ಬಿಸಿ ಬಿಸಿ ಸುದ್ದಿ

ಸಿಟಿಜನ್ ಕ್ಲಬ್ ವತಿಯಿಂದ ಸಾರ್ವಜನಿಕರಿಗೆ ಉಚಿತ ಕೋವಿಡ್ ಲಸಿಕೆ

ಶಹಾಬಾದ: ನಗರದ ಸಹರಾ ಸಭಾಂಗಣದಲ್ಲಿ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಸಿಟಿಜನ್ ಕ್ಲಬ್ ಶಹಾಬಾದ ವತಿಯಿಂದ ಉಚಿತ ಕೋವಿಡ್ ಲಸಿಕಾ ಕಾರ್ಯಕ್ರಮವನ್ನು ಸಾರ್ವಜನಿಕರಿಗಾಗಿ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಬ್ದುಲ್ ರಹೀಮ್ ಮಾತನಾಡಿ, ೧೮ ವ? ಮೇಲ್ಪಟ್ಟವರಿಗೆ  ಸಿಟಿಜನ್ ಕ್ಲಬ್ ಸದಸ್ಯರ ಸಹಕಾರದೊಂದಿಗೆ ಒಂದು ದಿನದ ಉಚಿತ ಕೋವಿಡ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, ಸಾರ್ವಜನಿಕರು ಬಂದು ಲಸಿಕೆ ಪಡೆಯಬಹುದು. ಲಸಿಕೆ ಪಡೆಯುವವರು ಸಾಮಾಜಿಕ ಅಂತರ ಕಾಪಾಡಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಅದರಲ್ಲೂ ಎರಡನೇ ಡೋಸ್ ಪಡೆಯುವವರಿಗೆ ಮೊದಲ ಆದ್ಯತೆ ನೀಡಲಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡೆಸಿಕೊಳ್ಳಬೇಕು ಎಂದು ಹೇಳಿದರು.

ಸಿಟಿಜನ್ ಕ್ಲಬ್‌ನ ಅಧ್ಯಕ್ಷ ಯಾಸಿನ್ ಹುಸೇನ್ ಚಿಟ್ ಮಾತನಾಡಿ, ಮಾಸ್ಕ್ ಕಡ್ಡಾಯವಾಗಿ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಅನ್ ಲಾಕ್ ಮಾಡಿದ್ದಾರೆ.ಕೊರೊನಾ ಬರೋದಿಲ್ಲ ಎಂದು ಅನಾವಶ್ಯಕವಾಗಿ ತಿರುಗಾಡಬೇಡಿ.ಮೊದಲು ಮೊದಲನೇ ಹಾಗೂ ಎರಡನೇ ಲಸಿಕೆಯನ್ನು ಪಡೆದುಕೊಳ್ಳುವವರು ಮುಂದೆ ಬನ್ನಿ. ಕೊರೊನಾ ಹೋಗಲಾಡಿಸಲು ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ.ಯಾವುದೇ ರೀತಿ ಅಸಡ್ಡೆ ತೋರದಿರಿ ಎಂದು ಮನವಿ ಮಾಡಿದರು.

ಆರೋಗ್ಯ ಇಲಾಖೆಯ ಡಾ.ಖತೀಜಾ, ಡಾ.ಶಂಕರ,ಡಾ.ದಶರಥ ಜಿಂಗಾಡೆ, ಆರೋಗ್ಯ ನಿರೀಕ್ಷಣಾ ಅಧಿಕಾರಿ ಯುಸೂಫ ನಾಕೇದಾರ, ಸಂಜಯ ರಾಠೋಡ, ರಾಹುತರಾಯ, ಪ್ರಕಾಶ, ಸಂಧ್ಯಾರಾಣಿ, ವಾಣೀಶ್ರೀ, ಜಯಶ್ರೀ, ವಿಜಯಲಕ್ಷ್ಮಿ, ಪದ್ಮಾವತಿ, ಸಿಟಿಜನ್ ಕ್ಲಬ್‌ನ ಉಪಾಧ್ಯಕ್ಷ ಜಮೀರ್ ಬೇಗ್, ಸಹರಾ ಇಬ್ರಾಹಿಂ ಸೇಠ ಸರ್ವ ಸದಸ್ಯರು ಇದ್ದರು.

ನಗರದ ವಿವಿಧ ಪ್ರದೇಶಗಳಾದ ಸಹರಾ ಸಭಾಂಗಣ ಹಳೆಶಹಾಬಾದ, ಅಶೋಕ ನಗರ,ಪಠಾಣ ಗಲ್ಲಿ, ಸಮುದಾಯ ಆರೋಗ್ಯ ಕೇಂದ್ರದಲ್ಲಿ ಲಸಿಕಾ ಅಭಿಯಾನ ನಡೆಸಿ ಸುಮಾರು ೫೦೮ ಜನರಿಗೆ ಲಸಿಕೆ ನೀಡಲಾಯಿತು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

6 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

16 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

16 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

16 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago