ಸೇವಾ ಸಿಂಧು ತಂತ್ರಾಂಶದ ಮೂಲಕ ಜನನ, ಮರಣ ಪ್ರಮಾಣ ಪತ್ರ ಮುದ್ರಿಸಲು ಅವಕಾಶ

0
76

ಬೆಂಗಳೂರು: ಸೇವಾ ಸಿಂಧು ತಂತ್ರಾಂಶದ ಮೂಲಕ ಜನನ ಮತ್ತು ಮರಣ ಪ್ರಮಾಣ ಪತ್ರಗಳನ್ನು ಸಾರ್ವಜನಿಕರೇ ಮುದ್ರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ.

ಸಾರ್ವಜನಿಕರು sevasindhu.karnataka.gov.in  ಗೆ ಲಾಗಿನ್ ಆಗಿ ಜನನ ಮತ್ತು ಮರಣ ಪ್ರಮಾಣ ಪತ್ರಗಳನ್ನು A4  ಬಿಳಿ ಹಾಳೆಯಲ್ಲಿ ನಿಗಧಿತ ಶುಲ್ಕ ರೂ.5 ಅನ್ನು online ಮೂಲಕ ಪಾವತಿಸಿ ಡೌನ್‍ಲೋಡ್ ಮಾಡಿ ಮುದ್ರಿಸಿಕೊಳ್ಳಬಹುದು ಅಥವಾ ಸಾರ್ವಜನಿಕರು ನಾಗರಿಕ ಸೇವಾ ಕೇಂದ್ರಗಳಾದ ಸೇವಾಸಿಂಧು, ಗ್ರಾಮಒನ್ ಕೇಂದ್ರಗಳಲ್ಲಿ ಮನವಿ ಸಲ್ಲಿಸಿ ನಿಗಧಿತ ಶುಲ್ಕ ರೂ.25 ಅನ್ನು ಪಾವತಿಸಿ ಜನನ ಮತ್ತು ಮರಣ ಪ್ರಮಾಣ ಪತ್ರಗಳನ್ನು ಪಡೆದುಕೊಳ್ಳಬಹುದಾಗಿದೆ.

Contact Your\'s Advertisement; 9902492681

ಸೇವಾಸಿಂಧು ತಂತ್ರಾಂಶದಲ್ಲಿ ಮುದ್ರಿಸಿದ ಪ್ರಮಾಣ ಪತ್ರಗಳ ನೈಜತೆಯನ್ನು ಇ- ತಂತ್ರಾಂಶದ https://ejanma.karnataka.gov.in ನಲ್ಲಿ ಪರಿಶೀಲಿಸುವ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗಿದೆ ಎಂದು ಸಚಿವರ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here