ಸುರಪುರ:ಕೊರೊನಾ ವಾರಿಯರ್ಸ್‌ಗೆ ಸನ್ಮಾನಿಸಿ ಗೌರವಿಸುವ ಜೊತೆಗೆ ದಿನಸಿ ಕಿಟ್‌ಗಳನ್ನು ವಿತರಿಸುವ ಮೂಲಕ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸೂಗುರೇಶ ವಾರದ ತಮ್ಮ ಜನುಮ ದಿನವನ್ನು ಆಚರಿಸಿಕೊಂಡರು.
ನಗರದ ಮರಗಮ್ಮ ದೇವಸ್ಥಾನದ ಆವರಣದಲ್ಲಿ ನಡೆದ ಜನುಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಯುವ ಮುಖಂಡ ರಾಜಾ ಶುಶಾಂತ ನಾಯಕ ಮಾತನಾಡಿ,ಕೊರೊನಾ ವಾರಿಯರ್ಸ್‌ಗಳಾಗಿ ಆಶಾ ಕಾರ್ಯಕರ್ತೆಯರ ಸೇವೆ ಅಮೋಘವಾಗಿದೆ.ಜೀವದ ಹಂಗನ್ನು ತೊರೆದು ಹಗಲಿರಳು ಸೇವೆ ಮಾಡಿದ ಆಶಾ ಕಾರ್ಯಕರ್ತೆಯರನ್ನು ಗುರುತಿಸಿ ಅವರಿಗೆ ಸನ್ಮಾನಿಸಿ ಗೌರವಿಸುವ ಜೊತೆಗೆ ದಿನಸಿ ಕಿಟ್‌ಗಳನ್ನು ವಿತರಿಸುವ ಮೂಲಕ ಸೂಗುರೇಶ ವಾರದ ಅವರು ಜನುಮ ದಿನ ಆಚರಿಸಿಕೊಂಡಿರುವುದು ಇತರರಿಗೆ ಮಾದರಿಯಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಸೂಗುರೇಶ ವಾರದ ಮಾತನಾಡಿ,ಅದ್ಧೂರಿಯಾಗಿ ಜನುಮ ದಿನ ಆಚರಿಸಿಕೊಳ್ಳುವ ಬದಲು ಬಡ ಜನರಿಗೆ ನೆರವಾಗುವುದರಲ್ಲಿ ತುಂಬಾ ಸಂತೋಷವಿದೆ.ಆದ್ದರಿಂದ ಇಂದು ೫೦ ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್ ವಿತರಿಸಿರುವುದು ಹಾಗು ಆಶಾ ಕಾರ್ಯಕರ್ತೆಯರ ಸೇವೆಗೆ ಗೌರವಿಸಿವುದು ಎಲ್ಲರ ಕರ್ತವ್ಯ ಎಂದು ಭಾವಿಸಿ ಸನ್ಮಾನಿಸಿ ಗೌರವಿಸಿರುವುದಾಗಿ ತಿಳಿಸಿದರು.ಇದೇ ಸಂದರ್ಭದಲ್ಲಿ ಅನೇಕ ಆಶಾ ಕಾರ್ಯಕರ್ತೆಯರು ಮಾತನಾಡಿ ಸೂಗುರೇಶ ವಾರದ ಅವರ ಸೇವೆಗೆ ಧನ್ಯವಾದ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಮಂಜುನಾಥ ಗುಳಗಿ ಮುಖೀದ ಕುಂಡಾಲೆ ಬಸ್ಸಯ್ಯಸ್ವಾಮಿ ಬೋನ್ಹಾಳ ಮಂಜುನಾಥಸ್ವಾಮಿ ತಿಮ್ಮಾಪುರ ಮಲ್ಲು ಖಾದಿ ಮಂಜುಳಾ ಈರಪ್ಪ ಸಜ್ಜನ್ ನಾಗರತ್ನಾ ನಾಗಲಿಕರ್ ಸೇರಿದಂತೆ ಅನೇಕರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…