ಸುರಪುರ: ಶಾಸಕರಾದ ನರಸಿಂಹ ನಾಯಕ (ರಾಜುಗೌಡ) ಅವರು ತಾಲೂಕಿನ ಪ್ರತಿ ಗ್ರಾಮಕ್ಕೂ ಭೇಟಿ ನೀಡಿ ಜನರಿಗೆ ನೆರವಾಗುವ ಮೂಲಕ ಉತ್ತಮವಾದ ಕೆಲಸ ಮಾಡಿದ್ದಾರೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿದರು.
ತಾಲೂಕಿನ ಖಾನಾಪುರ ಎಸ್.ಹೆಚ್,ದೇವಾಪುರ ಮತ್ತು ದೇವತ್ಕಲ್ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿ,ನಮ್ಮ ಗ್ರಾಮ ಪಂಚಾಯತಿ ಅಭಿವೃಧ್ದಿ ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡುತ್ತಿದ್ದೀರಿ.ಖಾನಾಪುರ ಎಸ್.ಹೆಚ್ ಗ್ರಾಮ ಪಂಚಾಯತಿ ರೆಡ್ ಝೋನಲ್ಲಿತ್ತು ಈಗ ಎಲ್ಲೋ ಝೋನ್‌ಗೆ ಬಂದಿದೆ ಅದರಂತೆ ಎಲ್ಲಾ ಗ್ರಾಮ ಪಂಚಾಯತಿಗಳನ್ನು ಎಲ್ಲೋ ಗ್ರೀನ್ ಝೋನ್‌ಗೆ ಬರುವಂತೆ ನೋಡಿಕೊಳ್ಳುವಂತೆ ಸೂಚಿಸಿದರು.ಅಲ್ಲದೆ ದೇವತ್ಕಲ್ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅನೇಕ ಕೊರೊನಾ ಪಾಸಿಟಿವ್ ಪ್ರಕರಣಗಳು ಕಂಡುಬಂದಿದ್ದು ಗ್ರಾಮ ಪಂಚಾಯತಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.
ಇದೇ ಸಂದರ್ಭದಲ್ಲಿ ದೇವಾಪುರ ಗ್ರಾಮ ಪಂಚಾಯತಿಯಲ್ಲಿ ನಡೆಯುತ್ತಿದ್ದ ಗರ್ಭೀಣಿ ಮಹಿಳೆಯರ ಆರೋಗ್ಯ ತಪಾಸಣೆಯನ್ನು ಪರಿಶೀಲಿಸಿದರು ಜೊತೆಗೆ ದೇವತ್ಕಲ್ ಗ್ರಾಮದಲ್ಲಿ ಅಂಗಡಿ ಸೀಲ್ ಪಾಡಿರುವುದನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಅಂಬ್ರೇಶ ಕುಡಿಯುವ ನೀರು ಸರಬರಾಜು ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಹಣಮಂತಪ್ಪ ಅಂಬ್ಲಿ ಗ್ರಾಮ ಪಂಚಾಯತಿ ಅಭಿವೃಧ್ಧಿ ಅಧಿಕಾರಿಗಳು ಹಾಗು ಪೊಲೀಸ್ ಪೇದೆಗಳಾದ ದಯಾನಂದ ಜಮಾದಾರ್ ಅಂಬ್ರೇಶ ಸಿಂಪಿ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…