ಕಲಬುರಗಿ: ಇಂದು ಮಧ್ಯಾಹ್ನ 2 ಗಂಟೆಗೆ ನಗರದ ಡಿಎಚ್‌ಒ ಕ್ಯಾಂಪಸ್‌ನಲ್ಲಿ ಲಸಿಕಾ ಉಗ್ರಾಣ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಗುಲ್ಬರ್ಗ ಉತ್ತರ ಶಾಸಕರ ಹೆಸರನ್ನು ಉಲ್ಲೇಖಿಸಿಲ್ಲ!
ಹೌದು ಇಂದು ಮಧ್ಯಾಹ್ನ ೨ ಗಂಟೆಗೆ ಜಿಲ್ಲಾ ಉಸ್ತುವಾರಿ ಸಚುವ ಮುರುಗೇಶ ನಿರಾಣಿ ಈ ಕೇಂದ್ರವನ್ನು ಉದ್ಘಾಟಿಸಲಿದ್ದು, ಜಿಲ್ಲೆ ಹಾಗೂ ನೆರೆ ಜಿಲ್ಲೆಯ ಎಲ್ಲ ವಿಧಾನಸಭೆ ಹಾಗೂ ವಿಧಾನಪರಿಷತ್ ಸದಸ್ಯರ ಹೆಸರುಗಳು ಅಡಿಗಲ್ಲಿನ ಮೇಲೆ ಇದ್ದು, ಉತ್ತರ ಕ್ಷೇತ್ರದ ಶಾಸಕಿ ಖನಿಜ್ ಫಾತಿಮಾ ಅವರ ಹೆಸರು ಕಾಣುತ್ತಿಲ್ಲ.
ಈ ಕುರಿತಾಗಿ ಶಾಸಕಿ ಖನೀಜ್ ಫಾತಿಮಾ ಅವರನ್ನು ಸಂಪರ್ಕಿಸಿದರೆ, ನನಗೆ ಈ ಬಗ್ಗೆ ಏನೂ ತಿಳಿದಿಲ್ಲ. ಆಮಂತ್ರಣ ಪತ್ರಿಕೆಯಲ್ಲೂ ಹೆಸರಿಲ್ಲ. ಹೀಗಾಗಿ ನಾನು ಆ ಸಮಾರಂಭಕ್ಕೆ ತೆರಳುವುದಿಲ್ಲ ಎಂದು ಇ-ಮೀಡಿಯಾಲೈನ್ ಗೆ ತಿಳಿಸಿದರು.
ಪ್ರೋಟೋಕಾಲ್ ಅನುಸರಿಸದ ಕಾರಣ ಡಿಎಚ್‌ಒ ಮತ್ತು ಸಂಬಂಧಪಟ್ಟ ಎಂಜಿನಿಯರ್‌ಗಳನ್ನು ಅಮಾನತುಗೊಳಿಸಬೇಕು ಎಂದು ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆಗ್ರಹಿಸಿದ್ದಾರೆ.
ಆಮಂತ್ರಣ ಪತ್ರಿಕೆ ಹಾಗೂ ಅಡಿಗಲ್ಲಿನಲ್ಲಿ ಕಲಬುರಗಿ ಉತ್ತರ ಕ್ಷೇತ್ರದ ಶಾಸಕರ ಹೆಸರು ಕಣ್ತಪ್ಪಿನಿಂದ ಬಿಟ್ಟು ಹೋಗಿದೆ. ಆಮಂತ್ರಣ ಪತ್ರಿಕೆಯಲ್ಲಿ ಆದ ಲೋಪವನ್ನು ಸರಿಪಡಿಸಿಕೊಳ್ಳಲಾಗುವುದು. ಅಡಿಗಲ್ಲು ಸಮಾರಂಭದ ನಂತರ ಅದರಲ್ಲಿ ಶಾಸಕರ ಹೆಸರನ್ನು ಸೇರಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಶರಣಬಸಪ್ಪ ಗಣಜಲಖೇಡ ಸ್ಪಷ್ಟನೆ ನೀಡಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…