ದಲಿತ ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಛಲವಾದಿ ನಾರಾಯಣಸ್ವಾಮಿ, ಅಂಬಾರಾಯ ಅಷ್ಠಗಿ ಸಂತಾಪ

0
47

ಬೆಂಗಳೂರು/ಕಲಬುರಗಿ: ಪ್ರಸಿದ್ಧ ಬಂಡಾಯ ಸಾಹಿತಿ, ದಲಿತ ಕವಿ ಮತ್ತು ವಿಧಾನ ಪರಿಷತ್‍ನ ಮಾಜಿ ಸದಸ್ಯರು, ಹಾಗೂ ಕನ್ನಡ ಪ್ರಾಧಿಕಾರದ ಮಾಜಿ ಅಧ್ಯಕ್ಷರೂ ಆದ ಡಾ.ಸಿದ್ದಲಿಂಗಯ್ಯ ಅವರ ನಿಧನಕ್ಕೆ ಬಿಜೆಪಿ ಎಸ್‍ಸಿ ಮೋರ್ಚಾ ರಾಜ್ಯಾಧ್ಯಕ್ಷರಾದ ಛಲವಾದಿ ನಾರಾಯಣಸ್ವಾಮಿ ಹಾಗೂ ರಾಜ್ಯ ಉಪಾಧ್ಯಕ್ಷ ಅಂಬಾರಾಯ ಅಷ್ಠಗಿ ಯವರು ತೀವ್ರ ಸಂತಾಪ ಸೂಚಿಸಿದ್ದಾರೆ.

‘ದಲಿತ ಕವಿ’ ಎಂದೇ ಪ್ರಸಿದ್ಧರಾದ ಡಾ. ಸಿದ್ದಲಿಂಗಯ್ಯನವರು ಕನ್ನಡದ ಪ್ರಮುಖ ಲೇಖಕರಲ್ಲೊಬ್ಬರು. ಅವರು ಎರಡು ಬಾರಿ ವಿಧಾನಪರಿಷತ್ತಿನ ಸದಸ್ಯರಾಗಿದ್ದರು. ದಲಿತ ಹೋರಾಟ ಮತ್ತು ಸಾಮಾಜಿಕ ಸಮಾನತೆಗಾಗಿ ಕಾವ್ಯ ಸಾಹಿತ್ಯಗಳನ್ನು ರಚಿಸಿದವರು. ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದ್ದ ಅವರಿಗೆ ನಾಡೋಜ, ಪಂಪ ಪ್ರಶಸ್ತಿ, ನೃಪತುಂಗ ಪ್ರಶಸ್ತಿ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹತ್ತಾರು ಪ್ರಶಸ್ತಿಗಳು ಅವರಿಗೆ ಲಭಿಸಿದ್ದವು ಎಂದು ಛಲವಾದಿ ನಾರಾಯಣಸ್ವಾಮಿ ಹಾಗೂ ಅಂಬಾರಾಯ ಅಷ್ಠಗಿ ಯವರು ತಿಳಿಸಿದ್ದಾರೆ.

Contact Your\'s Advertisement; 9902492681

ಡಾ ಸಿದ್ದಲಿಂಗಯ್ಯ ನವರ ಅವರ ಅಂತ್ಯಕ್ರಿಯೆಯು ಸಕಲ ಸರ್ಕಾರಿ ಗೌರವದೋಂದಿಗೆ ನೆರವೇರಿಸಲು ಮಾನ್ಯ ಮುಖ್ಯಮಂತ್ರಿಗಳೋಂದಿಗೆ ದೂರವಾಣಿ ಮೂಲಕ ಮನವಿ ಮಾಡಿದ್ದಾರೆ , ಕುಟುಂಬ ವರ್ಗ, ಬಂಧುಮಿತ್ರರಿಗೆ ಮತ್ತು ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here