ಯಾದಗಿರ: ಭಾರತೀಯರು ಪ್ರಕೃತಿಯ ಕೊಡುಗೆಯನ್ನು ಅತ್ಯಂತ ಪವಿತ್ರವೆಂದು ಪರಿಗಣಿಸುತ್ತೇವೆ. ಜೂನ್ 21 ವರ್ಷದಲ್ಲಿನ ಅತ್ಯಂತ ಹೆಚ್ಚು ಹಗಲುಳ್ಳ ದಿನ, ಉತ್ತರ ಗೋಳಾರ್ಧದ ಅತಿ ಉದ್ದದ ಹಾಗೂ ದಕ್ಷಿಣ ಗೋಳಾರ್ಧದ ಅತಿ ಚಿಕ್ಕ ದಿನವನ್ನು ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಆಯ್ಕೆ ಮಾಡಲಾಗಿದೆ. ಪ್ರತಿ ವರ್ಷ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಬಹಳ ವಿಜೃಂಬಣೆಯಿಂದ ಆಚರಿಸುತ್ತಿದ್ದು, ಪ್ರಸ್ತುತ ಮಹಾಮಾರಿ ಕರೋನಾ ವೇಗವಾಗಿ ಹರಡುತ್ತಿರುವ ಕಾರಣದಿಂದ ಈ ವರ್ಷ ‘ಮನೆಯಲ್ಲೇ ಇದ್ದು, ಯೋಗವನ್ನು ಆಚರಿಸಿ’ ಎನ್ನುವ ಘೋಷ ವಾಕ್ಯದೊಂದಿಗೆ ಮನೆಯಿಂದಲೇ ಯೋಗ ಕಾರ್ಯಕ್ರಮ ಆಚರಿಸಲು ಭಾರತ ಸರಕಾರದ ಆಯುಷ ಮಂತ್ರಾಲಯ ಸೂಚಿಸಿದೆ.
ಹಣದ ಸಂಪತ್ತಿಗಿಂತ ಆರೋಗ್ಯ ಸಂಪತ್ತು ಮುಖ್ಯ. ಆರೋಗ್ಯ ಸಂಪತ್ತಿಗಾಗಿ ಯೋಗಾಸನ ಮಾಡುವುದು ಅಗತ್ಯವಾಗಿದೆ. ದುರಾಲೋಚನೆ ದೂರವಾಗಿ, ಉತ್ತಮ ಯೋಚನೆಗಳೊಂದಿಗೆ ಸ್ವಾಸ್ಥ್ಯ ಸಮಾಜ ನಿರ್ಮಿಸಬಹುದು. ಸರಕಾರದ ಮಾರ್ಗಸೂಚಿಯಂತೆ 7ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸುರಪುರ ತಾಲುಕಿನ ಯಾಳಗಿ ಗ್ರಾಮದ ಸಮಾಜ ಸೇವಕ ಹಾಗುಹ ಡಿಸೆಬಲ್ಡ ಹೆಲ್ಪಲೈನ್ ಪೌಂಡೆಶನನ ರಾಜ್ಯ ಸಂಯೋಜಕ ಬಸವರಾಜ ವಾಯ್. ಹೆಳವರ ಅವರ ಮನೆಯ ಮಾಳಿಗೆಯ ಮೇಲೆ ಪುಟ್ಟ ಮಕ್ಕಳು ಮತ್ತು ಕುಟುಂಬ ಸದಸ್ಯರೊಂದಿಗೆ ಸರಳವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾನಪ್ಪ ಹೆಳವರ, ಭೀಮಣ್ಣ ಹೆಳವರ, ಯಲ್ಲಪ್ಪ ಹೆಳವರ, ವಿದ್ಯಾಶ್ರಿ, ರೇಣುಕಾ, ರಾಮವ್ವ, ಶಂಕ್ರಮ್ಮ, ಲಕ್ಷ್ಮೀಬಾಯಿ, ಅಕ್ಷಯಕುಮಾರ, ಅವಿನಾಶ, ಶ್ರೀಕಾಂತ, ಆಂಜನೇಯ, ಚೇತನ್, ಸುದಿಕ್ಷಾ, ಸುಪ್ರೀತ, ಶಿವಶರಣ ಗೋವಾ, ನವೀನ್, ಸಮೀಕ್ಷಾ ಮತ್ತು ಇನ್ನಿತರರಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…