ಕಲಬುರಗಿ: ಜಿಲ್ಲಾ ವೀರಶೈವ ಮಹಾಸಭಾದ ಮಾಜಿ ಅಧ್ಯಕ್ಷ-ಪರೋಪಕಾರಿಯಾಗಿದ್ದ ಲಿಂಗೈಕ್ಯ ಡಿ.ವಿ.ಪಾಟೀಲ ಸ್ಮರಣಾರ್ಥ ಇಲ್ಲಿನ ವಿಶ್ವಜ್ಯೋತಿ ಪ್ರತಿಷ್ಠಾನದ ವತಿಯಿಂದ ರವಿವಾರ ಏರ್ಪಡಿಸಿದ ಸಮಾರಂಭದಲ್ಲಿ ಕೊರೊನಾದ ಸಂಕಷ್ಟದ ಕಾಲದಲ್ಲಿ ತಮ್ಮ ಜೀವದ ಹಂಗನ್ನು ತೊರೆದು ಪ್ರಾಮಾಣಿಕ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತರಿಗೆ ಕೊಡೆಗಳು ಮತ್ತು ಮಾಸ್ಕ್‌ಗಳನ್ನು ಕೊಡುವ ಮೂಲಕ ಮಾನವೀಯತೆ ಮೆರೆಯುವ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಮಾಜಿ ಎಂಎಲ್ಸಿ ಅಲ್ಲಮಪ್ರಭು ಪಾಟೀಲ ನೆಲೋಗಿ, ಲಿಂ.ಡಿ.ವಿ.ಪಾಟೀಲ ಅವರು ಸರ್ವ ಸಮಾಜದ ಜನರ ಬಹು ದೊಡ್ಡ ಶಕ್ತಿಯಾಗಿದ್ದರು. ಬುದ್ಧ, ಬಸವ, ಅಂಬೇಡ್ಕರ್‌ರ ವಿಚಾರಗಳನ್ನು ತಮ್ಮ ಬದುಕಿನಲ್ಲಿ ಅಳಡಿಸಿಕೊಂಡು ತತ್ವಕ್ಕಾಗಿ ಬದುಕು ಮೀಸಲಿಟ್ಟು, ಕೊನೆಗೆ ಸರ್ವ ಸಮಾಜದ ಅಭಿವೃದ್ಧಿಗಾಗಿ ಪ್ರಾಣವನ್ನೂ ಕೂಡ ನೀಡಿದ ಮಹಾನ್ ವ್ಯಕ್ತಿಯಾಗಿದ್ದರು. ಇಂಥ ಶ್ರೇಷ್ಠ ವ್ಯಕ್ತಿತ್ವ ಹೊಂದಿದ ಡಿ.ವಿ.ಪಾಟೀಲರು ಇಂದಿನ ಯುವ ಜನಾಂಗಕ್ಕೆ ಪ್ರೇರಣೆಯಾಗಿದ್ದಾರೆ ಎಂದರು. ಅವರ ಹೆಸರು ಶಾಶ್ವತವಾಗಿ ಉಳಿಯಲು ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ವೀರಶೈವ ಸಮಾಜದ ಮಹಿಳಾ ವಸತಿ ನಿಲಯಕ್ಕೆ ಡಿ.ವಿ.ಪಾಟೀಲ ಹೆಸರಿಡಲಿ ಎಂದು ಸಲಹೆ ನೀಡಿದರು.
ಸಾಂಸ್ಕೃತಿಕ ಸಂಘಟಕ ವಿಜಯಕುಮಾರ ತೇಗಲತಿಪ್ಪಿ ಮಾತನಾಡಿ, ಸಮಾಜದಲ್ಲಿರುವ ಕೆಳ ಹಂತದಲ್ಲಿರುವ ಬಡವರು, ನಿರ್ಗತಿಕರು, ಅಸಹಾಯಕರಿಗೆ ನೆರವು ಒದಗಿಸುವ ಕಾರ್ಯ ಉಳ್ಳವರು ಮಾಡಬೇಕು. ಆಶಾ ಕಾರ್ಯಕರ್ತೆಯರು ಸಹ ಗಂಡ-ಮಕ್ಕಳು, ಕುಟುಂಬವನ್ನು ಹೊಂದಿದ್ದಾರೆ. ಆದರೂ ಸಹ ತಮ್ಮ ಯಾವ ಕುಟುಂಬಕ್ಕೆ ಲಕ್ಷ್ಯ ವಹಿಸದೇ ಜನರ ಆರೋಗ್ಯ ರಕ್ಷಣೆಗಾಗಿ ಈ ಕೊರೊನಾ ಸಂದರ್ಭದಲ್ಲಿ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ನಿಜಕ್ಕೂ ಅವರ ಸೇವೆಯನ್ನು ಸರ್ವರೂ ಅಭಿನಂದಸಲೇಬೇಕು ಎಂದರು.
ಜಿಲ್ಲಾ ವೀರಶೈವ ಸಮಾಜದ ಉಪಾಧ್ಯಕ್ಷ ಕಲ್ಯಾಣಪ್ಪ ಪಾಟೀಲ ಮಳಖೇಡ ಅಧ್ಯಕ್ಷತೆ ವಹಿಸಿದ್ದರು. ಹೆಚ್ಕೆಸಿಸಿಐ ಪ್ರಧಾನ ಕಾರ್ಯದರ್ಶಿ ಶರಣು ಪಪ್ಪಾ, ಸಂಶೋಧಕ ಮುಡುಬಿ ಗುಂಡೇರಾವ, ಜಿಲ್ಲಾ ವೀರಶೈವ ಸಮಾಜ ಅಧ್ಯಕ್ಷ ಡಾ.ಅರುಣಕುಮಾರ ಪಾಟೀಲ, ಬಸವೇಶ್ವರ ಸಹಕಾರ ಬ್ಯಾಂಕಿನ ನಿರ್ದೇಶಕಿ ಸುಶೀಲಾಬಾಯಿ ಡಿ.ವಿ.ಪಾಟೀಲ, ಶಿವರಾಜ್ ಅಂಡಗಿ, ಮಹಾಂತೇಶ ಪಾಟೀಲ, ಪ್ರಶಾಂತ ಗುಡ್ಡಾ, ಅಶ್ವಿನ್ ಸಂಕಾ, ಶಿವಾನಂದ ಹೊನಗುಂಟಿ, ಮಹೇಶ್ವರಿ ವಾಲಿ, ನಾಗರಾಜ ಹೆಂಬಾಡಿ, ಮಾಲಾ ದಣ್ಣೂರ, ಮಾಲಾ ಕಣ್ಣಿ, ವೈಶಾಲಿ ನಾಟೀಕಾರ, ಕವಿತಾ ಕಾವಳೆ, ಯಶೋಧಾ ಕಟಕೆ, ರೇಣುಕಾ ಸರಡಗಿ, ವೀರಣ್ಣಗೌಡ ಪಾಟೀಲ, ಶರಣರಾಜ್ ಛಪ್ಪರಬಂದಿ, ಮಂಜುನಾಥ ಕಂಬಳಿಮಠ, ಅಣವೀರ ಪಾಟೀಲ, ಶಾರದಾ ಹೊಸಮನಿ, ಪ್ರಭವ ಪಟ್ಟಣಕರ್, ಶಿವಾನಂದ ಮಠಪತಿ, ಪ್ರಸನ್ನ ವಾಂಜರಖೇಡೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕೊರೊನಾದ ಸಂಕಷ್ಟದ ದಿನಗಳಲ್ಲಿ ನಾನಾ ರೀತಿಯ ನೆರವು ನೀಡಿದ ಅನೇಕ ಸಮಾಜ ಸೇವಕರನ್ನು ಇದೇ ಸಂದರ್ಭದಲ್ಲಿ ವಿಶೇಷವಾಗಿ ಗೌರವಿಸಲಾಯಿತು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…