ಬಿಸಿ ಬಿಸಿ ಸುದ್ದಿ

ಕೊರೋನಾ ಮೂರನೇ ಅಲೆ ಎದುರಿಸಲು ಅಗತ್ಯ ಕ್ರಮಕ್ಕೆ ಆಗ್ರಹಿಸಿ ಸರ್ಕಾರಕ್ಕೆ ಶಾಸಕ ಪ್ರಿಯಾಂಕ್ ಖರ್ಗೆ ಪತ್ರ

ಕಲಬುರಗಿ: ರಾಜ್ಯ ಸರ್ಕಾರವೇ ನೇಮಿಸಿದ್ದ ಸಾಂಕ್ರಾಮಿಕ ನಿಯಂತ್ರಣ ಸಲಹಾ ಸಮಿತಿಯ ತಜ್ಞರಾದ ಡಾ. ದೇವಿಶೆಟ್ಟಿ ಅವರ ಪ್ರಕಾರ ಕೊರೋನಾ ಮೂರನೇ ಅಲೆಯು ಎರಡನೇ ಅಲೆಯಷ್ಟೇ ತೀವ್ರವಾಗಿ ಇರುತ್ತದೆ ಅಥವಾ ಅದಕ್ಕಿಂತ 30% ಅಧಿಕ ಪರಿಣಾಮಕಾರಿಯಾಗಿರುತ್ತದೆ. ಅಲ್ಲದೇ, ಮೂರನೇ ಅಲೆಯು ವಯಸ್ಕರು ಹಾಗೂ ವೃದ್ಧರಿಗಿಂತ ಮಕ್ಕಳ ಮೇಲೆಯೇ ಅತೀ ಹೆಚ್ಚಿನ ಪರಿಣಾಮ ಬೀರುವ ಸಾಧ್ಯತೆಯಿದ್ದು, ಇದನ್ನು ಎದುರಿಸಲು ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಮಾಜಿ ಸಚಿವರಾದ, ಶಾಸಕರಾದ ಹಾಗೂ ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ.

ಈ ಕುರಿತು ಸಿಎಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವರು, ಆರೋಗ್ಯ ಸಚಿವರು ಹಾಗೂ ಗಣಿ ಮತ್ತು ಭೂ ವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಪತ್ರ ಬರೆದಿರುವ ಅವರು ರಾಜ್ಯದಲ್ಲಿ ಒಟ್ಟು 6 ವರ್ಷದೊಳಗಿನ 4.43 ಲಕ್ಷ ಮಕ್ಕಳು ಅಪೌಷ್ಟಿಕತೆ ಸಮಸ್ಯೆ ಎದುರಿಸುತ್ತಿದ್ದಾರೆ. ಇಂತಹ ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇರುವ ಕಾರಣ ಕೋವಿಡ್‌ ಮೂರನೇ ಅಲೆಯು ಇವರಿಗೆ ಹೆಚ್ಚಿನ ಅಪಾಯ ತಂದೊಡ್ಡುವ ಸಾಧ್ಯತೆ ಇದೆ ಎಂಬುದು ತಜ್ಞರ ಅಭಿಪ್ರಾಯವಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಾಹಿತಿ ಪ್ರಕಾರ ಆರು ವರ್ಷದೊಳಗಿನ 34.74 ಲಕ್ಷ ಮಕ್ಕಳು ಅಂಗನವಾಡಿಗಳಲ್ಲಿ ದಾಖಲಾತಿ ಹೊಂದಿದ್ದಾರೆ. ಅವರಲ್ಲಿ ಶೇ 11.14 ರಷ್ಟು ಮಕ್ಕಳು ಅಪೌಷ್ಟಿಕತೆ ಸಮಸ್ಯೆ ಎದುರಿಸುತ್ತಿದ್ದಾರೆ.

ಮೂರನೇ ಅಲೆಗೆ ಮುನ್ನ ರಾಜ್ಯದಲ್ಲಿ ಅಪೌಷ್ಟಿಕತೆ ಹೊಂದಿರುವ ಮಕ್ಕಳನ್ನು ಗುರುತಿಸಿ, ಅವರಿಗೆ ಲಸಿಕೆ ನೀಡುವಷ್ಟೇ ಆದ್ಯತೆಯನ್ನು ಪೌಷ್ಟಿಕಾಂಶಯುಕ್ತ ಆಹಾರ ಒದಗಿಸಿ, ಅವರ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಕೆಲಸವನ್ನು ರಾಜ್ಯ ಸರ್ಕಾರವು ಮಾಡಬೇಕಿತ್ತು. ಆದರೆ, ರಾಜ್ಯ ಸರ್ಕಾರವು ಈ ಕುರಿತು ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ.

ಈಗಲೇ ಮಕ್ಕಳಿಗೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮಾತ್ರೆ ಹಾಗೂ flu Vaccineಗಳನ್ನ ನೀಡಿದರೆ, ಅದು ತನ್ನ ಕಾರ್ಯನಿರ್ವಹಿಸಲು 3 ರಿಂದ 4 ವಾರ ತೆಗೆದುಕೊಳ್ಳುತ್ತದೆ.

ಆದ್ದರಿಂದ, ನನ್ನ ಕ್ಷೇತ್ರ ಚಿತ್ತಾಪುರದಲ್ಲಿ ನಾನು ನನ್ನ ಸ್ವಂತ ಖರ್ಚಿನಲ್ಲಿ 5,000 ಕ್ಕೂ ಅಧಿಕ ಕುಟುಂಬದ ಮಕ್ಕಳನ್ನು ಗುರುತಿಸಿ, ಅವರಿಗೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಶಕ್ತಿ ಕಿಟ್ ಅನ್ನು ವಿತರಿಸಲಾಗಿದೆ.

ಆದ್ದರಿಂದ ರಾಜ್ಯ ಸರ್ಕಾರವು ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಅಪೌಷ್ಟಿಕ ಮಕ್ಕಳ ಜವಾಬ್ದಾರಿ ಹೊತ್ತು, ಆ ಮಕ್ಕಳನ್ನು ಗುರುತಿಸಿ, ಅವರ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ತಕ್ಷಣವೇ ಕಾರ್ಯಕ್ರಮವೊಂದನ್ನು ರೂಪಿಸಿಬೇಕೆಂದು ಅವರು ಬರೆದ ಪತ್ರದಲ್ಲಿ ಆಗ್ರಹಿಸಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

14 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago