ಅಸಂಘಟಿತ ಕಾರ್ಮಿಕರಿಗೆ 2000 ರೂ.ಗಳ ಪರಿಹಾರ ಧನ: ಜುಲೈ 31 ಕೊನೆ

ಕಲಬುರಗಿ: ಕೋವಿಡ್ ಎರಡನೇ ಅಲೆಯ ಲಾಕ್‍ಡೌನ್ ಪರಿಣಾಮ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಅಸಂಘಟಿತ ಕಾರ್ಮಿಕರಿಗೆ ಸರ್ಕಾರವು ಒಂದು ಬಾರಿ 2000 ರೂ. ಆರ್ಥಿಕ ನೆರವು ನೀಡುತ್ತಿದೆ. ಇದಕ್ಕಾಗಿ ಅರ್ಹ ಅಸಂಘಟಿತ ಕಾರ್ಮಿಕರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ 2021ರ ಜುಲೈ 31 ಕೊನೆಯ ದಿನವಾಗಿದೆ ಎಂದು ಕಲಬುರಗಿ ಪ್ರಾದೇಶಿಕ ವಿಭಾಗದ ಕಾರ್ಮಿಕ ಉಪ ಆಯುಕ್ತ ಡಿ.ಜಿ.ನಾಗೇಶ್ ಅವರು ತಿಳಿಸಿದ್ದಾರೆ.

ಮಾರ್ಗಸೂಚಿಯಂತೆ ಅಗಸರು, ಕ್ಷೌರಿಕರು, ಗೃಹಕಾರ್ಮಿಕರು, ಟೈಲರ್‍ಗಳು, ಮೆಕ್ಯಾನಿಕ್, ಚಿಂದಿ ಆಯುವವರು, ಹಮಾಲರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು ಹಾಗೂ ಭಟ್ಟಿ ಕಾರ್ಮಿಕರು ಈ 11 ವಲಯದ ವೃತ್ತಿಯಲ್ಲಿ ತೊಡಗಿರುವ ಅಸಂಘಟಿತ ಕಾರ್ಮಿಕರಿಗೆ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಮೂಲಕ ಒಂದು ಬಾರಿ ಪರಿಹಾರವಾಗಿ 2000 ರೂ. ಗಳ ಆರ್ಥಿಕ ನೆರವನ್ನು ನೀಡಲಾಗುತ್ತದೆ.

2020ನೇ ಸಾಲಿನ ಕೋವಿಡ್ ಲಾಕ್‍ಡೌನ್ ಸಂದರ್ಭದಲ್ಲಿ ಆರ್ಥಿಕ ನೆರವು ಪಡೆದ ಅಗಸರು ಮತ್ತು ಕ್ಷೌರಿಕ ಫಲಾನುಭವಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಸದರಿ ಸಾಲಿನಲ್ಲಿ ನೆರವು ಪಡೆಯದ ಅಗಸರು ಮತ್ತು ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ ಕುಟುಂಬದ ಓರ್ವ ಕಾರ್ಮಿಕ ಪರಿಹಾರಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

ದಿನಾಂಕ 19-05-2021ರ ಅಂತ್ಯದ ವರೆಗೆ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಲ್ಲಿ ಅಂಬೇಡ್ಕರ ಕಾರ್ಮಿಕ ಸಹಾಯಹಸ್ತ ಯೋಜನೆಯಡಿ 60 ವರ್ಷದೊಳಗಿನ ವಯೋಮಿತಿಯವರು ಅರ್ಜಿ ಸಲ್ಲಿಸಿ ನೋಂದಣಿಯಾದವರು ಮತ್ತೊಮ್ಮೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಪ್ರಸ್ತುತ ಮಾರ್ಗಸೂಚಿಯನ್ವಯ 60 ವರ್ಷ ಮೇಲ್ಪಟ್ಟು ಮತ್ತು 65 ವರ್ಷದೊಳಗಿನ ಕಾರ್ಮಿಕರು ಸಹ ಪರಿಹಾರ ಪಡೆಯಲು ಅವಕಾಶ ನೀಡಿದ್ದರಿಂದ ಈ ವಯೋಮಾನದವರು ಅರ್ಜಿ ಸಲ್ಲಿಸಬಹುದಾಗಿದೆ.

ನೆರವು ಪಡೆಯಲು ಅರ್ಹತಾ ಷರತ್ತುಗಳು: ಇ.ಎಸ್.ಐ. ಮತ್ತು ಪಿ.ಎಫ್. ಕಾಯ್ದೆಯಡಿ ನೋಂದಾಯಿತ ಫಲಾನುಭವಿಗಳಾಗದೆ ಅಸಂಘಟಿತ ಕಾರ್ಮಿಕರಾಗಿರಬೇಕು. ವಯೋಮಿತಿ 18 ರಿಂದ 65 ವರ್ಷದೊಳಗಿದ್ದು, ಬಿ.ಪಿ.ಎಲ್. ಕುಟುಂಬದವರಾಗಿರಬೇಕು. ಕುಟುಂಬದಲ್ಲಿ ಓರ್ವರಿಗೆ ಮಾತ್ರ ಪರಿಹಾರ ನೀಡಲಾಗುತ್ತದೆ. ಕಟ್ಟಡ ಕಾರ್ಮಿಕರು ಹಾಗೂ ಘೋಷಿತ 11 ವರ್ಗಗಳಲ್ಲಿ ಕೇವಲ ಒಂದು ವೃತ್ತಿಗೆ ಮಾತ್ರ ಪರಿಹಾರ ನೀಡಲಾಗುತ್ತದೆ. ಕರ್ನಾಟಕದಲ್ಲಿ ವೃತ್ತಿ ನಿರ್ವಹಿಸುವ ಹೊರ ರಾಜ್ಯದ ಕಾರ್ಮಿಕರು ಸಹ ಪರಿಹಾರಕ್ಕೆ ಅರ್ಹರಿದ್ದು, ಕರ್ನಾಟಕ ಸರ್ಕಾರ ನೀಡಿರುವ ಬಿ.ಪಿ.ಎಲ್. ಕಾರ್ಡ್ ಹೊಂದಿರಬೇಕು. ವೃತ್ತಿಗೆ ಸಂಬಂಧಿಸಿದ ಅಧಿಕಾರಿಗಳಿಂದ ಪ್ರಮಾಣ ಪತ್ರ ಪಡೆದಿರಬೇಕು. ಅಧಾರ ಸಂಖ್ಯೆ ಹೊಂದಿರುವ ಬ್ಯಾಂಕ್ ಖಾತೆ ಹೊಂದಿರಬೇಕು.

ಅರ್ಹ ಫಲಾನುಭವಿ ಕಾರ್ಮಿಕರು ಸೇವಾ ಸಿಂಧು ಪೆÇೀರ್ಟಲ್‍ನಲ್ಲಿ ಮೂಲಕ ಅರ್ಜಿ ಸಲ್ಲಿಸಬೇಕು. ಆಧಾರ ಕಾರ್ಡ್, ವಿಳಾಸ ಧೃಡೀಕರಣ ಪತ್ರ, ಜನ್ಮ ದಿನಾಂಕ ಪ್ರಮಾಣ ಪತ್ರ, ಬಿ.ಪಿ.ಎಲ್ ಕಾರ್ಡ್, ಪಾಸ್‍ಪೆÇೀರ್ಟ್ ಅಳತೆ ಭಾವಚಿತ್ರ, ತಾನು ಅಸಂಘಟಿತ ಕಾರ್ಮಿಕರೆಂದು ಸ್ವಯಂ ಘೋಷಣೆ ಪ್ರಮಾಣ ಪತ್ರ ಹಾಗೂ ನಿಗದಿತ ಅಧಿಕಾರಿಗಳಿಂದ ಧೃಡೀಕರಿಸಲ್ಪಟ್ಟ ಉದ್ಯೋಗ ಪ್ರಮಾಣ ಪತ್ರ ದಾಖಲೆಗಳು ಹಾಗೂ ಅಲ್ಲದೇ ಅರ್ಜಿಯಲ್ಲಿ ಬ್ಯಾಂಕ್ ಖಾತೆಯ ವಿವರ ಹಾಗೂ ದೂರವಾಣಿ ಸಂಖ್ಯೆ ನಮೂದಿಸಬೇಕು.

ಈ ಕೆಳಕಂಡ ಯಾವುದಾದರೊಬ್ಬ ಅಧಿಕಾರಿಯಿಂದ ಉದ್ಯೋಗ ಪ್ರಮಾಣ ಪತ್ರವನ್ನು ಪಡೆಯಲು ಅವಕಾಶ: ಮಹಾನಗರ ಪಾಲಿಕೆಯ ವಾರ್ಡ್ ಮಟ್ಟದಲ್ಲಿನ ಕಂದಾಯ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಹಿರಿಯ ಆರೋಗ್ಯ ಅಧಿಕಾರಿಗಳು, ಆರೋಗ್ಯ ನಿರೀಕ್ಷಕರಿಂದ, ಜಿಲ್ಲಾ ಮತ್ತು ತಾಲೂಕಾ ಕೇಂದ್ರಗಳಲ್ಲಿ ಮಹಾನಗರ ಪಾಲಿಕೆ, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯಿತಿಯ ಕಂದಾಯ ಅಧಿಕಾರಿಗಳು, ಕಂದಾಯ ನಿರೀಕ್ಷರಿಂದ, ತಾಲೂಕಾ ಮಟ್ಟದಲ್ಲಿ ಕಂದಾಯ ಇಲಾಖೆಯ ತಹಶೀಲ್ದಾರರು, ಉಪ ತಹಶೀಲ್ದಾರರು, ಕಂದಾಯ ಅಧಿಕಾರಿಗಳು, ಕಂದಾಯ ನಿರೀಕ್ಷಕರಿಂದ, ಕಾರ್ಮಿಕ ಇಲಾಖೆಯ ಸಹಾಯಕ ಕಾರ್ಮಿಕ ಆಯುಕ್ತರು, ಕಾರ್ಮಿಕ ಅಧಿಕಾರಿಗಳು, ಹಿರಿಯ ಕಾರ್ಮಿಕ ನಿರೀಕ್ಷಕರು, ಕಾರ್ಮಿಕ ನಿರೀಕ್ಷಕರಿಂದ, ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿಗಳಿಂದ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳಿಂದ, ಹಮಾಲಿ ವೃತ್ತಿಯಲ್ಲಿ ತೊಡಗಿಕೂಂಡ ಕಾರ್ಮಿಕರು ಮೇಲ್ಕಂಡ ಅಧಿಕಾರಿಗಳಿಂದ ಅಥವಾ ತಾವು ಕೆಲಸ ನಿರ್ವಹಿಸುತ್ತಿರುವ ಇಲಾಖೆ, ಮಂಡಳಿ, ನಿಗಮದ ಅಧೀಕೃತ ಅಧಿಕಾರಿಗಳಿಂದ ಪ್ರಮಾಣ ಪತ್ರ ಪಡೆಯಬಹುದಾಗಿದೆ ಇದಲ್ಲದೇ ಯಾವುದೇ ಇಲಾಖೆಯ ಪತ್ರಾಂಕಿತ ಅಧಿಕಾರಿಗಳಿಂದ ಪಡೆಯಬಹುದಾಗಿದೆ.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

9 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

12 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

16 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

17 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

19 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420