ಬೆಂಗಳೂರು: ಸೇವಾ ಸಿಂಧು ತಂತ್ರಾಂಶದ ಮೂಲಕ ಜನನ ಮತ್ತು ಮರಣ ಪ್ರಮಾಣ ಪತ್ರಗಳನ್ನು ಸಾರ್ವಜನಿಕರೇ ಮುದ್ರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ.
ಸಾರ್ವಜನಿಕರು sevasindhu.karnataka.gov.in ಗೆ ಲಾಗಿನ್ ಆಗಿ ಜನನ ಮತ್ತು ಮರಣ ಪ್ರಮಾಣ ಪತ್ರಗಳನ್ನು A4 ಬಿಳಿ ಹಾಳೆಯಲ್ಲಿ ನಿಗಧಿತ ಶುಲ್ಕ ರೂ.5 ಅನ್ನು online ಮೂಲಕ ಪಾವತಿಸಿ ಡೌನ್‍ಲೋಡ್ ಮಾಡಿ ಮುದ್ರಿಸಿಕೊಳ್ಳಬಹುದು ಅಥವಾ ಸಾರ್ವಜನಿಕರು ನಾಗರಿಕ ಸೇವಾ ಕೇಂದ್ರಗಳಾದ ಸೇವಾಸಿಂಧು, ಗ್ರಾಮಒನ್ ಕೇಂದ್ರಗಳಲ್ಲಿ ಮನವಿ ಸಲ್ಲಿಸಿ ನಿಗಧಿತ ಶುಲ್ಕ ರೂ.25 ಅನ್ನು ಪಾವತಿಸಿ ಜನನ ಮತ್ತು ಮರಣ ಪ್ರಮಾಣ ಪತ್ರಗಳನ್ನು ಪಡೆದುಕೊಳ್ಳಬಹುದಾಗಿದೆ.
ಸೇವಾಸಿಂಧು ತಂತ್ರಾಂಶದಲ್ಲಿ ಮುದ್ರಿಸಿದ ಪ್ರಮಾಣ ಪತ್ರಗಳ ನೈಜತೆಯನ್ನು ಇ- ತಂತ್ರಾಂಶದ https://ejanma.karnataka.gov.in ನಲ್ಲಿ ಪರಿಶೀಲಿಸುವ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗಿದೆ ಎಂದು ಸಚಿವರ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…