ಶಹಾಬಾದ: ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡುವ ಬೀಜಗಳು ಸರಕಾರದಿಂದ ರಿಯಾಯಿತಿ ದರದಲ್ಲಿ ನೀಡಲಾಗುತ್ತಿದ್ದು, ಅದನ್ನು ಪಡೆದುಕೊಳ್ಳುವ ಮೂಲಕ ಸಕಾಲಕ್ಕೆ ಬಿತ್ತನೆ ಮಾಡಬೇಕೆಂದು ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಕಾಶಿನಾಥ ದಂಡೋತಿ ಹೇಳಿದರು.
ಅವರು ಮಂಗಳವಾರ ನಗರದ ರೈತ ಸಂಪರ್ಕ ಕೇಂದ್ರದಲ್ಲಿ ಆಯೋಜಿಸಲಾದ ಬೀಜ ವಿತರಣೆ ಕಾರ್ಯಕ್ರಮದಲ್ಲಿ ಬಿತ್ತನೆ ಬೀಜಗಳನ್ನು ರೈತರಿಗೆ ವಿತರಿಸುವ ಮೂಲಕ ಮಾತನಾಡಿದರು.
ರೈತರು ಸರಕಾರ ನೀಡುವ ಯೋಜನೆಗಳನ್ನು ಸರಿಯಾದ ಸಮಯಕ್ಕೆ ಪಡೆದುಕೊಳ್ಳಬೇಕು.ಅಲ್ಲದೇ ಕೊರೊನಾದ ಈ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು ಬೀಜಗಳನ್ನು ಸ್ವೀಕರಿಸಬೇಕು. ರೈತ ಸಂಪರ್ಕ ಕೇಂದ್ರಕ್ಕೆ ಬರುವ ಮುಂಚೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.ಸರದಿಯಲ್ಲಿ ನಿಂತು ಯಾವುದೇ ಗಲಾಟೆ ಮಾಡದೇ ಬೀಜವನ್ನು ಸ್ವೀಕರಿಸಬೇಕು.ಯಾರಿಗೂ ತೊಂದರೆಯಾಗದಂತೆ ಎಲ್ಲರಿಗೂ ಬೀಜ ವಿತರಿಸಲಾಗುವುದು. ಪ್ರತಿ ಎಕರೆಗೆ ೫ ಕೆಜಿ. ಬೀಜದಂತೆ ಐದು ಎಕರೆಗೆ ೨೫ ಕೆಜಿ ಬೀಜ ವಿತರಿಸಲಾಗುವುದು.
ತೊಗರಿ, ಹೆಸರು, ಉದ್ದು ಬೀಜಗಳ ದಾಸ್ತಾನು ಬಂದಿದ್ದು ಹಾಗೂ ಲಘು ಪೋಷಕಾಂಶಗಳನ್ನು ವಿತರಿಸಲಾಗುತ್ತಿದ್ದು, ರೈತರು ಇದರ ಸದುಪಯೋಗಪಡಿಸಿಕೊಳ್ಳಬೇಕು.ಅಲ್ಲದೇ ರೈತರು ರಸಗೊಬ್ಬರಗಳನ್ನು ನಿಗದಿತ ದರಕ್ಕೆ ಖರೀದಿಸಬೇಕು ಮತ್ತು ರಶೀದಿ ಪಡೆಯಬೇಕು.ಹೆಚ್ಚಿನ ದರ ಕೇಳಿದರೇ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳಿಗೆ ತಿಳಿಸಿದರೇ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
sಸಹಾಯಕ ಕೃಷಿ ಅಧಿಕಾರಿ ಶಶಿಕಾಂತ ಭರಣಿ ಮತ್ತು ರವೀಂದ್ರ ಕುಮಾರ ಮಾತನಾಡಿ, ರೈತರಿಗೆ ಕೃಷಿ ಚಟುವಟಿಕೆಗಳಿಗೆ ಬೇಕಾಗುವ ಬೀಜಗಳನ್ನು ವ್ಯವಸ್ಥಿತವಾಗಿ ವಿತರಿಸಲಾಗುತ್ತದೆ.ಆದ್ದರಿಂದ ರೈತರು ಸರದಿಯಲ್ಲಿ ನಿಂತು ಸರಕಾರ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು.
ರೈತ ಸಂಪರ್ಕ ಕೇಂದ್ರದ ಲೆಕ್ಕ ಸಹಾಯಕ ಪ್ರವೀಣ ಹಾಗೂ ರೈತರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…