ಕಲಬುರಗಿ: ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಸಚಿವ ಶಾಮನೂರ ಶಿವಶಂಕ್ರಪ್ಪ ಅವರು ಮಹಾಮಾರಿ ಕೋವಿಡ್ ಪರಿಹಾರ ನಿಧಿಗೆ ಕೋಟ್ಯಾಂತರ ರೂ. ನೀಡುವ ಮೂಲಕ ಕರೋನಾ ಸಂಕಷ್ಟದಲ್ಲಿ ಸಿಲುಕಿರುವ ರಾಜ್ಯದ ಜನತೆ ನೆರವಾಗುತ್ತಿರದ್ದಾರೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಅಮರೇಶ ಪಾಟೀಲ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವೀರಶೈವ ಲಿಂಗಾಯತ ಸಮಾಜದ ಸಂಘಟನೆ ಹಾಗೂ ಅಭಿವೃದ್ದಿಗೆ ಶಾಮನೂರ ಶಿವಶಂಕ್ರಪ್ಪನವರು ಕೊಡುಗೆ ಅಪಾರವಾಗಿದೆ. ಸಮಾಜದ ಅಭಿವೃದ್ದಿಗೆ ಹಾಗೂ ಸಾಮಾಜಿಕ ಕಳಕಳಿಯೊಂದಿಗೆ ನಿರಂತರವಾಗಿ ಹಗಲು ರಾತ್ರಿ ಎನ್ನದೇ ಶ್ರಮಿಸುತ್ತಿದ್ದಾರೆ ಎಂದರು.
ಶಾಮನೂರ ಶಿವಶಂಕ್ರಪ್ಪನವರು ಶಾಸಕರಾಗಿ, ಸಚಿವರಾಗಿ ರಾಜ್ಯ ಅಭಿವೃದ್ದಿಗೆ ಮಹತ್ತರವಾದ ಕೊಡುಗೆ ನೀಡುತ್ತ, ಮಹಾಮಾರಿ ಕರೋನಾ ಸಂದರ್ಭದಲ್ಲಿ ಪರಿಹಾರ ನಿಧಿಗೆ ಕೋಟ್ಯಾಂತರ ರೂ. ಪರಿಹಾರವನ್ನು ನೀಡಿ ಅತ್ಯುತ್ತಮ ಕಾರ್ಯ ಮಾಡಿದ್ದಾರೆ. ಅವರು ತಮ್ಮ ಜೀವನದೂದ್ದಕ್ಕೂ ಅವಿಸ್ಮರಣಿಯ ಕಾರ್ಯಗಳನ್ನು ಮಾಡುತ್ತ ರಾಜಕೀಯದಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಲ್ಲಿ ಎಂದು ಹಾರೈಸುತ್ತನೇ ಎಂದರು.