ಮೌಲಾನಾ ಆಜಾದ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ 6ನೇ ತರಗತಿಗೆ ಉಚಿತ ಪ್ರವೇಶಾತಿಗೆ ಅರ್ಜಿ ಆಹ್ವಾನ

0
405

ಕಲಬುರಗಿ: 2021-22ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಜಿಲ್ಲೆಯಲ್ಲಿ ಅಲ್ಬಸಂಖ್ಯಾತರ ಕಲ್ಕಾಣ ಇಲಾಖಾ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳಲ್ಲಿ 6ನೇ ತರಗತಿ ಉಚಿತ ಪ್ರವೇಶ ಪ್ರಕ್ರಿಯೆ ಪ್ರಾರಂಭಿಸಲಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮಹಿಮೂದ್ ಎಸ್ ಅವರು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಆಲ್ಬಸಂಖ್ಯಾತರ ಸಮುದಾಯವಾದ ಮುಸ್ಲಿಂ, ಕ್ರಿಶ್ಚಿಯನ್‌. ಜೈನ್‌, ಬೌದ್ಧ, ಸಿಖ್‌ ಪಾರ್ಸಿ ಸಮುದಾಯಕ್ಕೆ ಶೇಕಡಾ 75% ಮತ್ತು ಇತರೆ ವರ್ಗಗಳ ವಿದ್ಯಾರ್ಥಿಗಳಿಗೆ ಶೇಕಡಾ 25% ಸ್ಥಾನಗಳು ಮೀಸಲಿಡಲಾಗಿದೆ ಎಂದು ತಿಳಿಸಿದ್ದಾರೆ.

Contact Your\'s Advertisement; 9902492681

ಇಚ್ಛೆಯುಳ್ಳ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು 15.07.2021 ಕೊನೆಯ ದಿನಾಂಕವಾಗಿದೆ. ಆಸಕ್ತ ವಿದ್ಯಾರ್ಥಿಗಳು ನಿಗದಿಪಡಿಸಿರುವ ದಿನಾಂಕದೊಳಗೆ ಈ ಕೆಳಗೆ ತೋರಿಸಿದ ಮೌಲಾನಾ ಆಜಾದ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳಲ್ಲಿ ಅರ್ಜಿಯನ್ನು ಪಡೆದುಕೊಂಡು ಪ್ರವೇಶ ಪಡೆಯಲು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here