ಕಲಬುರಗಿ: ಸರಕಾರದ ಆದೇಶದಂತೆ ೧೫ನೇ ಹಣಕಾಸು ಯೋಜನೆಯಲ್ಲಿ ಪಂಪ ಆಪರೇಟರ್ ಮತ್ತು ಕಸಗೂಡಿಸುವ ಸಿಬ್ಬಂದಿಗಳ ವೇತನ ಪಾವತಿಗಾಗಿ,ಕರವಸೂಲಿಯಲ್ಲಿ ಬಿಲ್ ಕಲೆಕ್ಟರ್/ಗುಮಾಸ್ತ, ಸಿಪಾಯಿಗಳ ವೇತನ ಪಾವತಿಗಾಗಿ, ಮರೇಗಾ ಯೋಜನೆಯಲ್ಲಿ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಗೆ ವೇತನ ಪಾವತಿಗಾಗಿ,ಗ್ರಾಮ ಪಂಚಾಯತ ಸಿಬ್ಬಂದಿಗಳನ್ನು ಕರೋನ ವಾರಿಯರ್ಸ ಎಂದು ಆದೇಶ ಮಾಡುವಂತೆ ಒತ್ತಾಯಿಸಿ ಗ್ರಾಮ ಪಂಚಾಯತಿ ನೌಕರರ ಸಂಘ ರಾಜ್ಯ ಸಮಿತಿ ತಾಲ್ಲೂಕಿನ ಕವಲಗಾ ಬಿ ಗ್ರಾಮ ಪಂಚಾಯತಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿತು.
ಜಿಲ್ಲೆಯ ಸುಮಾರು ೨೦೦ ಕ್ಕೂ ಹೆಚ್ಚು ಗ್ರಾಮ ಪಂಚಾಯತಿ ಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಬಿಲ್ ಕಲೆಕ್ಟರ್/ಗುಮಾಸ್ತ ರಿಂದ ಕಾರ್ಯದರ್ಶಿ ಗ್ರೇಡ ೨ ಮತ್ತು ಲೆಕ್ಕ ಸಹಾಯಕ ಹುದ್ದೆಗೆ ಬಡ್ತಿಗೆ ತಡೆಹಿಡಿದಿರುವ ಆದೇಶ ಹಿಂಪಡೆದು ನಿವೃತ್ತಿ ಅಂಚಿನಲ್ಲಿರುವ ನೌಕರರಿಗೆ ಬಡ್ತಿ ಗೆ ಅವಕಾಶ ಮಾಡುವ ಬಗ್ಗೆ,ನಿವೃತ್ತಿ ವೇತನ ಮತ್ತು ಇತರೆ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕಲಬುರಗಿ ತಾಲ್ಲೂಕಿನ ಕವಲಗಾ ಬಿ ಗ್ರಾಮ ಪಂಚಾಯತಿ ಎದುರು ಪ್ರತಿಭಟನೆ ಮಾಡಿ ಮನವಿ ಪತ್ರ ಸಲ್ಲಿಸಲಾಯಿತು.
ಪ್ರತಿಭಟನೆ ಯಲ್ಲಿ ಶಿವಾನಂದ ಕವಲಗಾ ಬಿ ಜಿಲ್ಲಾ ಖಜಾಂಚಿ ಕಲಬುರಗಿ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಗಿದ್ದು, ದೇವಿಂದ್ರ ಮಿಜೇಜಿ,ಶರಣಬಸಪ್ಪ ಇತರರು ಭಾಗವಹಿಸಿದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…