೀಸ್ ಮೇಕರ್ ಸ್ಟಾರ್’ ಪ್ರಶಸ್ತಿ

0
33

ಬೆಂಗಳೂರು: ಯಲಹಂಕ ಶಾಸಕ ಮತ್ತು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರನ್ನು ರಷ್ಯಾ ಸರ್ಕಾರದ ಪ್ರತಿಷ್ಠಿತ `ಗೋಲ್ಡನ್ ಪೀಸ್ ಮೇಕರ್ ಸ್ಟಾರ್’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.ವಿಶ್ವನಾಥ್ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾರಿಷಸ್ ನ ಮಿನಿಸ್ಟರ್ ಕೌನ್ಸೆಲರ್ಜೆ .ಬಿಸ್ಸೊಂಡೊಯಾಲ್ ಅವರು ಈ ಪ್ರಶಸ್ತಿಯನ್ನು ಘೋಷಣೆ ಮಾಡಿದರು.

ಈ ಸಂದರ್ಭದಲ್ಲಿ ಏಷ್ಯನ್ ಅಕಾಡೆಮಿ ಆಫ್ ಫಿಲ್ಮ್ ಅಂಡ್ ಟೆಲಿವಿಷನ್ ನ ಅಧ್ಯಕ್ಷ ಸಂದೀಪ್ ಮಾರ್ವ ಹಾಗೂ ರಷ್ಯಾ ಸರ್ಕಾರದ ಸಚಿವ ಗಾಡ್ಝಿಮುರಾಡ್ ಒಮರೊವ್ ಅವರು ಹಾಜರಿದ್ದು, ವಿಶ್ವನಾಥ್ ಅವರಿಗೆ ಅಭಿನಂದನೆ ಸಲ್ಲಿಸಿದರು.
ಸಮಾಜಸೇವೆಯಲ್ಲಿ ಮತ್ತು ಸಮಾಜದಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವವರನ್ನು ಗುರ್ತಿಸಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ.

Contact Your\'s Advertisement; 9902492681

ಕೋವಿಡ್-19 ಬಿಕ್ಕಟ್ಟು ಶಮನವಾದ ನಂತರ ವಿಶ್ವನಾಥ್ ಅವರನ್ನು ರಷ್ಯಾಗೆ ಆಮಂತ್ರಿಸಿ ಅಲ್ಲಿನ ಸಂಸತ್ತಿನಲ್ಲಿ ನಡೆಯುವ ಸಮಾರಂಭದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ದೂರದ ರಷ್ಯಾ ದೇಶದವರು ನನ್ನ ಜನಸೇವೆಯನ್ನು ಗುರುತಿಸಿ ಈ ಪ್ರತಿಷ್ಠಿತ ಪ್ರಶಸ್ತಿ ನೀಡಿರುವುದು ಸಂತಸ ತಂದಿದೆ. ಇದರಿಂದಾಗಿ ನನ್ನ ಜವಾಬ್ದಾರಿ ಹೆಚ್ಚಿದೆ ಮತ್ತು ನಾನು ಕಳೆದ ಮೂರು ದಶಕಗಳಿಂದ ನಡೆಸುತ್ತಿರುವ ಜನಸೇವೆಯನ್ನು ಮತ್ತಷ್ಟು ವಿಸ್ತಾರಗೊಳಿಸಲು ಶಕ್ತಿ ಮತ್ತು ಸ್ಫೂರ್ತಿಯನ್ನು ತುಂಬಿದಂತಾಗಿದೆ ಎಂದು ಹೇಳಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here