ಕಲಬುರಗಿ: ಕಲಬುರಗಿಯ ಲೋಕಸಭಾ ಸದಸ್ಯರಾದ ಡಾ. ಉಮೇಶ್ ಜಾಧವ್ ಅವರನ್ನು ಕೇಂದ್ರ ಮಂತ್ರಿ ಮಂಡಲದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ನಿರ್ದೇಶಕರಾದ ಸದ್ದಾಮ್ ವಜೀರಗಾವ್ ಒತ್ತಾಯಿಸಿದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೋರಡಿಸಿರುವ ಅವರು ರಾಜ್ಯಕ್ಕೆ ಮೂರು ಸಚಿವ ಸ್ಥಾನ ನೀಡಿದ್ದು, ಅದರಲ್ಲಿ ರೈಲ್ವೆ ಸಚಿವರಾಗಿದ್ದ ದಿ. ಸುರೇಶ್ ಅಂಗಡಿ ಅವರು ನಿಧನರಾಗಿದ್ದರಿಂದ ಅವರ ಸ್ಥಾನ ತುಂಬಲು ನುರಿತ ರಾಜಕಾರಣಿ, ಕಲಬುರಗಿ ಜಿಲ್ಲೆಯಲ್ಲಿ ಹಗಲಿರುಳು ಸಂಚರಿಸುತ್ತಾ ಜನರ ಸೇವೆ ಮಾಡುತ್ತಿರುವ ಡಾ. ಉಮೇಶ್ ಜಾಧವ್ ಅವರು ಅರ್ಹರಾಗಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಇನ್ನಷ್ಟು ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲು ಸಂಸದರಾದ ಡಾ. ಉಮೇಶ್ ಜಾಧವ್ ಸೂಕ್ತ ವ್ಯಕ್ತಿಯಾಗಿದ್ದಾರೆ
ಈ ಭಾಗದ ಜನಪರ ಕಾಳಜಿವುಳ್ಳ ಸರಳ ಸಜ್ಜನ ರಾಜಕಾರಣಿ ಡಾ. ಉಮೇಶ್ ಜಾಧವ್ ಅವರನ್ನು ಕೂಡಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಮಂತ್ರಿ ಮಂಡಲದಲ್ಲಿ ಸಚಿವ ಸ್ಥಾನ ನೀಡಿ ಈ ಭಾಗದ ಜನರ ಬಹಳ ದಿನದ ಆಸೆ ಈಡೇರಿಸಬೇಕೆಂದು ಸದ್ದಾಮ್ ವಜೀರಗಾವ್ ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.