ಬಿಸಿ ಬಿಸಿ ಸುದ್ದಿ

ರೈತ ಸಂಪರ್ಕ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ

ಸುರಪುರ: ನಗರದ ಹಳೆ ತಹಸೀಲ್ ಕಚೇರಿ ಸಮೀಪದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ರೈತ ಸಂಪರ್ಕ ಕೇಂದ್ರದ ನೂತನ ಕಟ್ಟಡವನ್ನು ಶಾಸಕ ನರಸಿಂಹ ನಾಯಕ (ರಾಜುಗೌಡ) ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು,ಈಗಾಗಲೆ ಮುಂಗಾರು ಆರಂಭಗೊಂಡಿದ್ದು ರೈತರು ಕೃಷಿ ಚಟುವಟಿಕೆಗಳನ್ನು ಆರಂಭಿಸಿದ್ದಾರೆ.ಅದರಂತೆ ಈಗಾಗಲೇ ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ಬೇಕಾಗುವ ಬೀಜ ಗೊಬ್ಬರ ಲಭ್ಯವಿದ್ದು ರೈತರು ಪಡೆದುಕೊಳ್ಳುವಂತೆ ಕರೆ ನೀಡಿದರು.ಅಲ್ಲದೆ ಅಧಿಕಾರಿಗಳಿಗೂ ಸೂಚನೆ ನೀಡಿ,ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಿ ಏನಾದರು ಅಗತ್ಯವಾಗಿದ್ದಲ್ಲಿ ಗಮನಕ್ಕೆ ತರುವಂತೆ ತಿಳಿಸಿದರು.

ನಂತರ ಜಿಲ್ಲಾ ಕೃಷಿ ಜಂಟಿ ನಿರ್ದೇಶಕಿ ದೇವಿಕಾ ಆರ್.ಮಾತನಾಡಿ,ರೈತ ಸಂಪರ್ಕ ಕೇಂದ್ರದಲ್ಲಿ ಹೆಸರು ಹತ್ತಿ ತೊಗರಿ ಬೀಜಗಳ ದಾಸ್ತಾನಿದ್ದು ರೈತರು ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ಅಲ್ಲದೆ ಈಬಾರಿ ಜಿಆರ್‍ಜಿ 811 ಎನ್ನುವ ಹೊಸ ತೊಗರಿ ತಳಿ ಬಂದಿದ್ದು ಇದು ಉತ್ತಮ ಇಳುವರಿ ನೀಡಲಿದೆ ಎಂದು ಮಾಹಿತಿ ನೀಡಿದರು.ಅಲ್ಲದೆ ಹೆಸರಿನ ಹೊಸ ತಳಿ ಬಿಜಿಎಸ್9 ಪಡೆದುಕೊಳ್ಳುವಂತೆ ತಿಳಿಸಿ,ಇನ್ನು ಮೆಕ್ಕೆಜೋಳ ಸಜ್ಜೆ ಬೀಜಗಳು ಬರಬೇಕಿದೆ ಎಂದು ಮಾಹಿತಿ ನೀಡಿದರು.

ಕೃಷಿ ಸಹಾಯಕ ನಿರ್ದೇಶಕ ಗುರುನಾಥ ಮಾತನಾಡಿ,ಹೆಸರು 5 ಕೆ.ಜಿ ಚೀಲಕ್ಕೆ ಎಸ್.ಸಿ ಮತ್ತು ಎಸ್ಟಿ ಸಮುದಾಯಕ್ಕೆ 435 ರೂಪಾಯಿ ಹಾಗು ಸಾಮಾನ್ಯ ವರ್ಗಕ್ಕೆ 495 ರೂಪಾಯಿ ಇರುವುದಾಗಿ ತಿಳಿಸಿದರು.ಈಬಾರಿ ಸುರಪುರ ತಾಲೂಕಿನಲ್ಲಿ 30 ಸಾವಿರ 37 ಹೆಕ್ಟೆರ್ ಮತ್ತು ಹುಣಸಗಿ 21 ಸಾವಿರದ 666 ಹೆಕ್ಟರ್ ಹೀಗೆ ಎಲ್ಲವು ಶೇರಿ ಸುರಪುರ ಮತ್ತು ಹುಣಸಗಿಯ ಒಟ್ಟು 1 ಲಕ್ಷ 47 ಸಾವಿರ 104 ಹೆಕ್ಟರ್ ಪ್ರದೇಶ ಬಿತ್ತನೆ ಗುರಿ ಹೊಂದಲಾಗಿದೆ ಹಾಗು ರಸಗೊಬ್ಬರವು ಲಭ್ಯವಿದ್ದು ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.
ನಂತರ ಇದೇ ಸಂದರ್ಭದಲ್ಲಿ ಸಾಂಕೇತಿಕವಾಗಿ ಕೆಲ ರೈತರಿಗೆ ಬಿತ್ತನೆ ಬೀಜಗಳನ್ನು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ಕೃಷಿ ಉಪ ನಿರ್ದೇಶಕ ಬಾಲರಾಜ್ ಪಿಐ ಎಸ್.ಎಮ್.ಪಾಟೀಲ್ ಟಿಹೆಚ್‍ಒ ಡಾ:ಆರ್.ವಿ.ನಾಯಕ ಎಡಿಎ ವಿಜಿಯನ್ಸ್ ರೂಪಾ ಆರ್.ಐ ಗುರುಬಸಪ್ಪ ವಿಠ್ಠಲ್ ಬಂದಾಳ ಮುಖಂಡ ರಂಗನಗೌಡ ಪಾಟೀಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

13 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

22 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

23 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

23 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago