ಕಲಬುರಗಿ: 2020-21ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಸಾಮಾಜಿಕ ಅರಿವು ಸಾಂಸ್ಕøತಿಕ ಕಾರ್ಯಕ್ರಮದಡಿ ಅಸ್ಪೃಶ್ಯತೆಯ ಬಗ್ಗೆ ಅರಿವು ಮೂಡಿಸಲು ಬೀದಿ ನಾಟಕ ಆಯೋಜಿಸಲಾಗುತ್ತಿದೆ. ಇದಕ್ಕಾಗಿ ಅರ್ಹ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಬೀದಿ ನಾಟಕದ ಹಸ್ತಪ್ರತಿಗಳನ್ನು ಅಹ್ವಾನಿಸಲಾಗಿದೆ ಎಂದು ಕಲಬುರಗಿ ರಂಗಾಯಣ ಆಡಳಿತಾಧಿಕಾರಿಗಳಾದ ದತ್ತಪ್ಪ ಸಾಗನೂರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಡ್ಡಾಯವಾಗಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಮಾತ್ರ ಬೀದಿ ನಾಟಕ ರಚನೆ ಮಾಡಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಅಧಿನಿಯಮದ ಬಗ್ಗೆ ಬೀದಿನಾಟಕ ರಚಿಸಬೇಕು. ಆಯ್ಕೆಯಾದ ಒಂದು ನಾಟಕಕ್ಕೆ ಸೂಕ್ತ ಸಂಭಾವನೆ ನೀಡಲಾಗುತ್ತದೆ. ನಾಟಕದ ಆಯ್ಕೆಯ ಅಂತಿಮ ತೀರ್ಮಾನವು ರಂಗಾಯಣದಾಗಿದೆ.
ಅರ್ಹ ಅಭ್ಯರ್ಥಿಗಳು ಬೀದಿ ನಾಟಕದ ಹಸ್ತಪ್ರತಿಗಳನ್ನು ಆಡಳಿತಾಧಿಕಾರಿಗಳು, ರಂಗಾಯಣ ಡಾ. ಸಿದ್ದಯ್ಯ ಪುರಾಣಿಕ ಸಾಂಸ್ಕøತಿಕ ಸಮುಚ್ಛಯ, ಸೇಡಂ-ಶಹಾಬಾದ ವರ್ತುಲ ರಸ್ತೆ, ಕಲಬುರಗಿ-585105 ಅಥವಾ ರಂಗಾಯಣದ ಇ-ಮೇಲ್ rangayanakalaburagi@gmail.com ವಿಳಾಸಕ್ಕೆ 2021ರ ಜೂನ್ 20 ರ ಬೆಳಿಗ್ಗೆ 11.30 ಗಂಟೆಯೊಳಗಾಗಿ ಕಳುಹಿಸಬೇಕು. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ 08472-227735ಗೆ ಸಂಪರ್ಕಿಸಲು ಕೋರಲಾಗಿದೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…