ಕಕ್ಕೇರಾ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ವಿರುದ್ಧ ಕ್ರಮಕ್ಕೆ ಕರವೇ ಮನವಿ

ಸುರಪುರ: ತಾಲೂಕಿನ ಕಕ್ಕೇರಾ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅನೇಕ ದಿನಗಳಿಂದ ಕರ್ತವ್ಯಕ್ಕೆ ಹಾಜರಾಗದೆ ಇರುವುದರಿಂದ ಅವರನ್ನು ಅಮಾನತ್ತುಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಿಗರ ಸಾರಥ್ಯದಲ್ಲಿ ಸಂಘಟನೆ ಮುಖಂಡರು ತಾಲೂಕು ಆರೋಗ್ಯಾಧಿಕಾರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು,ಕಕ್ಕೇರಾ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಆಸ್ಪತ್ರೆಗೆ ಬರುವ ಜನರೊಂದಿಗೆ ಅಗೌರವದಿಂದ ನಡೆದುಕೊಳ್ಳುತ್ತಾರೆ,ಅಲ್ಲದೆ ಚಿಕಿತ್ಸೆಗಾಗಿ ಬಂದವರಿಗೆ ಚಿಕಿತ್ಸೆ ನೀಡದೆ ದಾದಿಯರಿದ್ದಾರೆ ಎಂದು ಕರ್ತವ್ಯ ಲೋಪ ಎಸಗುತ್ತಾರೆ.ಇದರಿಂದ ರೋಗಿಗಳು ಸೂಕ್ತ ಚಿಕಿತ್ಸೆ ದೊರೆಯದೆ ಪರದಾಡುವಂತಾಗಿದೆ.ಅಲ್ಲದೆ ಸ್ಥಳಿಯ ಪುರಸಭೆ ಸದಸ್ಯ ಭೀಮನಗೌಡ ಹಳ್ಳಿ ಆಸ್ಪತ್ರೆಯ ಅವ್ಯವಸ್ಥೆ ಬಗ್ಗೆ ತಿಳಿಸಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಹೇಳಿದರೆ ಅವರಿಗೆ ಏಕ ವಚನದಲ್ಲಿ ಸಂಬೋದಿಸಿ ಅವರ ಮೇಲೆಯೇ ಸುಳ್ಳು ದೂರು ನೀಡಿ ಜನರ ಆಕ್ರೋಶಕ್ಕೆ ಕಾರಣರಾಗಿದ್ದಾರೆ.ಅಲ್ಲದೆ ತಮ್ಮ ಪರವಾಗಿ ಸಾಕ್ಷಿ ಹೇಳುವಂತೆ ಆಶಾ ಕಾರ್ಯಕರ್ತೆಗೆ ಒತ್ತಾಯಿಸಿ ಅವರು ಸತ್ಯ ಹೇಳುವೆ ಎಂದಿದ್ದಕ್ಕೆ ಅವರನ್ನು ಕೆಲಸದಿಂದ ತೆಗೆಯಲು ಮುಂದಾಗಿದ್ದಾರೆ.ಇಂತಹ ಕರ್ತವ್ಯ ಲೋಪ ಎಸಗುತ್ತಿರುವ ವೈದ್ಯಾಧಿಕಾರಿಯನ್ನು ಅಮಾನತ್ತುಗೊಳಿಸಬೇಕು ಹಾಗು ಪುರಸಭೆ ಸದಸ್ಯ ಭೀಮನಗೌಡ ಹಳ್ಳಿ ಮೇಲೆ ನೀಡಿದ ಸುಳ್ಳು ದೂರು ರದ್ದುಗೊಳಿಸಬೇಕೆಂದು ಆಗ್ರಹಿಸಿದರು.

ಲಸಿಕೆ ಕೊಡಿ ಇಲ್ಲ ಅಧಿಕಾರ ಬಿಡಿ ಎಂದು ಕರವೇ ಪ್ರತಿಭಟನೆ

ನಂತರ ತಾಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ.ನಾಯಕ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ವೇದಿಕೆ ಜಿಲ್ಲಾಧ್ಯಕ್ಷ ಶಿವಮೋನಯ್ಯ ಎಲ್.ಡಿ ನಾಯಕ,ತಾಲೂಕು ಅಧ್ಯಕ್ಷ ಮೌನೇಶ ಆರ್.ಬೋವಿ ಗೌರವಾಧ್ಯಕ್ಷ ಇಮಾಮಸಾಬ್ ಅರಕೇರಿ ರಮೇಶ ಹಸನಾಪುರ ಬಸವರಾಜ ಕವಡಿಮಟ್ಟಿ ಸೋಮನಾಥ ನಾಯಕ ವಾಗಣಗೇರಾ ಇತರರಿದ್ದರು.

ಇದೇ ಸಂದರ್ಭದಲ್ಲಿ ಯುವ ಕರ್ನಾಟಕ ರಕ್ಷಣಾ ವೇದಿಕೆ ಸುರಪುರ ತಾಲೂಕು ಘಟಕದ ಅಧ್ಯಕ್ಷ ತಿಮ್ಮಪ್ಪ ಹೆಳವರ ಮನವಿ ಸಲ್ಲಿಸಿ ಕಕ್ಕೇರಾ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಮೇಲೆ ಕ್ರಮಕ್ಕೆ ಆಗ್ರಹಿಸಿದರು.

emedialine

Recent Posts

ಇಂದಿನಿಂದ ಸೂಗೂರ (ಕೆ ) ನವರಾತ್ರಿ ಬ್ರಹ್ಮೋತ್ಸವ

ಕಾಳಗಿ : ಕಲ್ಯಾಣ ಕರ್ನಾಟಕದ ತಿರುಪತಿ ಎಂದೇ ಪ್ರಸಿದ್ಧಿ ಪಡೆದಿರುವ ಸುವರ್ಣ ಗಿರಿ ಕಾಳಗಿ ತಾಲೂಕಿನ ಸೂಗೂರ (ಕೆ )…

3 hours ago

ಕಾಳಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

ಕಲಬುರಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಿಗೆ ಕಾಳಗಿ ತಾಲೂಕು ಪ್ರವಾಸಿ ಮಂದಿರದಲ್ಲಿ ಹವ್ಯಾಸೀಕಲಾ ಬಳಗದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದಿವ್ಯ…

4 hours ago

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

17 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

20 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

1 day ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420