ಕಲಬುರಗಿ: ಮರಗುತ್ತಿ ಗ್ರಾಮದವರಾದ ಸಬ್ ಇನ್ಸ್ಪೆಕ್ಟರ್ ಮಹಾದೇವ ಅವರು ಛತ್ತಿಸಗಡ್ ರಾಜ್ಯದ ಬಿಜಾಪುರ್ ಜಿಲ್ಲೆಯಲ್ಲಿ ನಡೆದ ನಕ್ಸಲ್ ವಿರುದ್ಧದ ಕಾರ್ಯಾಚರಣೆ ಯಲ್ಲಿ ಹುತಾತ್ಮರಾದ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಸಂತಾಪ ಸೂಚಿಸಿ ಶೋಕ ಸಂದೇಶ ರವಾನೆ ಮಾಡಿದ್ದಾರೆ.
ವೀರ ಯೋಧ ಮಹಾದೇವ ಅವರು ದಕ್ಷ ಹಾಗೂ ನಿಷ್ಠಾವಂತ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ದೇಶದ ರಕ್ಷಣೆಗಾಗಿ ತಮ್ಮ ಪ್ರಣವನ್ನೇ ಪಣವಾಗಿಟ್ಟು ಹೋರಾಡಿ ವೀರ ಮರಣವನ್ನು ಅಪ್ಪಿದ್ದಾರೆ. ಅವರ ತ್ಯಾಗ ಯೋಧನ ಬಲಿದಾನಕ್ಕೆ ನಾವೆಲ್ಲರೂ ಗೌರವ ಸಲ್ಲಿಸಬೇಕೆಂದು ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿ, ಹುತಾತ್ಮ ವೀರನ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ,
ಶ್ರೀಯುತರ ತ್ಯಾಗವನ್ನು ಕೊಂಡಾಡಿದ್ದಾರೆ. ಹುತಾತ್ಮ ಅಧಿಕಾರಿಯ ಕುಟುಂಬಕ್ಕೆ ರೂ 25 ಲಕ್ಷ ಪರಿಹಾರ ದೊರಕಿಸಿಕೊಡುವುದರ ಜೊತೆಗೆ ಇನ್ನಿತರ ಸೌಲಭ್ಯ ಒದಗಿಸಲು ಮುಖ್ಯಮಂತ್ರಿಗಳ ಜೊತೆಗೆ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ.