ಆಳಂದ: ತಾಲೂಕಿನ ತಡಕಲ ಗ್ರಾಮದ ಮುಖ್ಯ ರಸ್ತೆಯಿಂದ ಬಿ ಆರ್ ಅಂಬೇಡ್ಕರ್ ವೃತ್ತದವರೆಗಿನ ಮುಖ್ಯ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಸುಭಾಷ್ ಆರ್ ಗುತ್ತೇದಾರ ಚಾಲನೆ ನೀಡಿದರು.
ಬುಧುವಾರ ತಡಕಲನಲ್ಲಿ ೧.೫೦ ಕೋಟಿ ರೂ. ವೆಚ್ಚದ ಕಾಮಗಾರಿಗೆ ಗುದ್ದಲಿ ಪೂಜೆ ನೇರವೇರಿಸಿ ಮಾತನಾಡಿದ ಅವರು, ಗ್ರಾಮದವರೆಗಿನ ರಸ್ತೆ ಸುಧಾರಿಸಬೇಕು ಎನ್ನುವುದು ನನ್ನ ಬಹುದಿನದ ಕನಸು ಅದರಂತೆ ಇಂದು ಕಾಮಗಾರಿಗೆ ಚಾಲನೆ ನೀಡುತ್ತಿದ್ದೇನೆ ಎಂದರು.
ರಸ್ತೆಯು ಎರಡು ಬದಿಯಲ್ಲಿ ಒಳಚರಂಡಿ ಹೊಂದಲಿದ್ದು ಮಧ್ಯದಲ್ಲಿ ಡಿವೈಡರ್ ಇರಲಿದೆ ಜೊತೆಗೆ ಮುಖ್ಯ ರಸ್ತೆಯು ಬೀದಿ ದೀಪಗಳಿಂದ ಕಂಗೊಳಿಸಲಿದೆ. ತಾಲೂಕಿನ ಎಲ್ಲ ಹಳ್ಳಿಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಕೆಲವು ಗ್ರಾಮಗಳಲ್ಲಿ ಆದ್ಯತೆಯ ಮೇರೆಗೆ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಿದ್ಧಮಲ್ಲ ಶಿವಾಚಾರ್ಯರು, ಶಿವಪುತ್ರಪ್ಪ ಬೆಳ್ಳೆ, ಶ್ರೀನಿವಾಸ ಗುತ್ತೇದಾರ, ಈರಣ್ಣ ಚಿಮ್ಮನ, ತಿಪ್ಪಯ್ಯ ಗುತ್ತೇದಾರ, ಮಲ್ಲಿನಾಥ ಮಾನೋಳಿ, ವನಿತೇಶ ಗುತ್ತೇದಾರ, ದಸ್ತಗೀರ್, ಅಧಿಕಾರಿಗಳಾದ ಈರಣ್ಣ ಕಾರಭಾರಿ, ಅರುಣಕುಮಾರ ಬಿರಾದಾರ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…