ಬಿಸಿ ಬಿಸಿ ಸುದ್ದಿ

ಯುವಜನರು ಮಾದಕ ವಸ್ತುಗಳ ಸೇವನೆಯಿಂದ ದೂರವಿರಿ: ಡಾ. ಶರಣಬಸಪ್ಪ ಗಣಜಲಖೇಡ

ಕಲಬುರಗಿ: ಯುವಕರು ಮಾದಕ ವಸ್ತುಗಳ ಸೇವನೆಯಿಂದ ದೂರವಿದ್ದು, ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದು ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಶರಣಬಸಪ್ಪ ಗಣಜಲಖೇಡ ಅವರು ಹೇಳಿದರು.

ಕಲಬುರಗಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಕೇಂದ್ರ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆ ಕಲಬುರಗಿ ಇವುಗಳ ಸಹಯೋಗದೊಂದಿಗೆ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಅಂತರರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಇಂದಿನ ಯುವಕರು ಪ್ರಾರಂಭದಲ್ಲಿ ಮೋಜು ಮಸ್ತಿಗಾಗಿ ಮಾದಕ ವಸ್ತುಗಳ ಸೇವನೆ ಮಾಡಿ, ನಂತರ ಅದು ಚಟವಾಗಿ ಪರಿಣಮಿಸಿ ತಮ್ಮ ದೇಹ ಅನಿಯಂತ್ರಣಗೊಂಡು ಮಾದಕ ವಸ್ತುಗಳ ವ್ಯಸನಿಗಳಾಗುತ್ತಿದ್ದಾರೆ ಎಂದರು.

ಕಲಬುರಗಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ. ರಾಜಕುಮಾರ ಮಾತನಾಡಿ, ರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ಅರಿವಿನ ಕಾರ್ಯಕ್ರಮವನ್ನು ಜಿಲ್ಲಾ ಮಟ್ಟದಲ್ಲಿ ಹಂತ ಹಂತವಾಗಿ ಹಮ್ಮಿಕೊಂಡು ಮಾದಕ ವಸ್ತುಗಳ ಸೇವನೆ ಮಾಡುವವರ ಸಂಖ್ಯೆ ಕಡಿಮೆ ಮಾಡುವ ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು.

ಕಲಬುರಗಿ ಬಸವೇಶ್ವರ ಆಸ್ಪತ್ರೆಯ ಮನೋ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ. ಅಲೋಕ ಘನಾತೆ ಮಾತನಾಡಿ, ಉಪನ್ಯಾಸ ನೀಡುತ್ತಾ, 18 ರಿಂದ 44 ವರ್ಷವ ವಯೋಮಾನದ ಯುವಜನರು ಮಾದಕ ವ್ಯಸನಿಗಳಾಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದಲ್ಲದೇ, ಕನಿಷ್ಠ 3 ಕೋಟಿ ಜನ ಅಲ್ಕೊಹಾಲ್ ಸೇವನೆ ಮಾಡಿದರೆ 8 ಕೋಟಿ ಅನ್ಯ ಮಾದಕ ವಸ್ತುಗಳ ಸೇವನೆಗೆ ಒಳಗಾಗುತ್ತಿದ್ದಾರೆ. ಒಮ್ಮೆ ಮಾದಕ ವಸ್ತುವಿನ ಸೇವನೆಯ ಚಟಕ್ಕೆ ಬಿದ್ದ ವ್ಯಕ್ತಿಗೆ ಪದೇ ಪದೇ ಸೇವನೆ ಮಾಡಬೇಕೆಂಬ ಬಯಕೆಯಾಗುತ್ತದೆ. ಮಾದಕ ಸೇವನೆ ಬಿಟ್ಟ ನಂತರ ಆಗುವ ತೊಂದರೆಗಳಿಗೆ ಗಮನಹರಿಸಿ ಸೂಕ್ತ ಕೌನ್ಸಿಲಿಂಗ್ ಮಾಡುವ ಅವಶ್ಯಕತೆಯಿದೆ ಎಂದರು.

ಈ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಕಲಬುರಗಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಪಿ. ಎಸ್. ರಮೇಶ ಮಾತನಾಡಿ, ಮಾದಕ ಸೇವನೆಯಿಂದಾಗುವ ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರಾಗೃಹದ ಬಂದಿಗಳು ಮಾದಕ ವಸ್ತುಗಳ ಸೇವನೆಯಿಂದ ದೂರವಿದ್ದು, ಸಧೃಡವಾದ ಆರೋಗ್ಯ ಹೊಂದಿ ಕಾರಾಗೃಹದಿಂದ ಬಿಡುಗಡೆಯಾಗಬೇಕು. ಕಾರಾಗೃಹಕ್ಕೆ ಬಂದು ಮಾದಕ ವಸ್ತುಗಳ ಸೇವನೆಗೆ ತುತ್ತಾದ ಬಂದಿಗಳಿಗೆ ಕಾರಾಗೃಹದ ವೈದ್ಯಾಧಿಕಾರಿಗಳಿಂದ ತಪಾಸಣೆ ಮಾಡಿಸಿ ಅಂತಹ ಬಂದಿಗಳಿಗೆ 15 ದಿನಕ್ಕೊಮ್ಮೆ ಮಾನಸಿಕ ತಜ್ಞರನ್ನು ಕರೆಯಿಸಿ ಬಂದಿಗಳಿಗೆ ಕೌನ್ಸಿಲಿಂಗ್ ಮಾಡಿಸಿ ಈ ಚಟದಿಂದ ಮುಕ್ತಗೊಳಿಸಲು ಪೂರಕ ವಾತಾವರಣ ನಿರ್ಮಾಣ ಮಾಡಲು ಪ್ರಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಈ ಕಾರ್ಯಕ್ರಮದಲ್ಲಿ ಕಲಬುರಗಿ ಕೇಂದ್ರ ಕಾರಾಗೃಹದ ಹಿರಿಯ ವೈದ್ಯಾಧಿಕಾರಿ ಡಾ. ಬಸವರಾಜ ಕಿರಣಗಿ, ಕ್ರಾಂತಿ ದಿನಪತ್ರಿಕೆಯ ವರದಿಗಾರ ಬಸವರಾಜ, ಆರೋಗ್ಯ ಇಲಾಖೆಯ ಸಂತೋಷಿ ಘೂಳೆ, ಸುರೇಖಾ, ಜೈಲರ್‍ಗಳಾದ ಸುನಂದ ವಿ., ಸೈನಾಜ್ ಎಂ. ನಿಗೇವಾನ್, ಸರೋಜ ಎಸ್.ಟಿ., ಅಶೋಕ ಹೊಸಮನಿ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಶಿಕ್ಷಕರಾದ ನಾಗರಾಜ ಮುಲಗೆ ಕಾರ್ಯಕ್ರಮ ನಿರೂಪಿಸಿದರು. ಕಲಬುರಗಿ ಆರೋಗ್ಯ ಇಲಾಖೆ ನಾಗರಾಜ ಬಿರಾದಾರ ಸ್ವಾಗತಿಸಿದರು. ಜೈಲರ್ ಗೋಪಾಲಕೃಷ್ಣ ಕುಲಕರ್ಣಿ ವಂದಿಸಿದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

6 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

6 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

7 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

23 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago