ಸುರಪುರ: ರಾಜ್ಯದಲ್ಲಿ ಇರುವ ಸಾರಿಗೆ ಸಂಸ್ಥೆಗೆ ಡಾ:ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೆಸರಿಡುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಿಜಿ ಸಾಗರ ಬಣ) ಜಿಲ್ಲಾ ಸಂಘಟನಾ ಸಂಚಾಲಕ ಶಿವಲಿಂಗ ಹಸನಾಪುರ ಒತ್ತಾಯಿಸಿದರು.
ನಗರದ ತಹಸೀಲ್ ಕಚೇರಿ ಮುಂದೆ ಮನವಿ ಸಲ್ಲಿಸಿ ಮಾತನಾಡಿ,ದೇಶಕ್ಕೆ ಸಂವಿಧಾನವನ್ನು ಕೊಟ್ಟ ಮಹಾನ್ ಪುರುಷ ಡಾ:ಬಾಬಾ ಸಾಹೇಬ್ ಅಂಬೇಡ್ಕರರಾಗಿದ್ದಾರೆ.ಇದನ್ನು ಅರಿತುಕೊಂಡು ಮಂಡ್ಯ ಸಂಸದರಾದ ಸುಮಲತಾ ಅಂಬರೀಶ ಅವರು ಈಗಾಗಲೆ ಸರಕಾರಕ್ಕೆ ಮನವಿ ಮಾಡಿದ್ದಾರೆ.ಅದರಂತೆ ನಾವು ಕೂಡ ಸರಕಾರಕ್ಕೆ ಒತ್ತಾಯಿಸುತ್ತಿದ್ದು ರಾಜ್ಯದ ಸಾರಿಗೆ ಸಂಸ್ಥೆಗೆ ಡಾ:ಬಾಬಾ ಸಾಹೇಬ್ ಅಂಬೇಡ್ಕರರ ಹೆಸರನ್ನಿಡುವುದು ಅತ್ಯಂತ ಸೂಕ್ತವಾಗಿದ್ದು ಕೂಡಲೇ ಹೆಸರನ್ನು ಘೋಷಣೆ ಮಾಡುವಂತೆ ಒತ್ತಾಯಿಸಿದರು.
ನಂತರ ಸಾರಿಗೆ ಸಚಿವರಿಗೆ ಬರೆದ ಮನವಿಯನ್ನು ಗ್ರೇಡ-೨ ತಹಸೀಲ್ದಾರ್ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ತಾಲೂಕು ಸಂಚಾಲಕ ವೀರಭದ್ರಪ್ಪ ತಳವಾರಗೇರಾ ತಾಲೂಕು ಸಂಘಟನಾ ಸಂಚಾಲಕರಾದ ಶೇಖರ ಮಂಗಳೂರು ವೆಂಕಟೇಶ ದೇವಾಪುರ ತಿಪ್ಪಣ್ಣ ಶೆಳ್ಳಗಿ ಖಾಜಾ ಅಜಮೀರ್ ಖುರೇಷಿ ರಮೇಶ ಬಡಿಗೇರ ಬಾಚಿಮಟ್ಟಿ ಮರಲಿಂಗ ಹುಣಸಿಹೊಳೆ ಎಂ.ಪಟೇಲ್ ಸುರಪುರ ಮಾನಪ್ಪ ಶೆಳ್ಳಗಿ ಸೇರಿದಂತೆ ಇತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…