ಸುರಪುರ: ಸರಕಾರದ ಆದೇಶದಂತೆ ತಾಲೂಕಿನ ಸಿ ಕೆಟಗೆರಿ ದೇವಸ್ಥಾನಗಳ ಅರ್ಚಕರಿಗೆ ದಿನಸಿ ಕಿಟ್ ವಿತರಣೆ ಮಾಡಲಾಗಿದೆ ಎಂದು ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ತಿಳಿಸಿದರು.
ತಾಲೂಕಿನ ತಿಂಥಣಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸಿ ಕೆಟಗೆರಿ ದೇವಸ್ಥಾನಗಳ ಅರ್ಚಕರಿಗೆ ದಿನಸಿ ಕಿಟ್ ವಿತರಿಸಿ ಮಾತನಾಡಿದ ಅವರು,ಧಾರ್ಮಿಕ ದತ್ತಿ ಇಲಾಖೆ ಬೆಂಗಳೂರು ಅವರ ಆದೇಶದಂತೆ ತಾಲೂಕಿನ ಸುರಪುರ ಕೆಂಭಾವಿ ಮತ್ತು ಕಕ್ಕೇರಾ ವಲಯಗಳಲ್ಲಿನ ಸಿ ಪ್ರವರ್ಗ ಮುಜರಾಯಿ ಅಧಿಸೂಚಿತ ದೇವಸ್ಥಾನಗಳಲ್ಲಿ ಕೆಲಸ ಮಾಡುತ್ತಿರುವ ಅರ್ಚಕರಿಗೆ ಮತ್ತು ಸಿಬ್ಬಂದಿಗಳಿಗೆ ಕಿಟ್‌ಗಳನ್ನು ವಿತರಣೆ ಮಾಡಲಾಗುತ್ತಿದ್ದು,ಅರ್ಚಕರು ಕಿಟ್‌ಗಳನ್ನು ಪಡೆದುಕೊಂಡು ಸದುಪಯೋ ಪಡಿಸಿಕೊಳ್ಳುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ತಿಂಥಣಿ ಮೌನೇಶ್ವರ ದೇವಸ್ಥಾನದ ಅರ್ಚಕರಾದ ಶಿವಾನಂದ ಸ್ವಾಮಿ ಕಕ್ಕೇರಾ ಉಪ ತಹಸೀಲ್ದಾರ್ ರೇವಪ್ಪ ತೆಗ್ಗಿನಮನಿ ಹಾಗು ಕಂದಾಯ ನಿರೀಕ್ಷಕರಾದ ಗುರುಬಸಪ್ಪ ವಿಠ್ಠಲ್ ಬಂದಾಳ ಹಾಗು ಲಕ್ಷ್ಮಣ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…