ಆಳಂದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ನೋಂದಾಯಿತ ಎಲ್ಲ ಅರ್ಹ ರೈತರಿಗೆ ಸಾಲ ಸಿಗುವಂತಾಗಬೇಕು ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಅಭಿಪ್ರಾಯಪಟ್ಟಿದ್ದಾರೆ.
ಡಿಸಿಸಿ ಬ್ಯಾಂಕ್‌ಗೆ ರಾಜ್ಯ ಸರ್ಕಾರ ೨೦೦ ಕೋ. ರೂ ಮಂಜೂರಿ ಮಾಡಿರುವ ಕ್ರಮವನ್ನು ಸ್ವಾಗತಿಸಿರುವ ಅವರು, ಆರ್ಥಿಕವಾಗಿ ನಷ್ಟದಲ್ಲಿರುವ ಬ್ಯಾಂಕ್‌ಗೆ ಪುನಶ್ಚೇತನ ನೀಡಲು ಸರ್ಕಾರ ಕೈಗೊಂಡಿರುವ ಕ್ರಮ ಶ್ಲಾಘನೀಯವಾಗಿದೆ ಎಂದಿದ್ದಾರೆ.
ನಿಗದಿತ ಗುರಿಯಂತೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕಾರ್ಯದರ್ಶಿಗಳು ಯಾವುದೇ ಪಕ್ಷಪಾತ ಧೋರಣೆ ಅನುಸರಿಸದೇ ನೋಂದಾಯಿತ ಎಲ್ಲ ಅರ್ಹ ಫಲಾನುಭವಿಗಳಿಗೆ ಸಾಲ ವಿತರಣೆ ಮಾಡಬೇಕು. ಯಾವುದೇ ಪ್ರಭಾವಿಗಳ ಮಾತಿಗೆ ಮನ್ನಣೆ ನೀಡಬಾರದು ಎಂದು ಹೇಳಿದ್ದಾರೆ.
ವಿವಿಧ ಕಾರಣಗಳಿಂದ ಜರ್ಝರಿತಗೊಂಡಿರುವ ರೈತರಿಗೆ ಮತ್ತೆ ಪುನ: ತೊಂದರೆ ಕೊಡುವ ಕೆಲಸವಾಗಬಾರದು ಈ ನಿಟ್ಟಿನಲ್ಲಿ ಅರ್ಹ ಎಲ್ಲ ರೈತರಿಗೆ ಸರ್ಕಾರದ ಸಾಲ ವಿತರಣೆಯ ಸೌಲಭ್ಯ ದೊರಕಬೇಕು ಈ ನಿಟ್ಟಿನಲ್ಲಿ ಎಲ್ಲಾ ರೈತರು ಸಾಲಕ್ಕಾಗಿ ಅರ್ಜಿ ಸಲ್ಲಿಸಬೇಕು. ಸಾಲ ನೀಡುವ ಸಂದರ್ಭದಲ್ಲಿ ವಿನಾಕರಣ ಯಾರಾದರೂ ಪ್ರಭಾವಿಗಳು ಅಥವಾ ಅಧಿಕಾರಿಗಳು ತೊಂದರೆ ನೀಡುವುದು ಕಂಡು ಬಂದರೆ ಕೂಡಲೇ ತಮ್ಮ ಗಮನಕ್ಕೆ ತರಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.