ಚಿತ್ತಾಪುರ:ತಾಲೂಕಿನಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯವು ಪ್ರಗತಿಯಲ್ಲಿದ್ದು,ವಿಶೇಷವಾಗಿ 18 ರಿಂದ 44 ವರ್ಷದ ರಾಜ್ಯ ಗುರುತಿಸಿರುವ ವಿಶೇಷ ಗುಂಪಿನ ಫಲಾನುಭವಿಗಳು,ಕರೋನಾ ಮುಂಚೂಣಿಯಲ್ಲಿ ಕಾರ್ಯ ನಿರ್ವಹಿಸುವ ಕಾರ್ಯಕರ್ತರು, ಅದ್ಯತಾ ವಲಯದವರಿಗೆ ಗುರುತಿಸಿ ಲಸಿಕೆ ನೀಡುವ ಕಾರ್ಯ ಬಿರುಸಿನಿಂದ ಸಾಗಿದೆ.
ಶುಕ್ರವಾರ ಪಟ್ಟಣದ ಕೃಷಿ ಉತ್ಪನ ಮಾರುಕಟ್ಟೆ ಸಮಿತಿಯ ಆವರಣದಲ್ಲಿ ಅದ್ಯತಾ ವಲಯದಲ್ಲಿರುವ ವರ್ತಕರು,ಕಾರ್ಮಿಕರು,ಹಮಾಲರು,ಕಿರಾಣಾ ಅಂಗಡಿಯವರು, ಬೀದಿ ಬದಿ ವ್ಯಾಪಾರಿಗಳಾದ ತರಕಾರಿ,ಹಣ್ಣು ಮಾರುವರು ಸುಮಾರು 120ಕ್ಕೂ ಹೆಚ್ಚು ಜನರು ಲಸಿಕೆಯನ್ನು ಪಡೆದುಕೊಂಡರು.
ಈ ಸಂದರ್ಭದಲ್ಲಿ ತಾಲೂಕ ವೈದ್ಯಾಧಿಕಾರಿ ದೀಪಕ್ ಪಾಟಿಲ್ ಅವರು ಮಾತನಾಡಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆಯನ್ನು ಪಡೆದುಕೊಂಡು ಸಾರ್ವಜನಿಕರು ಸಹಕಾರ ನೀಡಬೇಕು ,ಲಸಿಕೆ ಪಡೆದುಕೊಂಡವರು ಕೂಡ ಕೋವಿಡ್-19ನ ನಿಯಮಗಳನ್ನು ಪಾಲನೆ ಮಾಡಬೇಕು ಅತಿ ಅವಶ್ಯಕತೆ ಇದ್ದಾಗ ಮಾತ್ರ ಮನೆಯಿಂದ ಹೊರಗೆ ಬರಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪುರಸಭೆಯ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ,ಉತ್ಪನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಸಿದ್ದುಗೌಡ ಅಫಜಲಪುರಕರ್, ಕಾರ್ಯದರ್ಶಿ ಸವಿತಾ ಗೋಣಿ,ವರ್ತಕರ ಸಂಘದ ಅಧ್ಯಕ್ಷ ಅಣ್ಣಾರಾವ ಪಾಟೀಲ್ ಮೂಡಬುಳ ,ಆರೋಗ್ಯ ಸಮಿತಿಯ ಸದಸ್ಯ ವೀರಣ್ಣಾ ಸುಲ್ತಾನಪುರ್,ಚಂದ್ರಶೇಖರ ಸಾತನೂರ್,ನಾಗರಾಜ ರೇಷ್ಮಿ,ಶರಣಬಸಪ್ಪ ಸಾತನೂರ್ ಇನ್ನಿತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…