ಎಂಟನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

0
25

ಕಲಬುರಗಿ: ಮಹಿಳಾ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಹತ್ತಿರವಿರುವ ಸರ್ಕಾರಿ ಕಿರಿಯ ತಾಂತ್ರಿಕ ಶಾಲೆಯಲ್ಲಿ 2021-22ನೇ ಸಾಲಿಗೆ 8ನೇ ತರಗತಿಗೆ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸರ್ಕಾರಿ ಕಿರಿಯ ತಾಂತ್ರಿಕ ಶಾಲೆಯ ಪ್ರಾಚಾರ್ಯರು ತಿಳಿಸಿದ್ದಾರೆ.

ಕೋವಿಡ್-19 ಹಿನ್ನೆಲೆಯಲ್ಲಿ ಈ ಶಾಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಹಾಗೂ ನಿರ್ದೇಶನಗಳನ್ನು ಪಾಲಿಸಿ ದಾಖಲಾತಿ ಪ್ರವೇಶ ಪ್ರಕ್ರಿಯೆ ಪ್ರಾರಂಭಿಸಲಾಗುತ್ತದೆ. ಪ್ರವೇಶ ಪಡೆಯಲಿಚ್ಛಿಸುವ ಅರ್ಹ ವಿದ್ಯಾರ್ಥಿಗಳು 2021ರ ಜುಲೈ 15ರವರೆಗೆ ಕಲಬುರಗಿ ಸರ್ಕಾರಿ ಕಿರಿಯ ತಾಂತ್ರಿಕ ಶಾಲೆಯಲ್ಲಿ ಕಚೇರಿ ವೇಳೆಯಲ್ಲಿ ಅರ್ಜಿ ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ಕರ್ನಾಟಕ ಯಾವುದೇ ಅಂಗೀಕೃತ ಶಾಲೆಯಲ್ಲಿ 1 ರಿಂದ 7 ನೇ ತರಗತಿಯವರೆಗೆ ಕನಿಷ್ಠ 5 ವರ್ಷಗಳ ಕಾಲ ವ್ಯಾಸಂಗ ಮಾಡಿರಬೇಕು. ಕನ್ನಡ ಮತ್ತು ಇಂಗ್ಲೀಷ ಮಾಧ್ಯಮದಲ್ಲಿ ಅಭ್ಯಾಸ ಮಾಡಿರುವ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.

Contact Your\'s Advertisement; 9902492681

ವಿದ್ಯಾರ್ಥಿಗಳು ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿಯ ಮಹಿಳಾ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಹತ್ತಿರವಿರುವ ಕಲಬುರಗಿ ಕಿರಿಯ ತಾಂತ್ರಿಕ ಶಾಲೆಗೆ ಸಂಪರ್ಕಿಸಲು ಕೋರಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here