ಬಿಸಿ ಬಿಸಿ ಸುದ್ದಿ

ಮಧ್ಯರಾತ್ರಿ ಎರಡು ಮನೆ ದೋಚಿ ಪರಾರಿ

ಕಲಬುರಗಿ: ಕುಟುಂಬದವರೆಲ್ಲಾ ಗಾಢ ನಿದ್ರೆಗೆ ಜಾರಿದಾಗ ಸರಣಿ ಮನೆಗಳ್ಳತನ ನಡೆದಿರುವ ಘಟನೆ ನಗರದ ಕೊಠಾರಿ ಭವನ ಹಿಂಭಾಗದ ಶಾಸ್ತ್ರಿ ನಗರದಲ್ಲಿ ನಡೆದಿದೆ. ವಿಜಯಕುಮಾರ್ ಮತ್ತು ಶರಣಪ್ಪ ಎಂಬುವರಿಗೆ ಸೇರಿದ ಮನೆಗಳಲ್ಲಿ ಕಳ್ಳತನ ಮಾಡಿ ಕಳ್ಳರು ಎಸ್ಕೇಪ್ ಆಗಿದ್ದಾರೆ.

ವಿಜಯಕುಮಾರ್ ಮನೆಯಲ್ಲಿ 4 ಲಕ್ಷ ನಗದು, 30 ಗ್ರಾಂ ಚಿನ್ನಾಭರಣ ಕಳುವಾಗಿದೆ. ಅದೇ ನಗರದಲ್ಲಿರುವ ಶರಣಪ್ಪ ಎಂಬುವರ ಮನೆಯಲ್ಲಿ 25 ಸಾವಿರ ನಗದು ಕಳ್ಳತನವಾಗಿದೆ. ನಸುಕಿನ ಜಾವ ಈ ಘಟನೆ ನಡೆದಿದೆ ಎಂದು ಶಂಕಿಸಲಾಗಿದೆ.

ಎರಡು ಕುಟುಂಬದಲ್ಲೂ ಒಂದೇ ತರಹದ ಘಟನೆ ನಡೆದಿದ್ದು, ಮನೆಯವರೆಲ್ಲಾ ಮಲಗಿರುವಾಗ ಒಳಹೊಕ್ಕಿರುವ ಖದೀಮರು ಟ್ರಸರಿ ಕೀಲಿ ಮುರಿದು ಚಿನ್ನ-ಬೆಳ್ಳಿ ಹಾಗೂ ನಗದು ಹಣ ಕದ್ದಿದ್ದಾರೆ. ಆದ್ರೆ, ಚಾಲಾಕಿ ಕಳ್ಳರು ಬೆಳ್ಳಿ ಆಭರಣಗಳನ್ನು ಮಾತ್ರ ಮನೆಯ ಪಕ್ಕದಲ್ಲಿ ಬಿಸಾಡಿ ಹೋಗಿದ್ದಾರೆ. ಈ ಕುರಿತು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

10 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

12 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

13 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

13 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

13 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420