ಶಹಾಬಾದ: ರೈತರ ಜೀವನಮಟ್ಟವನ್ನು ಉತ್ತಮಗೊಳಿಸಲು ರಾಜ್ಯ ಸರಕಾರ ಕೃಷಿ ಅಭಿಯಾನ ಯೋಜನೆಯನ್ನು ಜಾರಿಗೆ ತಂದಿದ್ದು, ಇದರ ಮಾಹಿತಿ ಪಡೆದು ಉತ್ತಮ ಬೇಸಾಯ ಮಾಡುವ ಮೂಲಕ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ರೈತರಿಗೆ ಈ ಕಾರ್ಯಕ್ರಮ ವರದಾನವಾಗಿದೆ ಎಂದು ತಹಸೀಲ್ದಾರ ಸುರೇಶ ವರ್ಮಾ ಹೇಳಿದರು.
ಅವರು ಮಂಗಳವಾರ ನಗರದ ತಹಸೀಲ್ದಾರ ಕಾರ್ಯಾಲಯದ ಮುಂಭಾಗದಲ್ಲಿ ರೈತ ಸಂಪರ್ಕ ಕೇಂದ್ರದಿಂದ ಹಮ್ಮಿಕೊಂಡಿದ್ದ ಕೃಷಿ ಅಭಿಯಾನ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ತಾಲೂಕಿನ ಪ್ರತಿಯೊಂದು ಗ್ರಾಮಕ್ಕೂ ಸಂಚರಿಸುವ ಮೂಲಕ ಕೃಷಿ ಅಭಿಯಾನ ಕಾರ್ಯಕ್ರಮದ ಮುಖಾಂತರವಾಗಿ ರೈತರಿಗೆ ಕೃಷಿ ಹಾಗೂ ಕೃಷಿಗೆ ಸಂಬಂದಿತ ಯೋಜನೆಗಳ ಬಗ್ಗೆ ಈ ಕಾರ್ಯಕ್ರಮದಲ್ಲಿ ಸೂಕ್ತ ರೀತಿಯ ಮಾಹಿತಿಯನ್ನು ನೀಡಲಾಗುವುದು. ಇಲಾಖೆಯಲ್ಲಿ ರಿಯಾಯಿತಿ ದರದಲ್ಲಿ ಕೃಷಿ ಪರಿಕರಗಳನ್ನು ಹಾಗೂ ಬಿತ್ತನೆ ಬೀಜಗಳನ್ನು ನೀಡಲಾಗುತ್ತಿದ್ದು ರೈತರು ಇದನ್ನು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.
ಸಹಾಯಕ ಕೃಷಿ ನಿರ್ದೇಶಕರಾದ ಸಂಜೀವಕುಮಾರ ಮಾನಕಾರೆ ಮಾತನಾಡಿ, ರೈತರ ಏಳಿಗೆಗಾಗಿ ಸರ್ಕಾರದಿಂದ ಕೃಷಿ ಇಲಾಖೆಯ ಮುಖಾಂತರ ದೊರೆಯುವ ಸೌಲಭ್ಯಗಳನ್ನು ಸೂಕ್ತ ರೀತಿಯಲ್ಲಿ ಪಡೆದುಕೊಳ್ಳುವಲ್ಲಿ ರೈತ ಬಾಂದವರು ಮುಂದಾಗಬೇಕು.ರೈತರ ಅಭಿವೃದ್ಧಿಗಾಗಿ ಸರ್ಕಾರ ಸಹಾಯಧನದಲ್ಲಿ ಬೀಜ ವಿತರಣೆ, ಸಾವಯವ ಗೊಬ್ಬರ, ಕ್ರೀಮಿನಾಶಕ ಮುಂತಾದ ಸೌಲಭ್ಯಗಳನ್ನು ನೀಡುತ್ತಿದ್ದು ರೈತರು ಸಮೀಪದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಿ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದರು.
ಗ್ರೇಡ್-೨ ತಹಸೀಲ್ದಾರ ವೆಂಕನಗೌಡ, ಕೃಷಿ ಅಧಿಕಾರಿಗಳಾದ ಕಾಶಿನಾಥ ದಂಡೋತಿ,ಶಶಿಕಾಂತ ಭರಣಿ, ರವೀಂದ್ರಕುಮಾರ, ಉಪತಹಸೀಲ್ದಾರ ಮಲ್ಲಿಕಾರ್ಜುನ ರೆಡ್ಡಿ, ಪ್ರವೀಣಕುಮಾರ ಇತರರು ಇದ್ದರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…