ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ರೋಗದ 2ನೇ ಅಲೆಯ ಹರಡುವಿಕೆಯನ್ನು ತಡೆಗಟ್ಟಲು ಸರ್ಕಾರವು ವಿವಿಧ ಚಟುವಟಿಕೆಗಳು/ ಕೈಗಾರಿಕೆಗಳ ಮೇಲೆ ನಿರ್ಬಂಧ ವಿಧಿಸಿದ್ದು, ವಿದ್ಯುತ್ ಮಗ್ಗ ಹಾಗೂ ಪೂರಕ ಚಟುವಟಿಕೆಗಳ ಕೈಗಾರಿಕೆಗಳ ಉದ್ಯೋಗದಲ್ಲಿ ತೊಡಗಿರುವ ವಿದ್ಯುತ್ ಮಗ್ಗ ನೇಕಾರರು/ ಕೆಲಸಗಾರರು ಸಂಕಷ್ಟದಲ್ಲಿರುವುದನ್ನು ಮನಗಂಡು ಪವರ್‍ಲೂಮ್ ಹಾಗೂ ಪೂರಕ ಚಟುವಟಿಕೆಗಳಲ್ಲಿ ತೊಡಗಿರುವ ಕೆಲಸಗಾರರಿಗೆ ತಲಾ ರೂ.3000/- ಗಳಂತೆ ಆರ್ಥಿಕ ಪ್ಯಾಕೇಜ್‍ನ್ನು ಘೋಷಿಸಲಾಗಿದೆ.
ಈ ಯೋಜನೆಯಿಂದ ಸುಮಾರು 1.25 ಲಕ್ಷ ಕೆಲಸಗಾರರಿಗೆ ಅನುಕೂಲವಾಗಲಿದೆ. ಸರ್ಕಾರವು ಈಗಾಗಲೇ ಪರಿಹಾರ ನೀಡಲು ಆದೇಶವನ್ನು ಹೊರಡಿಸಿದ್ದು, ಪವರ್‍ಲೂಮ್ ವಲಯದ ಮತ್ತು ಪ್ರಿ- ಲೂಮ್ ವಲಯದ ಕೆಲಸಗಾರರಿಗೆ ತಲಾ ರೂ.3000/- ಗಳಂತೆ ಪರಿಹಾರಧನ ಪ್ರಸ್ತುತ ಫಲಾನುಭವಿಗಳಿಗೆ ತ್ವರಿತವಾಗಿ ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಪರಿಹಾರ ವಿತರಿಸಲಾಗುವುದು. ಉಳಿದ ಫಲಾನುಭವಿಗಳಿಗೆ ಪರಿಹಾರ ವಿತರಿಸಲು ಆನ್‍ಲೈನ್ ಸೇವಾಸಿಂಧು ಮೂಲಕ ಅರ್ಜಿಗಳನ್ನು ಪಡೆದು ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…