ಶಹಾಪುರ : ಬುದ್ಧ ಬಸವ ಅಂಬೇಡ್ಕರ್ ಹಾಗೂ ಪೆರಿಯಾರ್ ಅವರ ವಿಚಾರಧಾರೆಗಳನ್ನು ಮೈಗೂಡಿಸಿಕೊಂಡು ಆದರ್ಶಮಯವಾಗಿ ಬದುಕು ಸಾಗಿಸಿದ ಡಾ. ಸಿದ್ಧಲಿಂಗಯ್ಯನವರು ಇಂದಿನ ಯುವಜನತೆಗೆ ಸ್ಫೂರ್ತಿಯಾಗಿದ್ದಾರೆ ಎಂದು ನಗರದ ಖ್ಯಾತ ವೈದ್ಯರು ಹಾಗೂ ಬಿಜೆಪಿಯ ಹಿರಿಯ ಮುಖಂಡರಾದ ಡಾ ಚಂದ್ರಶೇಖರ ಸುಬೇದಾರ ಹೇಳಿದರು.
ನಗರದ ಅಚ್ಚಪ್ಪಗೌಡ ಸುಬೇದಾರ್ ಸ್ಮಾರಕ ಆಸ್ಪತ್ರೆಯ ಸಭಾಂಗಣದಲ್ಲಿ ಹಮ್ಮಿಕೊಂಡಿರುವ ಇತ್ತೀಚೆಗೆ ಅಗಲಿದ ಬಂಡಾಯ ಹಾಗೂ ದಲಿತ ಸಾಹಿತಿ ಡಾ.ಸಿದ್ಧಲಿಂಗಯ್ಯನವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ.ಸಮಾಜದಲ್ಲಿನ ಜಾತೀಯತೆ ಅಸ್ಪೃಶ್ಯತೆ ಅಸಮಾನತೆ ಮೂಢನಂಬಿಕೆ ಹೋಗಲಾಡಿಸಲು ತಮ್ಮ ಬಂಡಾಯ ಸಾಹಿತ್ಯದ ಮೂಲಕ ಸಾಕಷ್ಟು ಶ್ರಮಿಸಿದ ಕೀರ್ತಿ ಡಾ ಸಿದ್ಧಲಿಂಗಯ್ಯನವರು ಗೆ ಸಲ್ಲುತ್ತದೆ ಎಂದು ಅಭಿಪ್ರಾಯಪಟ್ಟರು ಅವರ ಅಗಲಿಕೆಯಿಂದ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ದುಃಖ ವ್ಯಕ್ತಪಡಿಸಿದರು.
ಅವರ ಮೊನಚಾದ ಬರವಣಿಗೆಯ ಮೂಲಕ ಸಮಾಜದಲ್ಲಿನ ಮೂಢನಂಬಿಕೆ ಹಾಗೂ ದಲಿತರ ನೋವುಗಳನ್ನು ಅಕ್ಷರ ರೂಪದಲ್ಲಿ ಎಳೆದು ಎತ್ತಿಹಿಡಿದ ಮಹಾನ್ ವ್ಯಕ್ತಿ ಯಾಗಿದ್ದರು,ಅಲ್ಲದೆ ಸಮುದಾಯದ ಪ್ರತಿಯೊಬ್ಬ ವ್ಯಕ್ತಿ ನಲ್ಲಿ ಸ್ವಾಭಿಮಾನದ ಕಿಚ್ಚನ್ನು ಹೊತ್ತಿಸಿ ಸನ್ಮಾರ್ಗದಲ್ಲಿ ಬದುಕುವ ಪಾಠವನ್ನು ಕಲಿಸಿದವರು ಎಂದರು.
ಈ ಸಂದರ್ಭದಲ್ಲಿ ಅಡಿವೆಪ್ಪ ಜಾಕಾ, ರಾಜಶೇಖರ್ ನಗನೂರ,ಡಾ. ಗಣೇಶ್, ಡಾ. ಸಂಗಮೇಶ,ಬಸವರಾಜ್ ಆಸ್ಪಲ್ಲಿ, ಅಮರೇಶ ದೇಸಾಯಿ, ಮಲ್ಲಿಕಾರ್ಜುನ ನಾಟೇಕಾರ್, ಹಾಗೂ ಇತರರು ಉಪಸ್ಥಿತರಿದ್ದರು
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…