ಬಿಸಿ ಬಿಸಿ ಸುದ್ದಿ

ಅಸಂಘಟಿತ ಕಾರ್ಮಿಕರಿಗೆ 2000 ರೂ.ಗಳ ಆರ್ಥಿಕ ನೆರವು: ಜುಲೈ 31ವರೆಗೆ ಅವಧಿ ವಿಸ್ತರಣೆ

ಕಲಬುರಗಿ: ಕೋವಿಡ್ ಎರಡನೇ ಅಲೆಯ ಲಾಕ್‍ಡೌನ್ ಪರಿಣಾಮ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಅಸಂಘಟಿತ ಕಾರ್ಮಿಕರಿಗೆ ರಾಜ್ಯ ಸರ್ಕಾರವು ಒಂದು ಬಾರಿ 2000 ರೂ.ಗಳ ಆರ್ಥಿಕ ನೆರವು ನೀಡಲಾಗುತ್ತಿದೆ. ಜಿಲ್ಲೆಯ ಅರ್ಹ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ http://sevasindhu.karnataka.gov.in ಮೂಲಕ ಜುಲೈ 31 ರೊಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ಕಲಬುರಗಿ ಉಪವಿಭಾಗದ ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಸಂಘಟಿತ ವರ್ಗದ ಕಾರ್ಮಿಕರಾದ ಅಗಸರು, ಕ್ಷೌರಿಕರು, ಗೃಹ ಕಾರ್ಮಿಕರು (ಮನೆ ಕೆಲಸ), ಟೈಲರ್‍ಗಳು, ಮೆಕ್ಯಾನಿಕ್, ಚಿಂದಿ ಆಯುವವರು, ಹಮಾಲರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು ಹಾಗೂ ಭಟ್ಟಿ ಕಾರ್ಮಿಕರು ಅರ್ಜಿ ಸಲ್ಲಿಸಬಹುದಾಗಿದೆ.

ಯೋಜನೆ ಕುರಿತು ಮತ್ತು ಅರ್ಜಿ ಸಲ್ಲಿಸಲು ಮಾರ್ಗದರ್ಶನಕ್ಕಾಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೇವಾ ಕೇಂದ್ರಗಳು, ವಾರ್ಡ್ ಮಟ್ಟದ ಸೇವಾ ಕೇಂದ್ರಗಳು (ಸಿ.ಎಸ್.ಸಿ.), ಹಿರಿಯ ಕಾರ್ಮಿಕ ನಿರೀಕ್ಷಕರು, ಕಾರ್ಮಿಕ ನಿರೀಕ್ಷಕರು, ಕಾರ್ಮಿಕ ಅಧಿಕಾರಿಗಳ ಕಚೇರಿಗಳಿಗೆ ಅಥವಾ ಕಾರ್ಮಿಕ ಸಹಾಯವಾಣಿ ಸಂಖ್ಯೆ 155214 ಅಥವಾ ಸೇವಾ ಸಿಂಧು ಸಂಸ್ಥೆಯ ಮೊಬೈಲ್ ಸಂಖ್ಯೆಗಳಾದ 8088304855, 6361799796, 9380204364 ಹಾಗೂ 9380206704 ಗಳಿಗೆ ಪ್ರತಿದಿನ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ರಜಾದಿನಗಳನ್ನು ಹೊರತುಪಡಿಸಿ ಸಂಪರ್ಕಿಸಬಹುದಾಗಿದೆ.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

2 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

13 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

13 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

15 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

15 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

15 hours ago