ವಿಕಲಚೇತನರಿಗೆ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ತರಬೇತಿ: ಪ್ರಸ್ತಾವನೆಗೆ ಆಹ್ವಾನ

0
36

ಕಲಬುರಗಿ: ಜಿಲ್ಲೆಯ ವಿಕಲಚೇತನರಿಗೆ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯದ ಕುರಿತು ತರಬೇತಿ ನೀಡಲು ಜಿಲ್ಲೆಯ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಪ್ರಸ್ತಾವನೆ ಆಹ್ವಾನಿಸಲಾಗಿದೆ ಎಂದು ಕಲಬುರಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸಾಧಿಕ್ ಹುಸೇನ್‍ಖಾನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಹ ಸ್ವಯಂ ಸೇವಾ ಸಂಸ್ಥೆಗಳು ತಮ್ಮ ಸಂಸ್ಥೆಯ ಲೆಟರ್ ಪ್ಯಾಡ್‍ನಲ್ಲಿ ಮನವಿಯೊಂದಿಗೆ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಸಂಸ್ಥೆಯು ಸೊಸೈಟಿ/ ಟ್ರಸ್ಟ್ ಕಾಯ್ದೆಯಡಿ ನೋಂದಣಿಯಾಗಿರಬೇಕು. ನೋಂದಣಿ ಪ್ರಮಾಣ ಪತ್ರ ಹಾಗೂ ನೋಂದಣಿ ನವೀಕರಣ ಪ್ರಮಾಣ ಪತ್ರ ಸಲ್ಲಿಸಬೇಕು. ಹಿಂದಿನ ಎರಡು ವರ್ಷಗಳ ಸಿ.ಎ. ಆಡಿಟ್ ವರದಿ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ಮಾನ್ಯತೆ ಹೊಂದಿರುವ ಬಗ್ಗೆ ದಾಖಲೆ, ಅಂಗವಿಕಲರ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ 2016ರಡಿ ನೋಂದಣಿಯಾಗಿರಬೇಕು. ವಿಕಲಚೇತನರಿಗೆ ತರಬೇತಿ ನೀಡುವಲ್ಲಿ ಕನಿಷ್ಠ 5 ವರ್ಷಗಳ ಅನುಭವ ಹೊಂದಿರಬೇಕು. ಈ ಸಂಸ್ಥೆಯು ಜಿಲ್ಲೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರಬೇಕು.

Contact Your\'s Advertisement; 9902492681

ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ವಿಕಲಚೇತನರಿಗೆ ವೃತ್ತಿ ಮಾರ್ಗದರ್ಶನ (Career Guidance Skill), ಯೋಗ್ಯತೆಯ ಮೌಲ್ಯಮಾಪನ Aptitude Assessmen), ಜೀವನೋಪಾಯ ತರಬೇತಿ (Life Skill Training) ವಿಶೇಷ ತರಬೇತಿಯನ್ನು ನೀಡುವಂತೆ ಯೋಜನೆಯನ್ನು ರೂಪಿಸಿ ವಿಕಲಚೇತನರ ಸಬಲೀಕರಣ ಇಲಾಖೆಯಿಂದ ಅನುಷ್ಠಾನಗೊಳಿಸಲು ತಿಳಿಸಲಾಗಿದೆ.

ಅರ್ಹ ಸ್ವಯಂ ಸೇವಾ ಸಂಸ್ಥೆಗಳು ಎಲ್ಲಾ ಅವಶ್ಯಕ ದಾಖಲೆಗಳೊಂದಿಗೆ ಪ್ರಸ್ತಾವನೆಯನ್ನು ಕಲಬುರಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ 2021ರ ಜೂನ್ 28ರ ಸಂಜೆ 5.30 ಗಂಟೆಯೊಳಗಾಗಿ ಸಲ್ಲಿಸಬೇಕು. ಅವಧಿ ಮೀರಿ ಬಂದ ಪ್ರಸ್ತಾವನೆಗಳನ್ನು ಸ್ವೀಕರಿಸುವುದಿಲ್ಲ. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 08472-235222ಗೆ ಗೆ ಸಂಪರ್ಕಿಸಲು ಕೋರಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here