ಸಿಎಂ ಯಡಿಯೂರಪ್ಪರನ್ನು ಹುದ್ದೆಯಿಂದ ಬದಲಾಯಿಸಬಾರದು: ದಯಾನಂದ ಪಾಟೀಲ್

0
112

ಕಲಬುರಗಿ: ಕರ್ನಾಟಕ ಸರಕಾರದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಹುದ್ದೆಯನ್ನು ಅತ್ಯಂತ ಸಮರ್ಥವಾಗಿ ನಿರ್ವಹಿಸಿಕೊಂಡು ಹೋಗುತ್ತಿದ್ದು ಯಾವುದೇ ಕಾರಣಕ್ಕೂ ಯಡಿಯೂರಪ್ಪ ಅವರನ್ನು ಸಿಎಂ ಹುದ್ದೆಯಿಂದ ಬದಲಾಯಿಸಬಾರದು ಎಂದು ವೀರಶೈವ ಲಿಂಗಾಯತ ಯುವ ವೇದಿಕೆಯ ರಾಜ್ಯಾಧ್ಯಕ್ಷ ಪ್ರಶಾಂತ ಕಲ್ಲೂರ ಅವರು ಆದೇಶದ ಮೇರೆಗೆ ಕಲಬುರಗಿ ಜಿಲ್ಲಾ ಸಮಿತಿಯ ಜಿಲ್ಲಾಧ್ಯಕ್ಷ ದಯಾನಂದ ಎಂ.ಪಾಟೀಲ್ ಪತ್ರಿಕಾ ಪ್ರಕಟಣೆ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ಕೆಲವರು ಅನಾವಶ್ಯಕವಾಗಿ ಯಡಿಯೂರಪ್ಪನವರ ಘನತೆ ಧಕ್ಕೆ ತರುವಂತಹ ಹೇಳಿಕೆಗಳನ್ನು ನೀಡಿ ಮಾನಸಿಕವಾಗಿ ನೋವುಂಟು ಮಾಡುವಂತೆ ನಡೆದುಕೊಳ್ಳುತ್ತಿರುವುದು ಯಡಿಯೂರಪ್ಪನವರಿಗೆ ಅಷ್ಟೇ ಅಲ್ಲ ಇಡೀ ವೀರಶೈವ- ಲಿಂಗಾಯ ಸಮಾಜಕ್ಕೆ ಮಾಡುವಂತಹ ಅವಮಾನವಾಗುತ್ತಿದೆ ಎಂದರು.

Contact Your\'s Advertisement; 9902492681

ಈ ಹಿಂದೆ ತಮಿಳುನಾಡಿನ ಮುಖ್ಯಮಂತ್ರಿ ಕರುಣಾನಿಧಿಯವರು ೧೫ ವರ್ಷಗಳ ಕಾಲ ಗಾಲಿ ಕುರ್ಚಿಯಲ್ಲಿಯೇ ಇದ್ದು ಅಧಿಕಾರ ನಡೆಸಿರುವಾಗ, ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾನಸಿಕವಾಗಿ ಧೈಹಿಕವಾಗಿ ಆರೋಗ್ಯವಂತರಾಗಿದ್ದು ರಾಜ್ಯವನ್ನು ಮುನ್ನಡೆಸಿಕೊಂಡು ಹೋಗುವಂತಹ ಸಾಮರ್ಥ್ಯವನ್ನು ಹೊಂದಿರುವುದರಿಂದ ಅನಾವಶ್ಯಕವಾಗಿ ಗೊಂದಲ ಸೃಷ್ಠಿ ಮಾಡಿ ಸಮಾಜದ ಸ್ವಾಸ್ಥವನ್ನು ಕೆಡಿಸುವುದು ಸೂಕ್ತವಲ್ಲ ಎಂದು ಹೇಳಿದರು.

ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲು ಶಾಸಕರು ಗೆಲ್ಲಲು ಯಡಿಯೂರಪ್ಪನವರ ಪಾತ್ರ ಪ್ರಮುಖವಾಗಿದ್ದು ಸರಕಾರ ರಚಿಸುವಲ್ಲಿ ಅನೇಕ ವ್ಯಕ್ತಿಗಳ ತ್ಯಾಗ ಮತ್ತು ಹೋರಾಟದ ಫಲ ಕಾರಣವಾಗಿರುತ್ತದೆ. ಹೀಗಿರುವಾಗ ಅನಾವಶ್ಯಕವಾಗಿ ಕೆಲವರು ಯಡಿಯೂರಪ್ಪನವರಿಗೆ ತೊಂದರೆ ನೀಡುತ್ತಿರುವುದನ್ನು ವೀರಶೈವ ಲಿಂಗಾಯತ ಯುವ ವೇದಿಕೆಯು ಖಂಡಿಸುವುದಲ್ಲದೇ ಯಡಿಯೂರಪ್ಪನವರು ಪೂರ್ಣಾವಧಿ ಅಧಿಕಾರ ಪೂರೈಸಲು ವೀರಶೈವ ಲಿಂಗಾಯತ ಯುವ ವೇದಿಕೆಯು ಸದಾ ಬೆಂಬಲಿಸುತ್ತದೆ ಎಂದು ದಯಾನಂದ ಎಂ.ಪಾಟೀಲ್ ಹೇಳಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here