ಸುರಪುರ: ನಗರದ ಪ್ರಜಾಪಿತ ಬ್ರಹ್ಮಕುಮಾರಿ ದೇವತೀರ್ಥದಲ್ಲಿ ರಾಜಯೋಗಿನಿ ಮಾತಾ ಜಗದಂಬಾ ಸರಸ್ವತಿಯವರ ೫೬ನೇ ಸ್ಮೃತಿ ದಿನವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಆಶ್ರಮದ ಸಹೋದರಿ ರಾಗಿಣಿ ಅವರು ಮಾತನಾಡಿ,ಜಗದಂಬಾ ಸರಸ್ವತಿ ಮಾತೆಯವರು ಜನರಲ್ಲಿ ವಿಶ್ವ ಭಾತೃತ್ವವನ್ನು ಮೂಡಿಸಲು ಹಾಗು ಸಮರ್ಪಣಾ ಭಾವ ಹಾಗು ಯೋಗಿ ಜೀವನ ದರ್ಶನ ಮಾಡಿಸಿದ ಮತ್ತು ಸತ್ಯತೆಯ ಶಕ್ತಿಯ ಮಹತ್ವವನ್ನು ತಿಳಿಸಿಕೊಡುವ ಮೂಲಕ ತಮ್ಮ ಅನುಭಾವವನ್ನು ಎಲ್ಲರಿಗೂ ಧಾರೆ ಎರೆದವರು.ಅಂತಹ ಮಹಾ ಮಾತೆ ಜಗದಂಬಾ ಸರಸ್ವತಿ ಮಾತೆಯ ಸ್ಮೃತಿ ದಿನವನ್ನು ಇಂದು ಆಚರಿಸುವ ಮೂಲಕ ಅವರನ್ನು ನೆನೆಯುವುದು ಸಂತೋಷದ ಸಂಗತಿಯಾಗಿದೆ ಎಂದರು.
ನಂತರ ಸುರಪುರ ಉಪ ಕಾರಾಗೃಹದ ಹುಲಗೇಶ ಅವರು ಮಾತನಾಡಿ,ಭಾರತದಲ್ಲಿ ಸಂಸ್ಕೃತಿ ಮತ್ತು ಧಾರ್ಮಿಕ ಪರಂಪರೆಯನ್ನು ಎಲ್ಲರಲ್ಲಿ ಮೂಡಿಸುವ ಜೊತೆಗೆ ಪ್ರತಿಯೊಬ್ಬ ವ್ಯಕ್ತಿಗು ತಾನು ಯಾರು ಎನ್ನುವುದರ ಕುರಿತು ಅರಿವು ಮೂಡಿಸುವ ಕೆಲಸವನ್ನು ಪ್ರಜಾಪಿತ ಬ್ರಹ್ಮಕುಮಾರಿ ಆಶ್ರಮ ಮಾಡುವ ಮೂಲಕ ಎಲ್ಲರಲ್ಲಿ ಅರಿವಿನ ಜ್ಯೋತಿಯನ್ನು ಬೆಳಗಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.ನಂತರ ಆಶ್ರಮದ ವತಿಯಿಂದ ಹುಲಗೇಶ ಅವರನ್ನು ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್ ಸ್ವಯಂ ಸೇವಕರು ಹಾಗು ಕೊರೊನಾ ವಾರಿಯರ್ಸ್‌ಗಳಾದ ಸಚಿನ ಮತ್ತು ನಾಗರಾಜ ಮಕಾಶಿ ಅವರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…