ಬಿಸಿ ಬಿಸಿ ಸುದ್ದಿ

ಸರಕಾರಿ ಶಾಲೆಗಳಲ್ಲಿ ರಂಗ ಶಿಕ್ಷಕರ ನೇಮಿಸಲು ರಂಗಪ್ರೇಮಿಗಳ ಮನವಿ

ಸುರಪುರ: ೩೭೧ (ಜೆ) ಅಡಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಅಪರ ಆಯುಕ್ತರು, ಕಲಬುರಗಿ, ಇವರು ಹೊರಡಿಸಿರುವ ಅಧಿಸೂಚನೆಯಲ್ಲಿ ಸರ್ಕಾರಿ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲಾ (ಜಿಪಿಟಿ) ಶಿಕ್ಷಕರ ನೇಮಕಾತಿಯಲ್ಲಿ ರಂಗ ಶಿಕ್ಷಕರನ್ನು ಸೇರಿಸುವಂತೆ ರಂಗಪ್ರೇಮಿಗಳು ಮನವಿ ಮಾಡಿದರು.

ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂದೆ ಸಾಂಕೇತಿಕ ಪ್ರತಿಭಟನೆ ನಡೆಸಿದ ಅನೇಕ ಮುಖಂಡರು ಮಾತನಾಡಿ,ಸಾರ್ವಜನಿಕ ಶಿಕ್ಷಣ ಇಲಾಖೆ ಅಪರ ಆಯುಕ್ತರು ಕಲಬುರಗಿ ೨೦೧೯ರ ಎಸ್.ಎ.ಟಿ.ಎಸ್ ಆಧಾರದ ಮೇಲೆ ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರ ( ತರಗತಿ ೧-೫ ) ನೇಮಕಾತಿ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಪದವೀಧರ ಪ್ರಾಥಮಿಕ ಶಾಲಾ ಸಹ ಶಿಕ್ಷಕರು (ಜಿಪಿಟಿ), ದೈಹಿಕ ಶಿಕ್ಷಕರು, ಸಂಗೀತ ಶಿಕ್ಷಕರು ಹಾಗೂ ಚಿತ್ರಕಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸುವ ಕರಡು ಅಧಿಸೂಚನೆಯನ್ನು ತಯಾರಿಸಿ ಉಪನಿರ್ದೇಶಕರ ರುಜುವಿನೊಂದಿಗೆ ಸಲ್ಲಿಸಲು ಸೂಚಿಸಿರುತ್ತಾರೆ. ಸದರಿ ಅದಿಸೂಚನೆಯಲ್ಲಿ ರಂಗಭೂಮಿ ಶಿಕ್ಷಕರ ಕುರಿತು ಪ್ರಸ್ತಾವನೆಯನ್ನು ಸಲ್ಲಿಸುವಂತೆ ಮನವಿ ಮಾಡುವುದಾಗಿ ತಿಳಿಸಿದರು.

ಹೈದ್ರಾಬಾದ ಕರ್ನಾಟಕ ಪ್ರದೇಶದಲ್ಲಿ ರಂಗಪದವೀಧರರು ಸುಮಾರು ೩೦೦ ಕ್ಕೂ ಹೆಚ್ಚು ಇದ್ದು, ಪ್ರಸ್ತುತ ನೇಮಕಾತಿಗೆ ಅಧಿಸೂಚನೆಯಲ್ಲಿ ಸಂಗೀತ, ಚಿತ್ರಕಲಾ ಶಿಕ್ಷಕರೊಂದಿಗೆ ರಂಗ ಶಿಕ್ಷಕರನ್ನು ಸೇರಿಸಿ, ಶೇ. ೩೦ ರಷ್ಟಾದರೂ ಹುದ್ದೆಗಳನ್ನು ನಾಟಕ ಶಿಕ್ಷಕರ ನೇಮಕಾತಿಗೆ ಅವಕಾಶ ಕಲ್ಪಿಸಿ ಅಧಿಸೂಚನೆ ಹೊರಡಿಸಲು ತಮ್ಮಲ್ಲಿ ಮನವಿ ಮಾಡಕೊಳ್ಳುತ್ತೇವೆ. ೨೦೦೮ ರಲ್ಲಿ ರಾಜ್ಯಾದ್ಯಂತ ೬೩ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆದು ೪೩ ಮಂದಿಯನ್ನು ಮಾತ್ರ ಇಲಾಖೆ ನೇಮಕ ಮಾಡಿಕೊಂಡಿತ್ತು. ಅಂದಿನಿಂದ ಈವರೆಗೆ ಹೊಸದಾಗಿ ನೇಮಕಾತಿ ನಡೆದಿಲ್ಲ.

ಜೊತೆಗೆ ಎಂಟಕ್ಕೂ ಹೆಚ್ಚು ಮಂದಿ ನಿವೃತ್ತಿ ಹೊಂದಿದ್ದು ಆ ಹುದ್ದೆಗಳೂ ಸಹ ಖಾಲಿಯಾಗಿದ್ದು ಎಂಬುದನ್ನು ಈ ಸಂದರ್ಭದಲ್ಲಿ ತಮ್ಮ ಅವಗಾಹನೆಗೆ ತರುತ್ತಿದ್ದೇವೆ.ಎಲ್ಲೆಲ್ಲಿ ರಂಗಶಿಕ್ಷಕರ ನೇಮಕಾತಿ ಆಗಿದಿಯೋ ಅಲ್ಲಿ ಶಾಲೆಯ ಶೈಕ್ಷಣಿಕ ಗುಣಮಟ್ಟ, ವಿದ್ಯಾರ್ಥಿಗಳ ಹಾಜರಾತಿ ಮತ್ತು ಶಾಲೆಯ ಬಗ್ಗೆ ಸಾರ್ವಜನಿಕ ಗೌರವ ಹೆಚ್ಚಾಗಿದೆ. ಈ ನೆಲೆಯಲ್ಲಿ ಪ್ರತಿ ಶಾಲೆಯಲ್ಲೂ ರಂಗಶಿಕ್ಷಕರ ಅತ್ಯಗತ್ಯವಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಆಯ್ಕೆ ಮಾಡುವ ಪಟ್ಟಿಯಲ್ಲಿ ರಂಗಶಿಕ್ಷಕರನ್ನೂ ಸಹ ಸೇರಿಸಬೇಕೆಂದು ಒತ್ತಾಯ ಮಾಡುತ್ತೇವೆ. ಇದನ್ನು ತಾವು ಗಂಭೀರವಾಗಿ ಪರಿಗಣಿಸಿ ಈಗ ಹೊರಡಿಸರುವ ಆದೇಶವನ್ನು ಪುನರ್ ಪರಿಶೀಲನೆ ಮಾಡಿ ಅದರಲ್ಲಿ ರಂಗಶಿಕ್ಷಕರನ್ನು ಸೇರಿಸಬೇಕೆಂದು ಒತ್ತಾಯಿಸಿ ನಂತರ ಶಿಕ್ಷಣ ಸಚಿವರಿಗೆ ಬರೆದ ಮನವಿಯನ್ನು ಕಾರ್ಯಾಲಯದ ಸಿಬ್ಬಂದಿಗಳ ಮೂಲಕ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಗರನಾಡು ಸೇವಾ ಪ್ರತಿಷ್ಠಾನ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ, ನಾಲ್ವಡಿ.ಶ್ರೀ.ರಾಜ ವೆಂಕಟಪ್ಪ ನಾಯಕ ನಾಟ್ಯ ಕಲಾವಿಧರ ಸಾಂಸ್ಕೃತಿಕ ಸಂಘ ಸುರಪುರ ಅಧ್ಯಕ್ಷ ರವಿ ನಾಯಕ ಬೈರಿಮಡ್ಡಿ,ನಾಟಕಕಾರ ಮಲ್ಲೇಶಿ ಕೋನಾಳ ಶರಣ ಸೇವಾ ಸಂಸ್ಥೆ ಸುರಪುರ ಅಧ್ಯಕ್ಷ ಶಿವರಾಜ ಕಲಿಕೇರಿ ಪ್ರಮುಖರಾದ ಶರಣಪ್ಪ, ಮೌನೇಶ ದಳಪತಿ, ವಾಸುದೇವ ನಾಯಕ, ಪವನಕುಮಾರ, ದೇವು ನಾಯಕ ಸೇರಿದಂತೆ ಇತರರಿದ್ದರು.

emedialine

Recent Posts

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

14 mins ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

16 mins ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

21 mins ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

24 mins ago

ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಬೇಡಿ

ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…

26 mins ago

ಸೇಡಂ: `ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭ ನಾಳೆ

ಸೇಡಂ (ಕಲಬುರಗಿ);  ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…

48 mins ago