ಸುರಪುರ: ಪತ್ರಕರ್ತರ ಯಾವುದೇ ಬೇಡಿಕೆಗಳಿದ್ದರು ಅವುಗಳನ್ನು ಈಡೇರಿಸುವ ಕೆಲಸ ಮಾಡುವೆನು ಎಂದು ಕರ್ನಾಟಕ ನಗರ ನೀರು ಸರಬರಾಜು ಮಂಡಳಿ ಅಧ್ಯಕ್ಷರು ಹಾಗು ಶಾಸಕ ರಾಜುಗೌಡ ತಿಳಿಸಿದರು.
ನಗರದ ತಮ್ಮ ನಿವಾಸದಲ್ಲೀ ಭೇಟಿ ಮಾಡಿದ ಕರ್ನಾಟಕ ಜರ್ನಲಿಸ್ಟ್ಸ್ ಯೂನಿಯನ್ ವತಿಯಿಂದ ಸಲ್ಲಿಸಿದ ಮನವಿಯನ್ನು ಸ್ವೀಕರಿಸಿ ಮಾತನಾಡಿ,ಪತ್ರಿಕಾ ಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.ಅಲ್ಲದೆ ಕೆಜೆಯು ಸಂಘಟನೆಯ ಕಾರ್ಯಾಲಯಕ್ಕೆ ಕೋಣೆಯನ್ನು ಒದಗಿಸುವಂತೆ ಸಲ್ಲಿಸಿದ ಮನವಿಗೆ ಸೂಕ್ತವಾಗಿ ಸ್ಪಂಧಿಸಿ,ನಿಮ್ಮ ಮನವಿಯನ್ನು ಪುರಸ್ಕರಿಸಿ ಶೀಘ್ರದಲ್ಲಿಯೆ ತಮಗೆ ಕಾರ್ಯಾಲಯಕ್ಕೆ ಕೋಣೆಗಳ ಒದಗಿಸುವುದಾಗಿ ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ಕೆಜೆಯು ತಾಲೂಕು ಅಧ್ಯಕ್ಷ ರಾಜು ಕುಂಬಾರ ಮಾತನಾಡಿ,ತಾವು ನಮ್ಮ ಕೆಜೆಯು ಮನವಿಗೆ ಸ್ಪಂಧಿಸಿ ಕಳೆದ ವರ್ಷದ ಕೋವಿಡ್ ಸಂದರ್ಭದಲ್ಲಿ ಮೃತರಾಗಿದ್ದ ಮೂವರು ಪತ್ರಕರ್ತರಿಗೆ ವೈಯಕ್ತಿಕವಾಗಿ ತಲಾ ೫೦ ಸಾವಿರ ರೂಪಾಯಿಗಳ ನೆರವು ನೀಡುವ ಜೊತೆಗೆ ಸರಕಾರದಿಂದಲೂ ಮುಖ್ಯಮಂತ್ರಿಗಳಿಗೆ ಮನವಿ ಮಾಡಿ ತಲಾ ಮೂರು ಲಕ್ಷ ರೂಪಾಯಿಗಳ ಪರಿಹಾರ ಕೊಡಿಸುವಲ್ಲಿ ತಾವು ತೋರಿದಿ ಪತ್ರಕರ್ತರೆಡೆಗಿನ ಕಾಳಜಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ನಂತರ ಕೆಜೆಯುನ ಬೇಡಿಕೆಗಳುಳ್ಳ ಮನವಿಯನ್ನು ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಕೆಜೆಯು ತಾಲೂಕು ಉಪಾಧ್ಯಕ್ಷ ಮಲ್ಲು ಗುಳಗಿ ಪ್ರಧಾನ ಕಾರ್ಯದರ್ಶಿ ಪರಶುರಾಮ ಮಲ್ಲಿಬಾವಿ ಖಜಾಂಚಿ ಮಹಾದೇವಪ್ಪ ಬೊಮ್ಮನಹಳ್ಳಿ ಮನಮೋಹನ ಪ್ರತಿಹಸ್ತ ಪುರುಷೋತ್ತಮ ದೇವತ್ಕಲ್ ಕಲೀಂ ಫರೀದಿ ಮುರುಳಿಧರ ಅಂಬುರೆ ಮದನಲಾಲ ಕಟ್ಟಿಮನಿ ಶ್ರೀಮಂತ ಛಲುವಾದಿ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…