ಕಲಬುರಗಿ: ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಖಾಸಗಿ ಅಂಬ್ಯು ಲೆನ್ಸ್ ಚಾಲಕನಿಂದ ಅತ್ಯಾಚಾರ ಯತ್ನಕ್ಕೊಳಗಾಗಿದ್ದ ನಗರದ ೨೫ ವರ್ಷದ ಮಹಿಳೆ ಸಾವಿಗೀಡಾಗಿದ್ದು, ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಮತ್ತು ಮೃತ ಮಹಿಳೆಯ ಕುಟುಂಬಕ್ಕೆ ೨೫ ಲಕ್ಷ ರೂಪಾಯಿ ಪರಿಹಾರ ನೀಡ ಬೇಕು ಎಂದು ಆಗ್ರಹಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ ವಾದ) ಜಿಲ್ಲಾ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿ ಭಟನೆ ನಡೆಸಲಾಯಿತು.
ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕು, ಆಸ್ಪತ್ರೆಯಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು, ಆಸ್ಪತ್ರೆಯಲ್ಲಿ ಸಿ.ಸಿ.ಟಿ.ವಿ.ಕ್ಯಾಮೆರಾ ಅಳವಡಿ ಸ ಬೇಕು, ಜಿಲ್ಲಾ ಉಸ್ತುವಾರಿ ಸಚಿವರು ಮಹಿಳೆಯ ಸಾವಿನ ಬಗ್ಗೆ ಜಿಲ್ಲೆಯ ಜನತೆಗೆ ಉತ್ತರ ನೀಡ ಬೇಕು ಎಂದು ಪ್ರತಿ ಭಟನಾಕಾರರು ಆಗ್ರಹಿಸಿದರು.
ಪಕ್ಷದ ಜಿಲ್ಲಾ ಕಾರ್ಯದರ್ಶಿ ಶರಣಬಸಪ್ಪಾ ಮಮಶೆಟ್ಟಿ, ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ಕೆ.ನೀಲಾ, ಮುಖಂಡರಾದ ಶ್ರೀಮಂತ ಬಿರಾದಾರ, ಪಾಂಡುರಂಗ ಮಾವಿನಕರ್, ಸುಧಾಮ ಧನ್ನಿ ಇದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…