ಶಹಾಬಾದ: ಕೊವಿಡ್‌ನ ಇಂತಹ ಸಂಕಷ್ಟ ಸಮಯದಲ್ಲಿ ಆಕ್ಸಿಜನ್ ನೀಡುವ ಗಿಡ ಮರಗಳ ಮಹತ್ವ ಮನದಟ್ಟು ಮಾಡಿಸಿ ಮಾನವ ಕುಲಕ್ಕೆ ಕೊರೊನಾ ಹೊಸ ಪಾಠ ಕಲಿಸಿದೆ ಎಂದು ಶರಣ ಕೊತ್ತಲಪ್ಪ ಮುತ್ಯಾ ಹೇಳಿದರು.
ಅವರು ರವಿವಾರ ತೊನಸನಹಳ್ಳಿ(ಎಸ್) ಗ್ರಾಮದ ಶ್ರೀ ಶರಣ ಗ್ರಾಮೀಣ ಅಭಿವೃದ್ಧಿ ಶಿಕ್ಷಣ ಸಂಸ್ಥೆ ವತಿಯಿಂದ ಆಯೋಜಿಸಲಾದ ಸಸಿ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕೊರೊನಾ ವೈರಸ್ ಕಳೆದ ಒಂದುವರೆ ವರ್ಷದಿಂದ ಜಗತ್ತನ್ನೇ ಕಾಡುತ್ತಿದೆ.ಸಂಕ್ರಮಿತ ವ್ಯಕ್ತಿಗಳಿಗೆ ಉಸಿರಾಟದ ತೊಂದರೆಯಾದಾಗ ಆಕ್ಸಿಜನ್ ಸಿಲಿಂಡರ್ ಸಿಗದೇ ಪರದಾಡಿದಂತಹ ಪರಿಸ್ಥಿತಿ ನಾವೆಲ್ಲಾ ಕಂಡಿದ್ದೆವೆ.ಅಲ್ಲದೇ ಆಕ್ಸಿಜನ್ ಕೊರತೆಯಿಂದ ಸಾವಿರಾರು ಜನರು ಪ್ರಾಣವನ್ನು ಬಿಟ್ಟಿದ್ದಾರೆ.ಆದರೆ ನಮ್ಮ ಜೀವಿತಾ ಅವದಿಯ ಉದಕ್ಕೂ ಉಚಿತವಾಗಿ ಆಕ್ಸಿಜನ್ ಪೂರೈಕೆ ಮಾಡುತ್ತಿರುವ ಗಿಡಮರಗಳ ಮಹತ್ವ ಅರಿಯದ ಮೂಢ ಜನರಿಗೆ ಅರಿವು ಮೂಡಿದಂತಾಗಿದೆ.ಈಗಲಾದರೂ ಪ್ರತಿಯೊಬ್ಬರೂ ಕಡ್ಡಾಯವಾಗಿ ಒಂದಾದರೂ ಸಸಿಯನ್ನು ನೆಟ್ಟು ಪೋಷಿಸಬೇಕೆಂದು ಹೇಳಿದರು.
ಬಿಜೆಪಿ ಮುಖಂಡ ಬಸವರಾಜ ಮದ್ರಿಕಿ ಮಾತನಾಡಿ,ಅರಣ್ಯ ನಾಶದಿಂದ ಪರಿಸರದ ತಾಪಮಾನ ಹೆಚ್ಚಾಗಿ ಪ್ರಕೃತಿ ವಿಕೋಪಗಳು ಸಂಭವಿಸುತ್ತಿವೆ. ಆದ್ದರಿಂದ ಈ ತಾಪಮಾನವನ್ನು ತಡೆಯಲು ಮರಗಳನ್ನು ಬೆಳೆಸಬೇಕೆಂದು ಹೇಳಿದರು.
ಗ್ರಾಮ ಪಂಚಾಯತ ಸದಸ್ಯ ಬೆಳ್ಳೆಪ್ಪ ಖಣದಾಳ, ಸಿದ್ದು ಸಜ್ಜನ್,ಸಿದ್ದನಗೌಡ ಭಮಶೆಟ್ಟಿ, ಸಿದ್ದು ಖಣದಾಳ, ಸಂಸ್ಥೆ ಕಾರ್ಯದರ್ಶಿ ರೇವಣಸಿದ್ಧಪ್ಪ ಕೇಲ್ಲೂರ್, ಪ್ರಕಾಶ್ ರೆಡ್ಡಿ, ಅಣವೀರ.ಎಸ್.ಗೋಳೇದ್, ಮಾಳಿಂಗರಾಯ ಕಂಟಿಕರ್, ಚನ್ನಬಸ್ಸು ಆಂದೇಲಿ,ಮಂಜುನಾಥ ಕೆಲ್ಲೂರ್, ವೀರೇಶ್ ಅಲ್ಲೂರ್ ಉಪಸ್ಥಿತರಿದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…