ಆಶಾ ಕಾರ್ಯಕರ್ತರಿಗೆ ‘ಕೊಡೆ’ ವಿತರಣೆ ನಾಳೆ

ಕಲಬುರಗಿ: ವೈಯಕ್ತಿಕ ಹಿತಾಸಕ್ತಿಗಿಂತ ಸಮಾಜದ ಹಿತವನ್ನೇ ಸದಾ ಬಯಸಿ, ಪರೋಪಕಾರಿಯಾಗಿದ್ದ ಜಿಲ್ಲಾ ವೀರಶೈವ ಮಹಾಸಭಾದ ಮಾಜಿ ಅಧ್ಯಕ್ಷ ಲಿಂಗೈಕ್ಯ ಡಿ.ವಿ.ಪಾಟೀಲ ಸ್ಮರಣಾರ್ಥ ಇಲ್ಲಿನ ವಿಶ್ವಜ್ಯೋತಿ ಪ್ರತಿಷ್ಠಾನದ ವತಿಯಿಂದ ರವಿವಾರ (ಜೂನ್-೨೦) ಬೆಳಗ್ಗೆ ೯.೩೦ ಕ್ಕೆ ಜಗತ್ ಬಡಾವಣೆಯಲ್ಲಿ ಬಸವೇಶ್ವರ ಸಹಕಾರ ಬ್ಯಾಂಕಿನ ನಿರ್ದೇಶಕಿ ಸುಶೀಲಾಬಾಯಿ ಡಿ.ವಿ.ಪಾಟೀಲ ನೇತೃತ್ವದಲ್ಲಿ ‘ಆಶಾಕಾರ್ಯಕರ್ತ’ರಿಗೆ ಕೊಡೆ (ಛತ್ರಿ) ಗಳು ಮತ್ತು ಟಾರ್ಚ್‌ಗಳು ವಿತರಿಸಲಾಗುತ್ತಿದೆ ಎಂದು ಪ್ರತಿಷ್ಠಾನ ಸಂಸ್ಥಾಪಕ ವಿಜಯಕುಮಾರ ತೇಗಲತಿಪ್ಪಿ ತಿಳಿಸಿದ್ದಾರೆ.

ನುಡಿ ಪ್ರಾಧಾನ್ಯತೆಗಿಂತ ನಡತೆಗೆ ಆದ್ಯತೆಯನ್ನು ನೀಡಿ, ಸಮಾಜ ಸೇವೆಯಲ್ಲೇ ದೇವರನ್ನು ಕಾಣುತ್ತಿದ್ದ ಡಿ.ವಿ.ಪಾಟೀಲ ಅವರನ್ನು ಶಾಶ್ವತವಾಗಿ ನೆನಪಿಡುವ ನಿಟ್ಟಿನಲ್ಲಿ ಪ್ರತಿ ವರ್ಷ ಈ ರೀತಿಯ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರಲಾಗುತ್ತಿದೆ. ಮಾಜಿ ಎಂಎಲ್ಸಿ ಅಲ್ಲಮಪ್ರಭು ಪಾಟೀಲ, ಹೆಚ್ಕೆಸಿಸಿಐ ಅಧ್ಯಕ್ಷ ಪ್ರಶಾಂತ ಮಾನಕರ್, ಪ್ರಧಾನ ಕಾರ್ಯದರ್ಶಿ ಶರಣು ಪಪ್ಪಾ, ಜಿಲ್ಲಾ ವೀರಶೈವ ಸಮಾಜ ಅಧ್ಯಕ್ಷ ಅರುಣಕುಮಾರ ಪಾಟೀಲ, ಉಪಾಧ್ಯಕ್ಷ ಕಲ್ಯಾಣಪ್ಪ ಪಾಟೀಲ ಮಳಖೇಡ, ಬಸವೇಶ್ವರ ಸಹಕಾರ ಬ್ಯಾಂಕಿನ ನಿರ್ದೇಶಕಿ ಸುಶೀಲಾಬಾಯಿ ಡಿ.ವಿ.ಪಾಟೀಲ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿರುವರು.

ಕೊರೊನಾದ ಸಂಕಷ್ಟದ ಸಂದರ್ಭದಲ್ಲಿ ಬಡವರು, ನಿರ್ಗತಿಕರಿಗೆ ನೆರವು ನೀಡಿ ಮಾನವೀಯತೆ ಮೆರೆಯುವ ಕಾರ್ಯ ಮಾಡಿದ ಅನೇಕ ಸಮಾಜ ಸೇವಕರನ್ನೂ ಸಹ ಇದೇ ಸಂದರ್ಭದಲ್ಲಿ ಗೌರವಿಸಲಾಗುತ್ತಿದೆ ಎಂದು ಅವರು ವಿವರಿಸಿದ್ದಾರೆ.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

2 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

8 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

19 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

20 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

20 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420