ಜ್ಞಾನ ಎಂಬುವುದು ಮಾನವನ ಬಾಳಿಗೆ ಬೆಳಕು ನೀಡುವ ದೀಪವಾಗಿದೆ: ಲಿಂಗರಾಜ

ಕಲಬುರಗಿ: ಜ್ಞಾನ ಎಂಬುವುದು ಮಾನವನ ಬಾಳಿಗೆ ಬೆಳಕು ನೀಡುವ ದೀಪವಾಗಿದೆ ಈ ಜ್ಞಾನ ದೀಪವನ್ನು ಬೆಳಗಿದ ಪ್ರತಿಭಾವಂತರು ಮನುಕುಲದ ಚರೀತ್ರೆಯಲ್ಲಿ ಅನೇಕರು ಇತಿಹಾಸವನ್ನು ಸೃಷ್ಠಿಸಿದ್ದಾರೆ ಅದರಲ್ಲಿ ಡಾ. ಬಾಬಾಸಾಹೇಬ ಅಂಬೇಡ್ಕರ್‌ರು, ಶಿಕ್ಷಣ ಎಂಬುವುದು ದಾನವಲ್ಲಿ ಹಕ್ಕು ಶೋಷಿತ ವರ್ಗದ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಸಿಕ್ಕಿದ್ದೇ ಅದಲ್ಲ, ಅದೇ ಒಂದು ದೊಡ್ಡ ಆಸ್ತಿ ಎಂದು ದಲಿತ ಮಾದಿಗ ಸಮನ್ವಯ ಸಮಿತಿಯ ರಾಜ್ಯಾಧ್ಯಕ್ಷ ಲಿಂಗರಾಜ ತಾರಪೈಲ್ ಹೇಳಿದರು.

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಮುದಬಾಳ (ಬಿ) ಗ್ರಾಮದಲ್ಲಿ ದಲಿತ ಮಾದಿಗ ಸಮನ್ವಯ ಸಮಿತಿ ನೂತನ ಗ್ರಾಮ ಶಾಖೆ ಹಾಗೂ ಶಿವಶರಣ ಮಾದರ ಚನ್ನಯ್ಯನವರ ನಾಮಫಲಕ ಉದ್ಘಾಟನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಅವರು, ಶಿಕ್ಷಣವೇ ಒಂದು ದೊಡ್ಡ ಆಸ್ತಿ, ಈ ಆಸ್ತಿ ಒಮ್ಮೆ ಸಿಕ್ಕರೆ ಅದನ್ನು ಯಾರಿಂದಲೂ ಕದಿಯಲಾಗದ ಹಾಘೂ ಕಳೆದುಕೊಳ್ಳಲಾಗದ ಆಸ್ತಿಯಾಗಿದೆ. ಅದಕ್ಕಾಗಿ ಮಕ್ಕಳಿಗಾಗಿ ಆಸ್ತಿ ಮಾಡದೇ ಮಕ್ಕಳನ್ನೇ ಒಂದು ಅಸ್ತಿಯನ್ನಾಗಿ ಮಾಡಬೇಕು ಎಂದರು.

ಕೃಷಿ ಅಭಿಯಾನ ಕಾರ್ಯಕ್ರಮ ರೈತರಿಗೆ ವರದಾನ : ಸುರೇಶ ವರ್ಮಾ

ಸಮಿತಿಯ ಪ್ರಧಾನ ಕಾರ್ಯದರ್ಶಿ ಬಸವರಾಜ ಜವಳಿ ಮಾತನಾಡುತ್ತಾ, ಶಿಕ್ಷಣದ ಎಲ್ಲಾ ತಾರತಮ್ಯಗಳನ್ನು ತೊಡೆದು ಹಾಕುವ ಒಂದು ಅತ್ಯಂತ ಸುಂದರವಾದ ಹಾಗೂ ಕ್ರಾಂತಿಕಾರಿಕ ಸಾಧನಾ ಮತ್ತು ಸೇತುವೆಯಾಗಿದೆ. ಈ ಎಲ್ಲಾ ರೀತಿಯ ಶೋಷಣೆಗಳನ್ನು ಹಿಂಸೆ, ಅನ್ಯಾಯಗಳನ್ನು ತೊಡೆಯುವ ರಾಜಕೀಯ ಪ್ರಜ್ಞೆ ಬೆಳೆಸುವ ಅಸ್ತ್ರವೂ ಶಿಕ್ಷಣವೇ ಆಗಿದೆ ಹಾಗಾಗಿ ಎಲ್ಲರೂ ಮಕ್ಕಳಿಗೆ ಮೊದಲು ಶಿಕ್ಷಣವನ್ನು ನೀಡಿ ಎಂದರು.

ಇದೇ ಸಂದರ್ಭದಲ್ಲಿ ನೂತನ ಗ್ರಾಮ ಶಾಖೆಯ ೧೧ ಜನ ಸದಸ್ಯರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಕಾಶಿಂ ಸಾಬ ಪೋಲಿಸ್ ಪಾಟೀಲ್, ರಾಜಾಸಾಬ ಮಾಲಿಪಾಟೀಲ್, ಸಮಿತಿಯ ರಾಜ್ಯ ಕಾನೂನು ಸಲಹೆಗಾರ ಸುಭಾಷ ಕಾಂಬಳೆ, ಜೇವರ್ಗಿ ತಾಲೂಕ ಅಧ್ಯಕ್ಷ ಮಲ್ಲಿಕಾರ್ಜುನ್ ದಿನ್ನಿ, ನಗರಾಧ್ಯಕ್ಷ ಪರಶುರಾಮ ಆಳಲಕರ್, ಪರುಶುರಾಮ ದೊಡ್ಡಮನಿ ವಕೀಲರು ಉಸ್ಥಿತರಿದ್ದರು.

emedialine

Recent Posts

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

3 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

4 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

6 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

17 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

19 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420